Breaking News

ವಿಧಾನಪರಿಷತ್ ಉಪ ಚುನಾವಣೆ: ಶೆಟ್ಟರ್‌ ಸೇರಿ ಮೂವರು ಕಾಂಗ್ರೆಸ್ ಅಭ್ಯರ್ಥಿಗಳು ಅವಿರೋಧ ಆಯ್ಕೆ

Spread the love

ಬೆಂಗಳೂರು : ವಿಧಾನ ಪರಿಷತ್ ಉಪಚುನಾವಣೆಗೆ ನಾಮಪತ್ರ ಸಲ್ಲಿಸಿದ್ದ ಮೂವರು ಕಾಂಗ್ರೆಸ್ ಅಭ್ಯರ್ಥಿಗಳು ಅವಿರೋಧವಾಗಿ ಅಯ್ಕೆಯಾಗಿದ್ದಾರೆ.

ಹಿರಿಯ ನಾಯಕ, ಮಾಜಿ ಸಿಎಂ ಜಗದೀಶ್ ಶೆಟ್ಟರ್, ತಿಪ್ಪಣ್ಣಪ್ಪ ಕಮಕನೂರ್ ಹಾಗೂ ಎನ್.ಎಸ್. ಬೋಸರಾಜು ಅವಿರೋಧವಾಗಿ ಆಯ್ಕೆಯಾದವರು. ನಾಮಪತ್ರ ವಾಪಸ್ ಪಡೆಯಲು ಇಂದು ಕೊನೆ ದಿನವಾಗಿತ್ತು. ಬಿಜೆಪಿ ಹಾಗೂ ಜೆಡಿಎಸ್‌ ಅಭ್ಯರ್ಥಿಗಳನ್ನು ಹಾಕಿರಲಿಲ್ಲ. ಹಾಗಾಗಿ, ಕಣದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಮಾತ್ರ ಇದ್ದರು.

ಈ ಹಿಂದೆ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ಬಾಬುರಾವ್ ಚಿಂಚನಸೂರು, ಆರ್.ಶಂಕರ್‌ ಅವರಿಂದ ತೆರವಾಗಿದ್ದ ಮೂರು ಸ್ಥಾನಗಳಿಗೆ ಜೂನ್ 30ರಂದು ಉಪಚುನಾವಣೆ ನಿಗದಿಯಾಗಿತ್ತು. ಕಾಂಗ್ರೆಸ್‌ನಿಂದ ಮೂವರು ಅಭ್ಯರ್ಥಿಗಳು ಮಾತ್ರ ಕಣದಲ್ಲಿ ಇದ್ದಿದ್ದರಿಂದ ವಿಧಾನಸಭೆ ಕಾರ್ಯದರ್ಶಿ, ಚುನಾವಣಾಧಿಕಾರಿ ಎಂ.ಕೆ. ವಿಶಾಲಾಕ್ಷಿ ಅವರು ಫಲಿತಾಂಶ ಪ್ರಕಟಿಸಿದ್ದಾರೆ. ಪಕ್ಷೇತರರಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದ ಪದ್ಮರಾಜನ್ ಅವರ ನಾಮಪತ್ರ ತಿರಸ್ಕೃತವಾಗಿತ್ತು. ಕೊನೆಯದಾಗಿ ಮೂವರು ಕಾಂಗ್ರೆಸ್‌ ಅಭ್ಯರ್ಥಿಗಳು ಮಾತ್ರ ಕಣದಲ್ಲಿ‌ದ್ದ ಕಾರಣ ವಿಧಾನ ಪರಿಷತ್ ಉಪ ಚುನಾವಣೆ ನಡೆಯದೇ ಮೂವರು ಅಭ್ಯರ್ಥಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

ಲಕ್ಷ್ಮಣ್ ಸವದಿ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಜಗದೀಶ್ ಶೆಟ್ಟರ್ ಅಭ್ಯರ್ಥಿಯಾಗಿದ್ದಾರೆ. ಆರ್. ಶಂಕರ್ ಅವರಿಂದ ತೆರವಾದ ಸ್ಥಾನಕ್ಕೆ ತಿಪ್ಪಣ್ಣಪ್ಪ ಕಮಕನೂರ್, ಬಾಬುರಾವ್ ಚಿಂಚನಸೂರ್‌ರಿಂದ ತೆರವಾದ ಕೇವಲ ಒಂದು ವರ್ಷದ ಸ್ಥಾನಕ್ಕೆ ಸಚಿವ ಬೋಸರಾಜು ಅವರಿಗೆ ಅವಕಾಶ ನೀಡಲಾಗಿದೆ. ಚಿಂಚನಸೂರ್ ಸದಸ್ಯತ್ವದ ಅವಧಿ 2024ರ ಜೂ.17 ವರೆಗೆ, ಶಂಕರ್ ಸದಸ್ಯತ್ವ 2026 ಜೂ.30ರವರೆಗೆ ಹಾಗೂ ಸವದಿ ಸದಸ್ಯತ್ವ ಅವಧಿ 2028ರ ಜೂನ್ 14ರವರೆಗೆ ಇತ್ತು. ಈ ಮೂರು ಸ್ಥಾನಗಳಿಗೆ ನಡೆಯುವ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳ ಅವಿರೋಧ ಆಯ್ಕೆಯಾಗಿದ್ದಾರೆ.

ಚುನಾವಣಾ ಪ್ರಕ್ರಿಯೆ: ವಿಧಾನ ಪರಿಷತ್​ ಮೂರು ಸ್ಥಾನಗಳ ಉಪಚುನಾವಣೆಗೆ ಜೂನ್ 13 ರಂದು ಅಧಿಸೂಚನೆ ಹೊರಡಿಸಲಾಗಿತ್ತು. ಜೂನ್ 20ರಂದು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕವಾಗಿತ್ತು. ಜೂನ್ 21ರಂದು ನಾಮಪತ್ರಗಳ ಪರಿಶೀಲನೆ ನಡೆಯದಿತ್ತು. ಜೂನ್​ 23 ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕವಾಗಿತ್ತು. ಇಂದು ಪಕ್ಷೇತರರಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದ ಪದ್ಮರಾಜನ್ ಅವರ ನಾಮಪತ್ರ ತಿರಸ್ಕೃತವಾದ ಹಿನ್ನಲೆ ಹಾಗು ಬೇರೆ ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸದ ಕಾರಣ ಅವಿರೋಧವಾಗಿ ಕಾಂಗ್ರೆಸ್ ಮೂವರು ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ.

 


Spread the love

About Laxminews 24x7

Check Also

ಸಾರ್ವಜನಿಕರಿಗೆ ಸಮಸ್ಯೆಯಾಗದಂತೆ ಕಾಮಗಾರಿ ಕೈಗೊಳ್ಳಿ :ಶಾಸಕ ರಾಜು ಶೆಠ್

Spread the love ಫ್ಲೈಓವರ್ ಕಾಮಗಾರಿಗೆ ಸಂಬಂಧಿಸಿದ ಪ್ರಮುಖ ಪ್ರದೇಶಗಳ ಪರಿಶೀಲನೆ ನಾಗರಿಕರ ಸುರಕ್ಷತೆ, ತುರ್ತು ಸೇವೆಗಳ ಪ್ರವೇಶ ಮಾರ್ಗ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ