Breaking News

ಜುಲೈ 7ಕ್ಕೆ 3.25 ಲಕ್ಷ ಕೋಟಿ ಗಾತ್ರದ ಬಜೆಟ್ ಮಂಡನೆಗೆ ಸಿದ್ಧತೆ.. ಪಂಚ ಗ್ಯಾರಂಟಿಗಾಗಿ ರಾಜಸ್ವ ಸಂಗ್ರಹದ ಟಾರ್ಗೆಟ್

Spread the love

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಪಂಚ ಗ್ಯಾರಂಟಿ ಯೋಜನೆಗಳ ಕೇಂದ್ರೀಕೃತ ಬಜೆಟ್ ಮಂಡನೆಗೆ ಸಿದ್ಧತೆ ನಡೆಸುತ್ತಿದ್ದಾರೆ.

ನಿರ್ಗಮಿತ ಬಿಜೆಪಿ ಸರ್ಕಾರ ಮಂಡಿಸಿದ ಬಜೆಟ್​ ಅನ್ನು ಅಲ್ಪ ಪರಿಷ್ಕೃರಣೆಯೊಂದಿಗೆ ಸಿಎಂ ಸಿದ್ದರಾಮಯ್ಯ ಅಂದಾಜು 3.25 ಲಕ್ಷ ಕೋಟಿ ರೂ. ಗಾತ್ರದ ಬಜೆಟ್ ಮಂಡಿಸಲು ತಯಾರಿ ನಡೆಸುತ್ತಿದ್ದಾರೆ.

ಸಿಎಂ ಸಿದ್ದರಾಮಯ್ಯ ತಮ್ಮ 14ನೇ ಬಜೆಟ್ ಮಂಡನೆಗೆ ಸಕಲ ಸಿದ್ಧತೆ ನಡೆಸುತ್ತಿದ್ದಾರೆ. ಜುಲೈ 7ಕ್ಕೆ ನೂತನ ಕಾಂಗ್ರೆಸ್ ಸರ್ಕಾರದ ಬಜೆಟ್ ಮಂಡನೆಯಾಗಲಿದೆ. ಈಗಾಗಾಲೇ ನಿರ್ಗಮಿತ ಬಿಜೆಪಿ ಸರ್ಕಾರ 2023-24 ಸಾಲಿನ‌ ಬಜೆಟ್ ಮಂಡಿಸಿದೆ. ಇದೀಗ ಕಾಂಗ್ರೆಸ್ ಸರ್ಕಾರ ಅಧಿಕಾರದ ಚುಕ್ಕಾಣಿ ಹಿಡಿದಿರುವ ಕಾರಣ ಮತ್ತೆ ಪೂರ್ಣಪ್ರಮಾಣದ ಬಜೆಟ್ ಮಂಡನೆಯಾಗಲಿದೆ. ಹೊಸ ಕಾಂಗ್ರೆಸ್ ಸರ್ಕಾರದ ಬಜೆಟ್ ಪಂಚ ಗ್ಯಾರಂಟಿ ಯೋಜನೆಗಳ ಕೇಂದ್ರೀಕೃತವಾಗಿರಲಿದೆ. ಬಜೆಟ್​ನಲ್ಲಿ ಪಂಚ ಗ್ಯಾರಂಟಿಗಳಿಗಾಗಿನ ಲೆಕ್ಕಾಚಾರವೇ ಪ್ರಮುಖ ಆದ್ಯತೆಯಾಗಿರಲಿದೆ.

ಹೊಸ ಬಜೆಟ್ ಬೊಮ್ಮಾಯಿ ಮಂಡಿಸಿದ್ದ ಹಳೆ ಬಜೆಟ್​​ನ ಅನುದಾನದ ಮರು ಹೊಂದಾಣಿಕೆಗಷ್ಟೇ ಸೀಮಿತವಾಗಿರಲಿದೆ ಇರಲಿದೆ ಎಂದು ಆರ್ಥಿಕ ಇಲಾಖೆ ಅಧಿಕಾರಿ ತಿಳಿಸಿದ್ದಾರೆ. ಹೊಸ ಸರ್ಕಾರದ ಯೋಜನೆಗಳಿಗೆ ಅನುದಾನದ ಮರುಹಂಚಿಕೆ ಬಜೆಟ್​ನಲ್ಲಿ ಇರಲಿದೆ. ಉಳಿದ ಹಾಗೆ ಪಂಚ ಗ್ಯಾರಂಟಿಗಳಿಗೆ ಬಹುತೇಕ ಬಜೆಟ್ ಅನುದಾನ ಮೀಸಲಿರಲಿದೆ ಎಂದು ಹೇಳಲಾಗಿದೆ. ಸುಮಾರು ಶೇ 15 ರಷ್ಟು ಬಜೆಟ್ ಹಣವನ್ನು ಪಂಚ ಯೋಜನೆಗಳಿಗೆ ಮೀಸಲಿರಿಸುವ ಲೆಕ್ಕಾಚಾರ ನಡೆಯುತ್ತಿದೆ.

3.25 ಲಕ್ಷ ಕೋಟಿ ಗಾತ್ರದ ಬಜೆಟ್ ಮಂಡನೆ?: ಸಿಎಂ ಸಿದ್ದರಾಮಯ್ಯ 2023-24 ಸಾಲಿನ ಹೊಸ ಬಜೆಟ್ ಮಂಡನೆಗೆ ಸಕಲ‌ ಸಿದ್ಧತೆ ನಡೆಸುತ್ತಿದ್ದಾರೆ. ಅಂದಾಜು 3.25 ಲಕ್ಷ ಕೋಟಿ ಗಾತ್ರದ ಹೊಸ ಬಜೆಟ್ ಮಂಡನೆಯಾಗಲಿದೆ ಎಂದು ಮೂಲಗಳು ತಿಳಿಸಿವೆ. ಆದರೆ, ಉಳಿತಾಯದ ಬಜೆಟ್ ಮಂಡನೆ ಕಷ್ಟ ಸಾಧ್ಯ ಎನ್ನಲಾಗುತ್ತಿದೆ.


Spread the love

About Laxminews 24x7

Check Also

ಶಾಸಕ ಕೆ.ಸಿ.ವೀರೇಂದ್ರ ಮತ್ತೆ 6 ದಿನ ಇ.ಡಿ ಕಸ್ಟಡಿಗೆ

Spread the love ಬೆಂಗಳೂರು: ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಅವರ ಐದು ದಿನಗಳ ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ