ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇಯಲ್ಲಿ ಬೈಕ್ ಡಿಕ್ಕಿ: ಸ್ಥಳದಲ್ಲೇ ಇಬ್ಬರ ಯುವಕರು ಸಾವು

Spread the love

ಮಂಡ್ಯ: ಅಪರಿಚಿತ ವಾಹನಕ್ಕೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಮದ್ದೂರು ಪಟ್ಟಣದ ಬೆಂಗಳೂರು-ಮೈಸೂರು ಹೆದ್ದಾರಿಯ ಫ್ಲೈ ಓವರ್ ಬಳಿ ಇಂದು ನಡೆದಿದೆ.

ಮಣಿ (25) ಹಾಗೂ ಜನಾರ್ಧನ ಪೂಜಾರಿ (21) ಮೃತರೆಂದು ಗುರುತಿಸಲಾಗಿದೆ.

ಮುಂಜಾನೆ ಬೆಂಗಳೂರಿನಿಂದ ಮೈಸೂರಿಗೆ ತೆರಳುವ ವೇಳೆ ದುರ್ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಮಣಿ ಕೋಲಾರ ಜಿಲ್ಲೆಯವರಾಗಿದ್ದು, ಮತ್ತೊಬ್ಬ ಯುವಕ ಜನಾರ್ಧನ್ ಪೂಜಾರಿ ಕೊಪ್ಪಳ ಜಿಲ್ಲೆಯ ಲಿಂಗದಮಂಡಿ ಗ್ರಾಮದ ನಿವಾಸಿ.

ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಇಬ್ಬರು ಮೈಸೂರಿಗೆ ತೆರಳುವ ವೇಳೆ ಅಪರಿಚಿತ ವಾಹನಕ್ಕೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮದ್ದೂರು ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದೆ. ಮದ್ದೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಪರಿಸರ ಸಂರಕ್ಷಣೆ, ಪ್ಲಾಸ್ಟಿಕ್ ಮುಕ್ತ ಮಹಾನಗರ ನಿರ್ಮಾಣ ಸಂಕಲ್ಪ

Spread the loveಬೆಳಗಾವಿ:ಪರಿಸರ ಸಂರಕ್ಷಣೆ, ಪ್ಲಾಸ್ಟಿಕ್ ಮುಕ್ತ ಮಹಾನಗರ ನಿರ್ಮಾಣ ಮಾಡಲು ಪ್ರತಿಯೊಬ್ಬರು  ಕೈಜೋಡಿಸಬೇಕು. ಪ್ಲಾಸ್ಟಿಕ್ ಬಳಕೆ ಕೈಬಿಡಲು ಸ್ವಯಂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ