Breaking News

ಇಂದು ಬಿಹಾರ ವಿಧಾನಸಭೆ ಮೊದಲ ಹಂತದ ಚುನಾವಣೆ

Spread the love

ಪಾಟ್ನಾ: ತೀವ್ರ ಕುತೂಹಲ ಮೂಡಿಸಿರುವ ಬಿಹಾರ ವಿಧಾನಸಭೆಯ 243 ಕ್ಷೇತ್ರಗಳಿಗೆ ಇಂದಿನಿಂದ ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ 71 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು, ಶಾಂತಿಯುತ ಚುನಾವಣೆಗಾಗಿ ವ್ಯವಸ್ಥೆ ಮಾಡಿಕೊಳ್ಳಲಾಗಿದೆ

ಇಂದು ಮೊದಲ ಹಂತದ ಚುನಾವಣೆ ನಡೆಯುತ್ತಿದ್ದು, ಬೆಳಗ್ಗೆ 7 ಗಂಟೆಯಿಂದ 71 ಕ್ಷೇತ್ರಗಳಲ್ಲಿ ಮತದಾನ ಆರಂಭವಾಗಿದೆ. 16 ಜಿಲ್ಲೆಗಳ 71 ವಿಧಾನಸಭಾ ಕ್ಷೇತ್ರಗಳಲ್ಲಿ 114 ಮಹಿಳಾ ಅಭ್ಯರ್ಥಿಗಳು ಸೇರಿ ಒಟ್ಟು 1,066 ಅಭ್ಯರ್ಥಿಗಳು ಅದೃಷ್ಟ ಪರೀಕ್ಷೆ ಇಳಿದಿದ್ದಾರೆ. ಸಂಜೆ 6 ಗಂಟೆವರೆಗೆ ಮತದಾನ ನಡೆಯಲಿದ್ದು, ಕೊರೊನಾ ಸೋಂಕಿತರಿಗೂ ಮತದಾನಕ್ಕೆ ಅವಕಾಶ ನೀಡಲಾಗಿದೆ.ಕೊರೊನಾ ನಡುವೆ ನಡೆಯುತ್ತಿರುವ ಮೊದಲ ಚುನಾವಣೆ ಹಿನ್ನೆಲೆ ಸಾಕಷ್ಟು ಮುನ್ನೆಚ್ಚರಿಕೆ ವಹಿಸಲಾಗಿದೆ.

ಅಲ್ಲದೇ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಭದ್ರತೆ ಮಾಡಲಾಗಿದೆ. ನಕ್ಸಲ್ ಹಾವಳಿ ಇರುವ ಸೂಕ್ಷ್ಮ ಪ್ರದೇಶಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಆಡಳಿತ ರೂಢ ಎನ್‍ಡಿಎ ಹಾಗೂ ಮಹಾ ಮೈತ್ರಿಕೂಟಕ್ಕೆ ಈ ಚುನಾವಣೆ ಪ್ರತಿಷ್ಠೆಯ ಕಣವಾಗಿದೆ.


Spread the love

About Laxminews 24x7

Check Also

ಬಳ್ಳಾರಿ ನಗರದ ಬುಡಾ ಕಾಂಪ್ಲೆಕ್ಸ್ ಬಳಿ ನ.18 ರಂದು ನಡೆದಿದ್ದ ಕೊಲೆ ಭೇದಿಸಿರುವ ಪೊಲೀಸರು, ಆರೋಪಿಯನ್ನು ಬಂಧಿಸಿದ್ದಾರೆ.

Spread the loveಬಳ್ಳಾರಿ: ನಗರದ ಬುಡಾ ಕಾಂಪ್ಲೆಕ್ಸ್ ಬಳಿ ನ.18 ರಂದು ನಡೆದಿದ್ದ ಕೊಲೆ ಕೇಸ್ ಭೇದಿಸುವಲ್ಲಿ ಬಳ್ಳಾರಿ ಪೊಲೀಸರು ಯಶಸ್ವಿಯಾಗಿದ್ದಾರೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ