Breaking News

ಮಣಿಪುರದಲ್ಲಿ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿಯನ್ನು ಹತೋಟಿಗೆ ತರಲು ರಕ್ಷಣಾ ಪಡೆಗಳ ಹರಸಾಹಸ

Spread the love

ನವದೆಹಲಿ: ಮಣಿಪುರದಲ್ಲಿ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿಯನ್ನು ಹತೋಟಿಗೆ ತರಲು ರಕ್ಷಣಾ ಪಡೆಗಳು ಹರಸಾಹಸ ಪಡುತ್ತಿವೆ.

ಈ ನಡುವೆ ಅಲ್ಲಿನ ಹಿಂಸಾಚಾರ ಕೊನೆಗೊಳಿಸಲು ಕೇಂದ್ರ ಸರ್ಕಾರ ನಿರಂತರ ಪ್ರಯತ್ನ ಮುಂದುವರೆಸಿದೆ. ಮಣಿಪುರದ ಪರಿಸ್ಥಿತಿಯನ್ನು ಚರ್ಚಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ರಾಷ್ಟ್ರರಾಜಧಾನಿಯಲ್ಲಿ ಸರ್ವಪಕ್ಷಗಳ ಸಭೆ ನಡೆಸಲಿದ್ದಾರೆ. ಇಂದು ಮಧ್ಯಾಹ್ನ 3 ಗಂಟಗೆ ಸಭೆ ಆರಂಭವಾಗಲಿದೆ.

ಮೇ 3 ರಿಂದ ಮಣಿಪುರದಲ್ಲಿ ಹಿಂಸಾಚಾರ ಘಟನೆಗಳು ನಡೆಯುತ್ತಿರುವುದರಿಂದ, ಶಾಂತಿ ಭಂಗ ತಡೆಯುವ ಪ್ರಯತ್ನದಲ್ಲಿ ರಾಜ್ಯ ಸರ್ಕಾರ ನಿರತವಾಗಿದೆ. ಸತತವಾಗಿ ನಡೆಯುತ್ತಿರುವ ವಿದ್ವಂಸಕ ಕೃತ್ಯಗಳನ್ನು ತಡೆಯುವ ಉದ್ದೇಶದಿಂದ ತಕ್ಷಣವೇ ಜಾರಿಗೆ ಬರುವಂತೆ ಜೂನ್ 25 ರವರೆಗೆ ಇಂಟರ್ನೆಟ್ ಮೇಲಿನ ನಿಷೇಧವನ್ನು ಇನ್ನೂ ಐದು ದಿನಗಳವರೆಗೆ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಮೇ 3 ರಂದು ಮಣಿಪುರದಲ್ಲಿ ಬುಡಕಟ್ಟು ವಿದ್ಯಾರ್ಥಿಗಳ ಒಕ್ಕೂಟ ಎಟಿಎಸ್‌ಯು, ಮೇಟಿ ಸಮುದಾಯವನ್ನು ಪರಿಶಿಷ್ಟ ಪಂಗಡ ಪಟ್ಟಿಗೆ ಸೇರಿಸುವ ಬೇಡಿಕೆಯನ್ನಿಟ್ಟು ಪ್ರತಿಭಟನೆ ನಡೆಸಿತ್ತು. ಈ ವೇಳೆ ಘರ್ಷಣೆಗಳು ಸಂಭವಿಸಿದ ಬಳಿಕ, ರಾಜ್ಯಾದ್ಯಂತ ಹಿಂಸಾಚಾರ ವ್ಯಾಪಿಸಿಕೊಂಡಿತ್ತು.

ಹಿಂಸಾಚಾರ ಕುರಿತು ಸೋನಿಯಾ ಕಳವಳ: ರಾಜ್ಯದಲ್ಲಿ ಶಾಂತಿ ಮತ್ತು ಸೌಹಾರ್ದತೆಗಾಗಿ ಪದೇ ಪದೇ ಮನವಿ ಮಾಡಿದ ಮೇಲೂ ಮಣಿಪುರದಲ್ಲಿ ಹಿಂಸಾಚಾರ ನಿಲ್ಲದೇ ಇರುವುದಕ್ಕೆ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಕಳವಳ ವ್ಯಕ್ತಪಡಿಸಿದ್ದಾರೆ. ಮಣಿಪುರದಲ್ಲಿ ನಡೆಯುತ್ತಿರುವ ಘಟನೆಗಳು “ನಮ್ಮ ರಾಷ್ಟ್ರದ ಆತ್ಮಸಾಕ್ಷಿಗೆ ಆಳವಾದ ಗಾಯವನ್ನು ಉಂಟುಮಾಡಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.


Spread the love

About Laxminews 24x7

Check Also

ಪ್ರಜಾಪ್ರಭುತ್ವ ಉಳಿವಿಗೆ ದೇಶದ ಜನ ಒಂದಾಗಿ: ಮಲ್ಲಿಕಾರ್ಜುನ ಖರ್ಗೆ

Spread the love ನವದೆಹಲಿ: ಚಳಿಗಾಲದ ಅಧಿವೇಶನದ ವೇಳೆ ಸಂಸತ್ತಿನ ಉಭಯ ಸದನಗಳಿಂದ 146 ಸಂಸದರನ್ನು ಅಮಾನತುಗೊಳಿಸಲಾಗಿದೆ. ಇದು ಕೇಂದ್ರ ಬಿಜೆಪಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ