Breaking News

ಗೃಹಲಕ್ಷ್ಮಿ ಯೋಜನೆಗೆ ಜೂನ್ 27ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭ – ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Spread the love

ಮೈಸೂರು: ಜೂನ್ 27ರಂದು ಸಚಿವ ಸಂಪುಟ ಸಭೆ ನಡೆಯಲಿದೆ. ಆ ಸಭೆಯಲ್ಲಿ ಗೃಹಲಕ್ಷ್ಮಿಗೆ ಅರ್ಜಿ ಸಲ್ಲಿಸಲು ಸಿದ್ಧಪಡಿಸಲಾಗಿರುವ ಆಯಪ್​ಅನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ತೋರಿಸಿ ನಂತರ ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಚಾಮುಂಡಿ ಬೆಟ್ಟದಲ್ಲಿ ನಾಡ ಅಧಿದೇವತೆ ಚಾಮುಂಡೇಶ್ವರಿಯ ದರ್ಶನ ಪಡೆದು ಬಳಿಕ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.

ಆಗಸ್ಟ್ 17ರ ನಂತರದಿಂದ ಫಲನಾಭವಿಗಳ ಹಣ ಹಾಕುತ್ತೇವೆ. ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಇರುವುದಿಲ್ಲ ಎಂದು‌‌ ಸಚಿವರು ಸ್ಪಷ್ಟಪಡಿಸಿದರು. ಅರ್ಜಿ ಸಲ್ಲಿಕೆಗೆ ಯಾವ ಶುಲ್ಕವೂ ಇರುವುದಿಲ್ಲ. ಮಧ್ಯವರ್ತಿಗಳ ಹಾವಳಿ ತಪ್ಪಿಸಲು ಆಯಪ್ ರಚಿಸಿದ್ದೇವೆ. ಒಂದು ರೂಪಾಯಿ ಹಣವನ್ನು ಅರ್ಜಿ ಸಲ್ಲಿಕೆಗೆ ಕೊಡಬೇಡಿ. ಅರ್ಜಿ ಸಲ್ಲಿಸಿ ಸ್ವೀಕೃತಿ ಪತ್ರ ಸಿಕ್ಕರೆ ಅಲ್ಲಿಗೆ ನೀವು ಫಲಾನುಭವಿ ಪಟ್ಟಿಗೆ ಸೇರುತ್ತೀರಾ. ಇದರಲ್ಲಿ ಯಾವುದೇ ಗೊಂದಲಗಳು ಬೇಡ. ಗೃಹ ಲಕ್ಷ್ಮಿ ಯೋಜನೆ ಜಾರಿಗೆ ಹಣಕಾಸಿನ ತೊಂದರೆ ಇದೆ ಎಂಬ ಮಾತಿಗೆ ಅರ್ಥ ಇಲ್ಲ. ಎಲ್ಲಾ ರೀತಿಯ ಸಂಪನ್ಮೂಲಗಳು ನಮ್ಮ ಬಳಿ ಇವೆ ಎಂದರು.

ಹರಕೆ ತೀರಿಸಿದ ಸಚಿವೆ: ಸಚಿವೆಯಾದ ನಂತರ ಮೊದಲ ಬಾರಿಗೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ಅವರಿಗೆ ಆಡಳಿತ ಮಂಡಳಿಯಿಂದ ಸಾಂಪ್ರದಾಯಿಕ ಸ್ವಾಗತ ನೀಡಲಾಯಿತು. ಆನಂತರ ನಾಡ ಅಧಿದೇವತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ಸಚಿವರು, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿ ಎಂದು ಚಾಮುಂಡಿ ತಾಯಿಯಲ್ಲಿ ಹರಕೆ ಕಟ್ಟಿಕೊಂಡಿದ್ದೆ. ಈಗ ಅಧಿಕಾರಕ್ಕೆ ಬಂದಿದ್ದೇವೆ. ಹೀಗಾಗಿ ಚಾಮುಂಡಿ ಬೆಟ್ಟಕ್ಕೆ ಬಂದು ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿ ಹರಕೆಯನ್ನು ತೀರಿಸಿದ್ದೇನೆ. ತಾಯಿಯಲ್ಲಿ ರಾಜ್ಯಕ್ಕೆ ಒಳ್ಳೆಯ ಮಳೆಯಾಗಲಿ‌ ಎಂದು ದೇವಿ ಮುಂದೆ ಸೆರೆಗೊಡ್ಡಿ ಬೇಡಿಕೊಂಡಿದ್ದೇನೆ ಎಂದು ಹೇಳಿದರು.

ಗೃಹಲಕ್ಷ್ಮಿ ಯೋಜನೆ ಜಾರಿಯನ್ನು ನಾನೇ ಸದ್ಯಕ್ಕೆ ತಡೆದಿದ್ದೇನೆ- ಡಿಸಿಎಂ: ಮತ್ತೊಂದೆಡೆ, ಸದಾಶಿವನಗರದ ತಮ್ಮ ನಿವಾಸದಲ್ಲಿ ನಿನ್ನೆ ಡಿಸಿಎಂ ಡಿ.ಕೆ. ಶಿವಕುಮಾರ್ ಮಾತನಾಡಿ, ಮುಖ್ಯಮಂತ್ರಿಗಳೊಂದಿಗೆ ಮಾತನಾಡಿ ಗೃಹಲಕ್ಷ್ಮಿ ಯೋಜನೆ ಜಾರಿಯನ್ನು ನಾನೇ ಸದ್ಯಕ್ಕೆ ತಡೆದಿದ್ದೇನೆ ಎಂದು ತಿಳಿಸಿದರು. ಗೃಹಜ್ಯೋತಿ ಯೋಜನೆ ಅರ್ಜಿ ವಿಚಾರವಾಗಿ ಸರ್ವರ್ ಸಮಸ್ಯೆ ನೋಡುತ್ತಿದ್ದೀರಿ. ಯೋಜನೆಯಲ್ಲಿ ಮನೆಯೊಡತಿಯೇ ಸ್ವಯಂ ಅರ್ಜಿ ಸಲ್ಲಿಸುವಂತೆ ಸರಳೀಕರಣ ಮಾಡಲಾಗುತ್ತಿದೆ. ಆನ್​ಲೈನ್ ಹಾಗೂ ಆಫ್‌ಲೈನ್ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಹೇಳಿದ್ದರು.

ಗ್ಯಾರಂಟಿ ಯೋಜನೆಗಳಿಗೆ ಆನ್​ಲೈನ್ ಅರ್ಜಿ ಸಲ್ಲಿಕೆಗೆ ಕೆಲವರು 200- 300 ರೂ. ಹಣ ವಸೂಲಿ ಮಾಡುತ್ತಿದ್ದಾರೆ. ಈ ಬಗ್ಗೆ ನಮಗೆ ದೂರು ಬಂದಿದೆ. ಈ ಅರ್ಜಿ ತುಂಬಲು ಏಜೆನ್ಸಿಗಳಾಗಲಿ ಅಥವಾ ಯಾರೇ ಲಂಚ ಪಡೆದರೆ ಅವರ ಪರವಾನಗಿ ರದ್ದಾಗುತ್ತದೆ. ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುತ್ತದೆ ಎಂಬ ಎಚ್ಚರಿಕೆ ನೀಡುತ್ತಿದ್ದೇನೆ. ಈ ಯೋಜನೆಗಳಿಗೆ ನೋಂದಣಿ ಮಾಡಿಕೊಳ್ಳಲು ಹೋಗುವವರು ಯಾರಿಗೂ ಲಂಚ ನೀಡುವ ಅಗತ್ಯವಿಲ್ಲ. ಯಾರಾದರೂ ಲಂಚ ಕೇಳಿದರೆ ಟೋಲ್ ಫ್ರೀ ಸಂಖ್ಯೆಗೆ ಕರೆ ಮಾಡಿ ದೂರು ನೀಡಿ. ನಾವು ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಲಂಚ ಮುಕ್ತ ರಾಜ್ಯ ನಮ್ಮ ಗುರಿ ಎಂದು ಡಿಸಿಎಂ ತಿಳಿಸಿದ್ದರು.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ