Breaking News

ರಸ್ತೆ ಅಪಘಾತದಲ್ಲಿ ಕಾಲು ಕಳೆದುಕೊಂಡ ಪಾರ್ವತಮ್ಮ ರಾಜ್​​ಕುಮಾರ್ ತಮ್ಮನ ಮಗ

Spread the love

ಚಾಮರಾಜನಗರ: ಕನ್ನಡ ಚಿತ್ರರಂಗದ ವರನಟ, ದಿ. ಡಾ.ರಾಜ್​​ಕುಮಾರ್ ಅವರ ಪತ್ನಿ ದಿ. ಪಾರ್ವತಮ್ಮ ರಾಜ್​ಕುಮಾರ್ ಅವರ ಸಹೋದರ ಎಸ್.ಎ.

ಶ್ರೀನಿವಾಸ್ ಅವರ ಪುತ್ರ ಸೂರಜ್​ ಕುಮಾರ್ (ಧೀರಜ್​​​) ಅವರು ಅಪಘಾತಕ್ಕೀಡಾಗಿ ಕಾಲು ಕಳೆದುಕೊಂಡಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ‌ ಚಿಕ್ಕಹುಂಡಿ ಗೇಟ್ ಬಳಿ ನಡೆದಿದೆ. ಇವರು ಕೆಲವು ಸಿನಿಮಾಗಳಲ್ಲಿ ಅಸಿಸ್ಟೆಂಟ್​ ಡೈರೆಕ್ಟರ್ ಆಗಿ ಕೆಲಸ ಮಾಡಿದ್ದಾರೆ.

ಬೈಕ್​ಗೆ ಟಿಪ್ಪರ್ ಡಿಕ್ಕಿ, ಬಲಗಾಲು ಕಟ್​: ಊಟಿಗೆ ಸೋಲೋ‌ (ಏಕಾಂಗಿ) ಟ್ರಿಪ್ ತೆರಳಿದ್ದ ಸೂರಜ್​​ ಕುಮಾರ್ ಹಿಂತಿರುಗುವಾಗ ಟಿಪ್ಪರ್ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಗಾಯಾಳುವನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಾಲು ಸಂಪೂರ್ಣ ನಜ್ಜುಗುಜ್ಜಾಗಿದ್ದು ಬಲಗಾಲನ್ನು ಸಂಪೂರ್ಣವಾಗಿ ತೆಗೆಯಲಾಗಿದೆ ಎಂದು ಮೂಲಗಳು ತಿಳಿಸಿದೆ. ಬೇಗೂರು ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 ಕಾಲು ಕಳೆದುಕೊಂಡ ಸೂರಜ್ ಕುಮಾರ್ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಕೆಲಸ: ಸೂರಜ್ ಕುಮಾರ್ ಕರ್ನಾಟಕದ ಹೆಸರಾಂತ ಚಿತ್ರ ನಿರ್ಮಾಪಕ‌ ಎಸ್.ಎ.ಶ್ರೀನಿವಾಸ್ ಅವರ ಪುತ್ರ. ಶ್ರೀನಿವಾಸ್ ಅವರು ಪಾರ್ವತಮ್ಮ ರಾಜ್​ಕುಮಾರ್ ಅವರ ಅಣ್ಣನ ಮಗ. ಐರಾವತ ಮತ್ತು ತಾರಕ್ ಸಿನಿಮಾಗಳಿಗೆ ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಕೆಲಸ ನಿರ್ವಹಿಸಿದ್ದರು. ಸೂರಜ್ ಕುಮಾರ್ ನೀನಾಸಂ ಹಾಗೂ ನಾಗತಿಹಳ್ಳಿ ಚಂದ್ರಶೇಖರ್ ಅವರ ಟೆಂಟ್ ಸಿನಿಮಾ ಶಾಲೆಯಲ್ಲಿ ನಟನೆಗೆ ತರಬೇತಿ ಪಡೆದುಕೊಂಡಿದ್ದರು.

 

ಮತ್ತೊಂದು ಅಪಘಾತ ಪ್ರರಣ: ಇನ್ನೊಂದು ಪ್ರಕರಣದಲ್ಲಿ, ಬೆಂಗಳೂರು ಮೈಸೂರು ಹೆದ್ದಾರಿಯ ಫ್ಲೈ ಓವರ್ ಬಳಿ ಇಂದು ಬೆಳಗ್ಗೆ ಅಪಘಾತ ಸಂಭವಿಸಿದೆ. ಅಪರಿಚಿತ ವಾಹನಕ್ಕೆ ಬೈಕ್ ಡಿಕ್ಕಿಯಾಗಿ ಮಣಿ ಹಾಗೂ ಜನಾರ್ಧನ ಪೂಜಾರಿ ಎಂಬುವವರು ಮೃಪಟ್ಟಿದ್ದಾರೆ. ಪೊಲೀಸರು ಅಫಘಾತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆದಿದ್ದಾರೆ. ಮದ್ದೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಧರ್ಮಸ್ಥಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​​: ಅನಾಮಿಕನ ಮುಖವಾಡ ಕಳಚಿದ ಮಾಜಿ ಪತ್ನಿ

Spread the loveಮಂಡ್ಯ, (ಆಗಸ್ಟ್ 21): ನೂರಾರು ಶವ ಹೂತಿರುವುದಾಗಿ ಆರೋಪಿಸಿ ಧರ್ಮಸ್ಥಳ ಪ್ರಕರಣವನ್ನು (Dharmasthala Case) ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಲು ಕಾರಣವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ