ಮಗುವಿನಿಂದ ಮತ್ತೊಂದು ಮಗುವಿನ ಮೇಲೆ ಹಲ್ಲೆ: ಬೆಂಗಳೂರಿನ ಡೇ ಕೇರ್ ಸೆಂಟರ್​ಗೆ ಪೊಲೀಸ್, ಮಕ್ಕಳ ಹಕ್ಕುಗಳ ಆಯೋಗದಿಂದ ನೋಟೀಸ್

Spread the love

ಬೆಂಗಳೂರು: ಶಿಶುಪಾಲ‌ನಾ ಕೇಂದ್ರವೊಂದರಲ್ಲಿ ಮೂರು ವರ್ಷದ ಬಾಲಕ 2 ವರ್ಷದ ಬಾಲಕಿ ಮೇಲೆ ಮನಸೋ ಇಚ್ಛೆ ಹಲ್ಲೆ ನಡೆಸಿದ ಹಿನ್ನೆಲೆಯಲ್ಲಿ ಬೇಬಿ ಕೇರ್ ಸೆಂಟರ್​ಗೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಗೆ ಸುಬ್ರಮಣ್ಯನಗರ ಪೊಲೀಸರು ನೋಟಿಸ್​ ನೀಡಿದ್ದಾರೆ‌.

ಅಲ್ಲದೆ‌ ರಾಜ್ಯ ಮಕ್ಕಳ‌ ಹಕ್ಕುಗಳ ಆಯೋಗವು ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ.

ಎಷ್ಟು ವರ್ಷಗಳಿಂದ ಡೇ ಕೇರ್ ನಡೆಸುತ್ತಿದ್ದೀರಾ? ಶಿಕ್ಷಣ ಇಲಾಖೆಯಿಂದ ಅನುಮತಿ ಪಡೆದುಕೊಂಡಿದ್ದೀರಾ? ಮಕ್ಕಳ ಸುರಕ್ಷತೆಗೆ ಏನೆಲ್ಲಾ ಕ್ರಮ ಕೈಗೊಂಡಿದ್ದೀರಾ? ಎಂಬುದರ ಬಗ್ಗೆ ಡೇ ಕೇರ್ ಮಾಲೀಕರಿಗೆ ಪೊಲೀಸರು ನೋಟಿಸ್ ನೀಡಿದ್ದಾರೆ. ಸುಬ್ರಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಲ್ಲಸಂದ್ರದಲ್ಲಿ ಡೇ ಕೇರ್​ನಲ್ಲಿ ಎರಡು ವರ್ಷದ ಬಾಲಕಿ ಮೇಲೆ‌ ಮೂರು ವರ್ಷದ ಬಾಲಕ ಹಲ್ಲೆ ಮಾಡಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿತ್ತು‌.

ಘಟನೆಗೆ ಸಿಬ್ಬಂದಿ‌ ನಿರ್ಲಕ್ಷ್ಯವೇ ಕಾರಣ ಎಂದು ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಡೇ ಕೇರ್ ತಾತ್ಕಾಲಿಕ ಬಂದ್ ಮಾಡಲಾಗಿದೆ. ವಿಡಿಯೋ ವೈರಲ್ ಹಿನ್ನೆಲೆಯಲ್ಲಿ ಸುಬ್ರಮಣ್ಯಪುರ‌ ಪೊಲೀಸರು ಡೇ ಕೇರ್​ಗೆ ದೌಡಾಯಿಸಿ ಸಿಬ್ಬಂದಿಯಿಂದ ಮಾಹಿತಿ ಪಡೆದಿದ್ದಾರೆ.‌ ಅಲ್ಲದೆ ಬಾಲಕಿಯ ಪೋಷಕರಿಂದ ಹೇಳಿಕೆ ದಾಖಲಿಸಿಕೊಳ್ಳಲಾಗಿದೆ‌ ಎಂದು ಪೊಲೀಸರು ತಿಳಿಸಿದ್ದಾರೆ.

ಕೇರ್ ಸೆಂಟರ್​ನಲ್ಲಿ ಸಾಕಷ್ಟು ಮಕ್ಕಳಿದ್ದರು. ಕೊಠಡಿಯೊಂದರಲ್ಲಿ ಹಲ್ಲೆಗೊಳಗಾದ ಬಾಲಕಿ ಜೊತೆಗೆ ಬಾಲಕ ಸೇರಿ ಏಳು‌ ಮಕ್ಕಳಿದ್ದರು. ಮಗುವೊಂದು ಶೌಚಾಲಯಕ್ಕೆ ತೆರಳಲು ಹೋಗಬೇಕಾಗಿದ್ದರಿಂದ ಸಿಬ್ಬಂದಿ ಕರೆದುಕೊಂಡು ಹೋಗಿದ್ದರು‌. ಈ‌ ಮಧ್ಯೆ ಬಾಲಕ ಬಾಲಕಿಗೆ ಹೊಡೆದಿದ್ದ‌ನು.‌ ನಿರಂತರವಾಗಿ ಏಳು‌ ನಿಮಿಷಗಳ ಕಾಲ ಸೆರೆಯಾದ ವಿಡಿಯೋದಲ್ಲಿ ಹಲವು ಬಾರಿ ಹಲ್ಲೆ ಮಾಡಿದ್ದಾನೆ. ಪೋಷಕರು ಬಾಲಕಿಯನ್ನು ಮನೆಗೆ ಕರೆದೊಯ್ಯಲು ಬಂದಾಗ ಮುಖದ ಮೇಲೆ ಕೆನ್ನೆ ಹಾಗೂ ಕೈಗಳ ಮೇಲೆ ಗಾಯದ ಗುರುತು ಇರುವುದನ್ನು ಕಂಡಿದ್ದಾರೆ. ಇತರ‌ ಮಕ್ಕಳಿಂದ ಮಾಹಿತಿ ಪಡೆದಿದ್ದರು‌.‌ ಕೊಠಡಿಯಲ್ಲಿ ಅಳವಡಿಸಿದ್ದ ಸಿಸಿಟಿವಿ ಪರಿಶೀಲಿಸಿದಾಗ ಕೃತ್ಯ ಬೆಳಕಿಗೆ ಬಂದಿತ್ತು. ಮಗುವಿನ ಭವಿಷ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಹಿನ್ನೆಲೆಯಲ್ಲಿ ಪೋಷಕರು ಪೊಲೀಸ್ ಠಾಣೆಯಲ್ಲಿ ದೂರು‌ ನೀಡಿಲ್ಲ.

ಹುಡುಗಿ ಪಕ್ಕ ನಿಂತಿದ್ದಕ್ಕೆ ಯುವಕನ ಮೇಲೆ ಹಲ್ಲೆ: ಬಸ್​ ನಿಲ್ದಾಣದಲ್ಲಿ ಬಸ್​ಗಾಗಿ ಕಾಯುತ್ತಿದ್ದ ಹುಡುಗಿಯ ಪಕ್ಕದಲ್ಲಿ ವ್ಯಕ್ತಿಯೊಬ್ಬ ಬಂದು ನಿಂತಿದ್ದಕ್ಕಾಗಿ ಆತನ ಮೇಲೆ ಯುವಕರ ಗುಂಪೊಂದು ಹಲ್ಲೆ ನಡೆಸಿರುವ ಘಟನೆ ಇತ್ತೀಚೆಗೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ನಡೆದಿತ್ತು. ನಾಗೇಶ್​ ಎಂಬವರು ಹಲ್ಲೆಗೊಳಗಾದ ವ್ಯಕ್ತಿಯಾಗಿದ್ದು, ಹಲ್ಲೆ ಮಾಡಿದವರು ಮೇಲೆ ಗುಂಡ್ಲುಪೇಟೆ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಾಗೇಶ್​ ತಮ್ಮ ತಾಯಿಯನ್ನು ಆಸ್ಪತ್ರೆಗೆ ಚಿಕಿತ್ಸೆಗೆಂದು ಕರೆದುಕೊಂಂಡು ಹೋಗಿ, ಮನೆಗೆ ತೆರಳಲು ತಾಯಿ ಜೊತೆ ಬಸ್​ ನಿಲ್ದಾಣದಲ್ಲಿ ಬಂದು ಕಾಯುತ್ತಿದ್ದರು. ಅದೇ ವೇಳೆ ಅಲ್ಲಿಗೆ ಬಂದ ವಿದ್ಯಾರ್ಥಿಯೊಬ್ಬಳು ನಾಗೇಶ್​ ಪಕ್ಕ ನಿಂತಿದ್ದಳು. ಕಂಡು ಸಹಿಸದ ಯುವಕರ ಗುಂಪು ನಾಗೇಶ್​ ಅವರ ಮೇಲೆ ಹಲ್ಲೆ ಮಾಡಿತ್ತು ಎಂದು ಹೇಳಲಾಗಿದೆ.


Spread the love

About Laxminews 24x7

Check Also

ಕರೆಂಟ್ ಶಾಕ್ ಹೊಡೆದು ಅಣ್ಣ-ತಮ್ಮ ಇಬ್ಬರೂ ಸಾವು

Spread the love ವಿಜಯಪುರ: ದ್ರಾಕ್ಷಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ಪ್ರವಹಿಸಿ ಅಣ್ಣ-ತಮ್ಮ ಇಬ್ಬರೂ ಸಾವನ್ನಪ್ಪಿರುವ ದಾರುಣ ಘಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ