Home / ಜಿಲ್ಲೆ / ಬೆಳಗಾವಿ / ರಾಜ್ಯಾಧ್ಯಕ್ಷರಾಗುವ ಬಯಕೆ ವ್ಯಕ್ತಪಡಿಸಿದ್ದಾರೆ ರಮೇಶ್ ಜಿಗಜಿಣಗಿ

ರಾಜ್ಯಾಧ್ಯಕ್ಷರಾಗುವ ಬಯಕೆ ವ್ಯಕ್ತಪಡಿಸಿದ್ದಾರೆ ರಮೇಶ್ ಜಿಗಜಿಣಗಿ

Spread the love

ಬೆಳಗಾವಿ: ಮಾಜಿ ಸಚಿವ ವಿ ಸೋಮಣ್ಣ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಆಗುವ ಬಯಕೆಯನ್ನು ವಿಜಯಪುರ ಸಂಸದ ರಮೇಶ್ ಜಿಗಜಿಣಗಿ ಹೊರ ಹಾಕಿದ್ದಾರೆ. ಬೆಳಗಾವಿಯಲ್ಲಿ ಇಂದು ಜಿಲ್ಲಾ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಭಾಗಿಯಾಗಲು ಆಗಮಿಸಿದ್ದ ವೇಳೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ರಾಜ್ಯಾಧ್ಯಕ್ಷ ಯಾರು ಆಗಬೇಕು ಎಂಬುದನ್ನು ಬಹಿರಂಗ ಚರ್ಚೆ ಮಾಡುವುದು ಸರಿಯಲ್ಲ.

ನಮ್ಮದು ರಾಷ್ಟ್ರೀಯ ಪಕ್ಷ, ರಾಷ್ಟ್ರೀಯ ನಾಯಕರೇ ರಾಜ್ಯಾಧ್ಯಕ್ಷರನ್ನು ಆಯ್ಕೆ ಮಾಡ್ತಾರೆ. ಎಲ್ಲರಿಗೂ ರಾಜ್ಯಾಧ್ಯಕ್ಷ ಆಗಬೇಕು ಎಂಬ ಆಶಯ ಇರುವುದು ಸಹಜ. ನಾನೂ ಬಿಜೆಪಿಯ ಹಿರಿಯ ನಾಯಕ.

ಅವಕಾಶ ಕೊಟ್ಟರೆ ನಾನು ಕೂಡ ರಾಜ್ಯಾಧ್ಯಕ್ಷನಾಗುವೆ. ಬಿಜೆಪಿಯಲ್ಲಿ ದಲಿತರು ರಾಜ್ಯದ ಅಧ್ಯಕ್ಷ ಆಗಬಾರದೇ? ಎಂದು ಪ್ರಶ್ನಿಸಿದರು.

ರಾಜ್ಯಾಧ್ಯಕ್ಷ ಸ್ಥಾನ ನೀಡುವಂತೆ ಕೇಳ್ತಿರಾ ಎಂಬ ಮಾಧ್ಯಮಗಳ ಪ್ರಶ್ನೆಗೆ, ಎಲ್ಲಿ ಕೇಳಬೇಕು ಎಂಬುದು ನನಗೆ ಗೊತ್ತಿದೆ. ನನಗೂ ರಾಜ್ಯಾಧ್ಯಕ್ಷ ಸ್ಥಾನ ನೀಡುವಂತೆ ಕೋರುತ್ತೇನೆ ಎಂದು ರಮೇಶ ಜಿಗಜಿಣಗಿ ತಮ್ಮ ಆಶಯ ವ್ಯಕ್ತಪಡಿಸಿದರು.ಅವರು ಬಿಜೆಪಿ ರಾಜ್ಯಾಧ್ಯಕ್ಷರಾಗುವ ಬಗ್ಗೆ ಬಯಕೆಯನ್ನು ವ್ಯಕ್ತಪಡಿಸಿದ್ದಾರೆ


Spread the love

About Laxminews 24x7

Check Also

ನೂತನ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಧಿಕಾರ ಸ್ವೀಕಾರ

Spread the love ಬೆಳಗಾವಿ: ಬೆಳಗಾವಿಯ ನೂತನ ಜಿಲ್ಲಾಧಿಕಾರಿಯಾಗಿ ಮೊಹಮ್ಮದ್ ರೋಷನ್ ಶುಕ್ರವಾರ ಅಧಿಕಾರ ವಹಿಸಿಕೊಂಡರು. ನಿಕಟಪೂರ್ವ ಜಿಲ್ಲಾಧಿಕಾರಿ ನಿತೇಶ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ