Breaking News

5 ಗ್ಯಾರಂಟಿ ಜಾರಿ ಮಾಡಲಾಗದಿದ್ದರೆ ಅಧಿಕಾರ ಬಿಟ್ಟು ತೊಲಗಿ: B.S.Y.

Spread the love

ಬೆಂಗಳೂರು: ಕಾಂಗ್ರೆಸ್ ಪಕ್ಷ ಕೊಟ್ಟ 5 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಬೇಕು.

ಇಲ್ಲವಾದಲ್ಲಿ ಅವರು ಅಧಿಕಾರ ಬಿಟ್ಟು ತೊಲಗಬೇಕು ಎಂದು ಮಾಜಿ ಸಿಎಂ ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ. ಅರಮನೆ ಮೈದಾನದಲ್ಲಿ ಶನಿವಾರ ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ಈ ಸರ್ಕಾರದ ಮೂಗು ಹಿಂಡುವ ಕೆಲಸವನ್ನು ನಾವು ಮಾಡೋಣ. ಉಪವಾಸ ಸತ್ಯಾಗ್ರಹ ಮಾಡುವ ಅವಶ್ಯಕತೆ ಇಲ್ಲ. ಅಧಿವೇಶನ ಆರಂಭದ ದಿನದಿಂದ ನಾವು ಗಾಂಧಿ ಪ್ರತಿಮೆ ಮುಂದೆ ಕೂತು ಪ್ರತಿಭಟನೆ ಮಾಡಬೇಕು ಎಂದು ಕರೆ ನೀಡಿದರು.

ಕೇಂದ್ರ ಸರ್ಕಾರದ 5 ಕೆಜಿ ಅಕ್ಕಿ ಸೇರಿ ಒಟ್ಟು 15 ಕೆಜಿ ಅಕ್ಕಿ ಕೊಡಬೇಕು. ನಾನು ಗಾಂಧಿ ಪ್ರತಿಮೆ ಎದುರು ಧರಣಿ ಕೂರುತ್ತೇನೆ. ಸದನದ ಒಳಗೆ ಶಾಸಕರು ಹೋರಾಟ ಮಾಡಿ ಕಾಂಗ್ರೆಸ್​​ನ​ವರಿಗೆ ಪಾಠ ಕಲಿಸಬೇಕು. ಅಧಿಕಾರ ಮದದಿಂದ ಏನೇನೋ ಗ್ಯಾರಂಟಿ ಕೊಟ್ಟಿರುವ ಸಿದ್ದರಾಮಯ್ಯ ಈಗ ನರೇಂದ್ರ ಮೋದಿ ಮೇಲೆ ಬೊಟ್ಟು ಮಾಡಿ ತೋರಿಸ್ತಿದಾರೆ.‌ ಅಕ್ಕಿ ಸೇರಿದಂತೆ ಐದು ಭರವಸೆಗಳನ್ನು ಈಡೇರಿಸಲೇಬೇಕು. ಹೋರಾಟದ ಮೂಲಕ ಈ ಸರ್ಕಾರಕ್ಕೆ ಪಾಠ ಕಲಿಸಬೇಕಿದೆ. ನಮ್ಮ ಶಾಸಕರು, ಒಂದು ದಿನ ಅಧಿವೇಶನ ನಡೆಸಲು ಬಿಡದೇ ಹೋರಾಟ ಮಾಡಬೇಕು. ರಾಜಕೀಯ ದೊಂಬರಾಟ ಮಾಡಲು ಬಿಡೋದಿಲ್ಲ ಎಂದು ಕಿಡಿಕಾರಿದರು.


Spread the love

About Laxminews 24x7

Check Also

ಪ್ರತಿ ಟನ್ ಕಬ್ಬಿಗೆ​​ ಹೆಚ್ಚುವರಿ 50 ರೂ. ಕೊಡಲು ಸಾಧ್ಯವಿಲ್ಲ: ಸಕ್ಕರೆ ಮಿಲ್ಸ್ ಸಂಘಟನೆ ಅಧ್ಯಕ್ಷ

Spread the loveಬೆಂಗಳೂರು: ಪ್ರತಿ ಟನ್ ಕಬ್ಬಿಗೆ 3,200 ರೂ.‌ ಕೊಡಲು ಮಾತ್ರ ಸಾಧ್ಯ. 3,250 ರೂ. ಕೊಡುವುದು ಸಾಧ್ಯವಿಲ್ಲ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ