Breaking News

ಪ್ರಮಾಣದ 2.29 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಎಲ್ಲಿಯೂ ಸಿಗುತ್ತಿಲ್ಲ: ಸಿಎಂ ಸಿದ್ದರಾಮಯ್ಯ

Spread the love

ಬೆಂಗಳೂರು: ರಾಜ್ಯ ಸರ್ಕಾರ ಎಲ್ಲ ಸಮಸ್ಯೆಗಳನ್ನು ಎದುರಿಸಲು ಶಕ್ತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಪೈಕಿ ಈಗಾಗಲೇ ಒಂದು ಯೋಜನೆಗೆ ಚಾಲನೆ ನೀಡಲಾಗಿದೆ. ಜುಲೈ ಒಂದರಿಂದ ಉಚಿತ ವಿದ್ಯುತ್ ಯೋಜನೆ ಜಾರಿಗೆ ಬರಲಿದೆ. ಅಕ್ಕಿಯನ್ನೂ ನೀಡಬೇಕೆಂಬ ಉದ್ದೇಶವಿದ್ದರೂ ಅಕ್ಕಿ ದೊರೆಯುತ್ತಿಲ್ಲ. ದೊರೆತರೂ ಹೆಚ್ಚಿನ ದರ ಕೇಳುತ್ತಾರೆ. 2.29 ಲಕ್ಷ ಮೆಟ್ರಿಕ್ ಟನ್ ಎಲ್ಲಿಯೂ ದೊರೆಯುತ್ತಿಲ್ಲ ಎಂದರು.

ವಿವಿಧ ರಾಜ್ಯದವರಿಂದ ಪೂರ್ಣ ಪ್ರಮಾಣದ ಅಕ್ಕಿ ದೊರೆಯುತ್ತಿಲ್ಲ. ಆದ್ದರಿಂದ ಬೇರೆ ಸರ್ಕಾರಿ ಏಜೆನ್ಸಿಗಳಿಂದ ಎನ್​​ಸಿಸಿಎಫ್ ನಿಂದ ಕೇಂದ್ರೀಯ ಭಂಡಾರ್, ನ್ಯಾಫೆಡ್ ಸಂಸ್ಥೆಗಳಿಂದ ದರಪಟ್ಟಿ ಪರಿಶೀಲಿಸಿ ಮಾತುಕತೆ ನಡೆದಿದೆ. ಇಂದು ಮಾತುಕತೆ ನಡೆಯಲಿದ್ದು, ಎಷ್ಟು ಅಕ್ಕಿ, ದರ ಎನ್ನುವ ಬಗ್ಗೆ ತೀರ್ಮಾನ ಮಾಡಲಾಗುವುದು. ಮುಕ್ತ ಮಾರುಕಟ್ಟೆಯಲ್ಲಿ ಅಕ್ಕಿ ಪಡೆಯಲು ಟೆಂಡರ್ ಕರೆಯಬೇಕು. ಜೋಳ, ರಾಗಿ ವಿತರಣೆ 6 ತಿಂಗಳಿಗಾಗುವಷ್ಟಿದೆ. 2 ಕೆಜಿಯಂತೆ ನೀಡಬಹುದು. ಇನ್ನೂ 3 ಕೆಜಿ ಅಕ್ಕಿ ನೀಡಬೇಕಿದೆ. ಇಡೀ ವರ್ಷ ನೀಡುವಷ್ಟು ರಾಗಿ, ಜೋಳವಿಲ್ಲ ಎಂದು ಸಿಎಂ ತಿಳಿಸಿದರು.

ರಾಜ್ಯದಲ್ಲಿ ಪ್ರಸ್ತುತ ಮಳೆ ಶುರುವಾಗಿದೆ. ಮಳೆ ಇನ್ನಷ್ಟು ವ್ಯಾಪಕವಾಗಿ ಆಗಬೇಕಿದೆ. ಮಳೆ ಬರಲಿ ಎಂದು ಪ್ರಾರ್ಥಿಸುತ್ತಿದ್ದು, ಬಿತ್ತನೆ ಈಗಾಗಲೇ ಕೆಲವೆಡೆ ಪ್ರಾರಂಭವಾಗಿದೆ. ಇನ್ನೂ ಕೆಲವೆಡೆ ಕುಡಿಯುವ ನೀರಿನ ಸಮಸ್ಯೆ ಇದ್ದು, ಈಗಾಗಲೇ 2 ಬಾರಿ ಜಿಲ್ಲಾಧಿಕಾರಿ ಹಾಗೂ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಸಭೆ ಕರೆದು ಸೂಚನೆಗಳನ್ನು ನೀಡಲಾಗಿದೆ ಎಂದು ತಿಳಿಸಿದರು.

 


Spread the love

About Laxminews 24x7

Check Also

543 ಸ್ಥಾನಗಳಲ್ಲೇ ಮಹಿಳೆಯರಿಗೆ 33% ಮೀಸಲಾತಿಯನ್ನು ತಕ್ಷಣವೇ ಜಾರಿಗೆ ತನ್ನಿ: ಮೋದಿಗೆ ಖರ್ಗೆ ಸವಾಲು

Spread the loveನವದೆಹಲಿ: ಪ್ರಸ್ತುತ ಇರುವ 543 ಲೋಕಸಭಾ ಸ್ಥಾನಗಳಲ್ಲೇ ಮಹಿಳೆಯರಿಗೆ 33% ಮೀಸಲಾತಿಯನ್ನು ತಕ್ಷಣವೇ ಜಾರಿಗೆ ತನ್ನಿ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ