Breaking News

ತುಂಗೆಯಿಂದ ಭದ್ರೆಗೆ 15 ಟಿಎಂಸಿ ನೀರು ತರುವ ಯೋಜನೆ 1 ವರ್ಷದೊಳಗೆ ಪೂರ್ಣ: ಸಚಿವ ಡಿ ಸುಧಾಕರ್

Spread the love

ಶಿವಮೊಗ್ಗ: ತುಂಗೆಯಿಂದ ಭದ್ರೆಗೆ 15 TMC ನೀರನ್ನು ತೆಗೆದುಕೊಂಡು ಹೋಗುವ ಯೋಜನೆ ಮುಂದಿನ ಒಂದು ವರ್ಷದೊಳಗೆ ಪೂರ್ಣವಾಗುವುದು ಎಂದು ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ತಿಳಿಸಿದ್ದಾರೆ.

ಶಿವಮೊಗ್ಗ ಜಿಲ್ಲೆ ಮುತ್ತಿನಕೊಪ್ಪ ಗ್ರಾಮದ ಬಳಿಯ ಕಾಮಗಾರಿ ವೀಕ್ಷಿಸಿ, ಭದ್ರಾವತಿಯ ಬಿ ಆರ್ ಪ್ರಾಜೆಕ್ಟ್ ಯ ಮುಖ್ಯ ಇಂಜಿನಿಯರ್ ಅವರ ಕಚೇರಿಯಲ್ಲಿ ಶನಿವಾರ ಮಾತನಾಡಿದ ಅವರು, ಭದ್ರಾ ಮೆಲ್ದಂಡೆ ಯೋಜನೆಯ ಭಾಗವಾಗಿ ಚಿತ್ರದುರ್ಗ, ದಾವಣಗೆರೆ ಹಾಗೂ ತುಮಕೂರು ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಕೆ ಮಾಡುವ ಯೋಜನೆಯ ಅಂಗವಾಗಿ ಶಿವಮೊಗ್ಗ ಜಿಲ್ಲೆ ಮುತ್ತಿನಕೊಪ್ಪ ಬಳಿ ತುಂಗಾ ನದಿಯಿಂದ ಭದ್ರಾ ಜಲಾಶಯಕ್ಕೆ ನೀರು ಹಾಯಿಸುವ ಯೋಜನೆಯು ನೆನೆಗುದಿಗೆ ಬಿದ್ದಿದೆ. ಇದರಿಂದ ನೆನೆಗುದಿಗೆ ಬಿದ್ದ ಕಾಮಗಾರಿಯನ್ನು ವೀಕ್ಷಿಸಿದರು. ನಂತರ ಅಧಿಕಾರಿಗಳ ಬಳಿ ಮಾಹಿತಿ ಸಂಗ್ರಹಿಸಿಕೊಂಡರು.

ನಂತರ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ತುಂಗಾ ನದಿಯಿಂದ ಭದ್ರಾ ನದಿಗೆ ನೀರು ಹಾಯಿಸುವ ತ್ವರಿತಗತಿಯಲ್ಲಿ ಕಾಮಗಾರಿ ಮುಗಿಸಬೇಕಿದೆ. ವರ್ಷದಲ್ಲಿ ಕಾಮಗಾರಿ ಮುಗಿಸುವ ಭರವಸೆ ಅಧಿಕಾರಿಗಳು ನೀಡಿದ್ದಾರೆ ಎಂದರು.

ನೀರು ಹಾಯಿಸುವ ಯೋಜನೆಗೆ ಎರಡು ಕಡೆ ನೀರನ್ನು ಲೀಪ್ಟ್ ಮಾಡಬೇಕಿದೆ. ಇದಕ್ಕಾಗಿ ವಿದ್ಯುತ್ ನ ಅವಶ್ಯಕತೆ ಇದೆ. ಇದಕ್ಕಾಗಿ ಇನ್ನೂ 12 ಟವರ್ ನಿರ್ಮಾಣ ಬಾಕಿಯಿದೆ. ಈ ಯೋಜನೆಯು 2018 ರಿಂದ ಆಮೆಗತಿಯಲ್ಲಿ ನಡೆಯುತ್ತಿದೆ. 2018ರಲ್ಲಿ ಸಿದ್ದರಾಮಯ್ಯ ಸರ್ಕಾರ ಇದ್ದಾಗ ಹಣ ಬಿಡುಗಡೆ ಮಾಡಲಾಗಿತ್ತು. ನಂತರ ಬಂದ ಬಿಜೆಪಿ ಸರ್ಕಾರದಿಂದ ನಿರ್ಲಕ್ಷಿಸಿತ್ತು. ಈಗ ನಮ್ಮ ಸರ್ಕಾರ ಬಂದಿದೆ. ಕಾಮಗಾರಿಯನ್ನು ಚುರುಕುಗೊಳಿಸುತ್ತೇವೆ ಎಂದರು.

ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರದಿಂದ ಹಣ ಬಿಡುಗಡೆ ಇಲ್ಲ: ಕೇಂದ್ರ ಸರ್ಕಾರ ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಿದೆ. ಘೋಷಿಸಿದ ಹಣ 5300 ಕೋಟಿ ರೂ ಗಳಲ್ಲಿ ಒಂದು ಪೈಸೆ ಸಹ ಬಿಡುಗಡೆಯಾಗಿಲ್ಲ. ಕೇಂದ್ರ ಸರ್ಕಾರ ಕಳೆದ ಬಜೆಟ್ ನಲ್ಲಿ ರಾಷ್ಟ್ರೀಯ ಯೋಜನೆ ಎಂದು ಕೇಂದ್ರ ಘೋಷಿಸಿ ಸುಮ್ಮನಾಗಿದೆ ಅಷ್ಟೆ. ಹಿಂದೆ ರಾಜ್ಯದಲ್ಲಿ ಬಿಜೆಪಿ ಸರ್ಕಾರವಿತ್ತು. ಈಗ ನಮ್ಮ ಸರ್ಕಾರ ಅಧಿಕಾರದಲ್ಲಿದೆ. ಕೇಂದ್ರಕ್ಕೆ ಅನುದಾನ ಬಿಡುಗಡೆಗೆ ಒತ್ತಾಯಿಸಲಾಗುವುದು ಎಂದರು.

ಯೋಜನೆ ಸಂತ್ರಸ್ತರಿಗೆ ಪರಿಹಾರ ಕೊಡಲಾಗಿದೆ. ಇನ್ನೂ ಕೆಲವೊಂದು ಸಮಸ್ಯೆಗಳಿವೆ. ಅವುಗಳನ್ನು ಅದಷ್ಟು ಬೇಗ ಬಗೆಹರಿಸಲಾಗುವುದು. ಈ ವೇಳೆ ಚಿತ್ರದುರ್ಗದ ಶಾಸಕರುಗಳು, ಮಾಜಿ ಸಂಸದ ಚಂದ್ರಪ್ಪ ಸೇರಿದಂತೆ ನೀರಾವರಿ ಅಧಿಕಾರಿಗಳು ಹಾಜರಿದ್ದರು.


Spread the love

About Laxminews 24x7

Check Also

ಎಲ್ಲ ಧರ್ಮಕ್ಕಿಂತ ಮಾನವ ಧರ್ಮವೇ ಮೇಲು: ಸಿಎಂ

Spread the loveಮೈಸೂರು: ದಯೆಯೇ ಧರ್ಮದ ಮೂಲವಯ್ಯ, ದಯೆಯಿಲ್ಲದ ಧರ್ಮ ಯಾವುದಯ್ಯ ಎಂದು ಬಸವಣ್ಣನವರು ಧರ್ಮದ ಕುರಿತು ವ್ಯಾಖ್ಯಾನ ಮಾಡಿದ್ದಾರೆ. ಎಲ್ಲ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ