Breaking News

ಕಠಿಣ ಶ್ರಮದಿಂದ ಜೀವನದಲ್ಲಿ ಯಶಸ್ಸನ್ನು ಸಾಧಿಸಬಹುದು: ಸಿಪಿಐ ಬಡಿಗೇರ್

Spread the love

ದೃಢಸಂಕಲ್ಪ, ಪರಿಶ್ರಮ ಮತ್ತು ಕಠಿಣ ಶ್ರಮದಿಂದ ಜೀವನದಲ್ಲಿ ಯಶಸ್ಸನ್ನು ಸಾಧಿಸಬಹುದು. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಪ್ರಯತ್ನಿಸಿ ಯಶಸ್ವಿಗೊಳಿಸುವಂತೆ ಸಾರಿಗೆ ಇಲಾಖೆಯ ಸಿಪಿಐ ವಿನಾಯಕ ಬಡಿಗೇರ್ ಮನವಿ ಮಾಡಿದರು.

ಬೆಳಗಾವಿಯ ಕಾಳಿ ಅಮರಾಯಿಯಲ್ಲಿರುವ ಬೆಳಗಾವಿ ಜಿಲ್ಲಾ ವಿಶ್ವಕರ್ಮ ವಿದ್ಯಾವರ್ಧಕ ಸಂಘದ ಸಭಾಂಗಣದಲ್ಲಿ ಭಾನುವಾರ ಸಂಘದ ವತಿಯಿಂದ ವಿಶ್ವಕರ್ಮ ಸಮಾಜದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭ ಏರ್ಪಡಿಸಲಾಗಿತ್ತು.

ಈ ವೇಳೆ ಮುಖ್ಯ ಅತಿಥಿಯಾಗಿ ಆಗಮಿಸಿರುವ ಸಿಪಿಐ ಬಡಿಗೇರ್ ಮಾತನಾಡಿ, ಯಶಸ್ಸಿನ ಶಿಖರವೇರಿದರೂ ವಿದ್ಯಾರ್ಥಿಯು ಸರಳತೆ ಮತ್ತು ಮಾನವೀಯತೆ ಎಂಬ ಎರಡು ಗುಣಗಳನ್ನು ಮೈಗೂಡಿಸಿಕೊಂಡು ಪ್ರತಿಯೊಬ್ಬರೂ ಹಂಬಲಿಸುವಂತಹ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು ಎಂದರು.

ಈ ಸಂದರ್ಭದಲ್ಲಿ ಮಹಾಂತೇಶನಗರ ಬಿ.ಎಡ್ ಕಾಲೇಜಿನ ಪ್ರಾಂಶುಪಾಲೆ ಡಾಕ್ಟರ.ನಿರ್ಮಲಾ ಬತ್ತದ್ ಹಾಗೂ ಗಣ್ಯರು ಅಭಿಪ್ರಾಯ ವ್ಯಕ್ತಪಡಿಸಿದರು. ಇದೇ ಸಂದರ್ಭದಲ್ಲಿ 10 ಮತ್ತು 12ನೇ ತರಗತಿಯಲ್ಲಿ ಉತ್ತೀರ್ಣಯಾದ ವಿಶ್ವಕರ್ಮ ಸಮಾಜದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಅತಿಥಿಗಳು ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಹುಬ್ಬಳ್ಳಿಯ ಶಂಕರಾಚಾರ್ಯ ಕಡ್ಲಾಸ್ಕರ್, ಬೆಳಗಾವಿ ಜಿಲ್ಲಾ ವಿಶ್ವಕರ್ಮ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಪ್ರಭಾಕರ ಬಡಿಗೇರ್, ಉಪಾಧ್ಯಕ್ಷ ಮೋಹನ ಪತ್ತಾರ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ