Breaking News

ಮಳೆಗಾಗಿ ವಿಚಿತ್ರ ಆಚರಣೆ: ಸ್ಮಶಾನದಲ್ಲಿ ಹೂತಿದ್ದ ಸಮಾಧಿ ಅಗೆದು, ಶವಗಳಿಗೆ ನೀರುಣಿಸಿದ ಗ್ರಾಮಸ್ಥರು!

Spread the love

ವಿಜಯಪುರ: ರಾಜ್ಯದಲ್ಲಿ ವಾಡಿಕೆಯಂತೆ ಆಗಬೇಕಾಗಿದ್ದ ಮುಂಗಾರು ಮಳೆ ವಿಳಂಬವಾಗಿದೆ. ಹೀಗಾಗಿ ರಾಜ್ಯದ ಹಲವೆಡೆಮಳೆಗಾಗಿ ಪ್ರಾರ್ಥಿಸಿ ಕತ್ತೆ ಮದುವೆ, ಕಪ್ಪೆ ಮದುವೆ, ದೇವರಿಗೆ ನೀರುಣಿಸುವುದು ಸೇರಿದಂತೆ ವಿವಿಧ ರೀತಿಯ ಆಚರಣೆ ಮತ್ತು ಸಂಪ್ರದಾಯವನ್ನು ಈಗಲೂ ಗ್ರಾಮೀಣ ಪ್ರದೇಶದಲ್ಲಿ ನಡೆಸಿಕೊಂಡು ಬರಲಾಗುತ್ತಿದೆ. ಆದರೆ, ತಾಳಿಕೋಟೆ ತಾಲೂಕಿನ ಕಲಕೇರಿ ಗ್ರಾಮದ ಸ್ಮಶಾನದಲ್ಲಿ ಹೂತಿದ್ದ ಶವಗಳಿಗೆ ನೀರುಣಿಸಿ ಮಳೆಗಾಗಿ ಪ್ರಾರ್ಥಿಸಿರುವ ವಿಚಿತ್ರ ಆಚರಣೆ ಬೆಳಕಿಗೆ ಬಂದಿದೆ.

ಇದು ವಿಚಿತ್ರ ಸಂಪ್ರದಾಯವಾದರೂ ಸಹ ಗ್ರಾಮಸ್ಥರು ಈ ಆಚರಣೆಯನ್ನು ಹಲವು ದಶಕಗಳಿಂದ ಮಾಡಿಕೊಂಡು ಬರುತ್ತಿದ್ದಾರೆ. ಹೀಗಾಗಿ ನೀರು ತುಂಬಿದ ಟ್ಯಾಂಕರ್‌ನೊಂದಿಗೆ ಸ್ಮಶಾನಕ್ಕೆ ತೆರಳಿದ ಗ್ರಾಮಸ್ಥರು ಸಮಾಧಿಗಳನ್ನು ಅಗೆದು ಕೊಳವೆ ಮೂಲಕ ಶವಗಳಿಗೆ ನೀರುಣಿಸಿ, ಮಳೆಗಾಗಿ ಪ್ರಾರ್ಥಿಸಿದರು.

ರೈತ ವಾಗೇಶ ಹಿರೇಮಠ ಮಾತನಾಡಿ, ಸ್ಮಶಾನದಲ್ಲಿ ಹೂತಿದ್ದ ಶವಗಳಿಗೆ ನೀರುಣಿಸಿದ 10 ದಿನಗಳೊಳಗೆ ಮಳೆಯಾಗುತ್ತದೆ ಎನ್ನುವ ನಂಬಿಕೆ ಇದೆ. ಕಳೆದ ವರ್ಷ ಸಹ ಮಳೆ ವಿಳಂಬವಾದಾಗ ಇದೇ ರೀತಿ ಶವಗಳಳಿಗೆ ಸಂತೃಪ್ತಿ ಪಡೆಸಿದ್ದೆವು. ಈಗ ಮತ್ತೊಮ್ಮೆ ಅದೇ ಪ್ರಯೋಗ ಮಾಡಲಾಗುತ್ತಿದೆ. ಈ ಬಾರಿಯೂ ಮಳೆ ಖಂಡಿತವಾಗಿ ಬರುತ್ತದೆ ನಂಬಿಕೆ ಇದೆ. ಇನ್ನು ಹತ್ತು ದಿನಗಳಲ್ಲಿ ಭಾರಿ ಮಳೆಯಾಗಿ, ಬಿತ್ತನೆ ಕಾರ್ಯ ಆರಂಭವಾಗಲಿದೆ ಎಂದು ಭವಿಷ್ಯ ನುಡಿದರು.

ಸಾಮೂಹಿಕ ಪ್ರಾರ್ಥನೆ ವೇಳೆ ಮಳೆಗಾಗಿ ಕಣ್ಣೀರಿಟ್ಟ ಮುಸ್ಲಿಂ ಬಾಂಧವರು: ಇತ್ತೀಚಿಗೆ ಮಳೆಗಾಗಿ ಕೈಗೊಂಡಿದ್ದ ಸಾಮೂಹಿಕ ಪ್ರಾರ್ಥನೆ ವೇಳೆ ಮುಸ್ಲಿಂ ಬಾಂಧವರು ಕಣ್ಣೀರು ಹಾಕಿರುವ ಘಟನೆ ಬೆಳಗಾವಿ ನಗರದಲ್ಲಿ ನಡೆದಿತ್ತು. ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದರೂ ಬೆಳಗಾವಿ ಸೇರಿ ಉತ್ತರ ಕರ್ನಾಟಕ ಭಾಗದಲ್ಲಿ ಮಳೆಯಾಗುತ್ತಿಲ್ಲ. ಇದರಿಂದ ನಗರದ ಅಂಜುಮನ್ ಸಂಸ್ಥೆಯ ಈದ್ಗಾ ಮೈದಾನದಲ್ಲಿ ಮಳೆಗಾಗಿ ಸಾವಿರಾರು ಮುಸ್ಲಿಂ ಬಾಂಧವರು ಪ್ರಾರ್ಥನೆ ಸಲ್ಲಿಸಿದ್ದರು. ಧರ್ಮಗುರು ಮುಫ್ತಿ ಅಬ್ದುಲ್ ಅಜೀಜ್ ಖಾಜಿ ನೇತೃತ್ವದಲ್ಲಿ ನಡೆದಿದ್ದ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾವುಕರಾದ ಮುಸ್ಲಿಂ ಬಾಂಧವರು ‘ಅಲ್ಹಾ ಮಳೆ ಕರುಣಿಸು’ ಎಂದು ಪ್ರಾರ್ಥಿಸಿದ್ದರು.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ