Breaking News

ಇಳಿವಯಸ್ಸಿನಲ್ಲೂ ಬತ್ತದ ಉತ್ಸಾಹ: 100, 200 ಮೀಟರ್‌ ಓಟದ ಸ್ಪರ್ಧೆಯಲ್ಲಿ ಚಿನ್ನ ಗೆದ್ದ 106ರ ಅಜ್ಜಿ!

Spread the love

ಡೆಹ್ರಾಡೂನ್ (ಉತ್ತರಾಖಂಡ): ಯುವರಾಣಿ ಮಹೇಂದ್ರ ಕುಮಾರಿ ಅವರ ಸ್ಮರಣಾರ್ಥ ಆಯೋಜಿಸಿರುವ 18ನೇ ರಾಷ್ಟ್ರೀಯ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ ಸೋಮವಾರ ಆರಂಭವಾಯಿತು.

ಎರಡು ದಿನಗಳ ಕಾಲ ನಡೆಯಲಿರುವ ಸ್ಪರ್ಧೆಯಲ್ಲಿ ವಿವಿಧ ರಾಜ್ಯಗಳಿಂದ 800ಕ್ಕೂ ಹೆಚ್ಚು ಕ್ರೀಡಾಪಟುಗಳು ಭಾಗವಹಿಸುತ್ತಿದ್ದಾರೆ. ಅಥ್ಲೆಟಿಕ್ಸ್ ಸ್ಪರ್ಧೆಯಲ್ಲಿ 5 ವರ್ಷದಿಂದ 106 ವರ್ಷದೊಳಗಿನ ಆಟಗಾರರು ಭಾಗವಹಿಸುತ್ತಿರುವುದು ವಿಶೇಷ. ಯುವಕರಲ್ಲಿ ಕ್ರೀಡೆಗಳ ಕುರಿತು ಆಸಕ್ತಿ ಬೆಳೆಸುವ ಉದ್ದೇಶದಿಂದ ಆಯೋಜಿಸಲಾಗುತ್ತಿರುವ ಈ ಸ್ಪರ್ಧೆಯನ್ನು ಕಾಂಗ್ರೆಸ್ ಮುಖಂಡ ಸೂರ್ಯಕಾಂತ ದಶಮಾನ ನಡೆಸುತ್ತಿದ್ದಾರೆ.

ಇಂದು ಈ ಸ್ಪರ್ಧೆಯ ಪ್ರಮುಖ ಆಕರ್ಷಣೆ ಹರಿಯಾಣದ ಚಾರ್ಖಿ ದಾದ್ರಿ ನಿವಾಸಿ 106 ವರ್ಷದ ರಮಾಬಾಯಿ. 100, 200 ಮೀಟರ್ ಓಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಚಿನ್ನದ ಪದಕ ಗಳಿಸಿದ್ದಾರೆ. ಶಾಟ್‌ಪುಟ್‌ನಲ್ಲೂ ಭಾಗವಹಿಸಿದ ಅವರು ನೆರೆದಿದ್ದ ಪ್ರೇಕ್ಷಕರನ್ನು ಅಚ್ಚರಿಗೊಳಿಸಿದರು. ಹರಿಯಾಣದಲ್ಲಿ ಸರ್ಕಾರಿ ನೌಕರಿಯಿಂದ ನಿವೃತ್ತರಾದ 74 ವರ್ಷದ ಜೈಸಿಂಗ್ ಮಲಿಕ್ 3,000 ಮೀಟರ್ ನಡಿಗೆಯಲ್ಲಿ ಚಿನ್ನ ಗೆದ್ದರೆ, ಅವರ 70 ವರ್ಷದ ಪತ್ನಿ ರಾಮರತಿ ದೇವಿ ಅವರು 3000 ಮೀಟರ್ ನಡಿಗೆಯಲ್ಲಿ ಭಾಗವಹಿಸಿ ಚಿನ್ನದ ಪದಕ ಪಡೆದಿದ್ದಾರೆ. ಇಂದಿನ ಯುವಕರು ಕ್ರೀಡೆ ಹಾಗೂ ಇಂತಹ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳುವ ಮೂಲಕ ಸದೃಢರಾಗಿ, ಆರೋಗ್ಯವಂತರಾಗಿ ಇರಬಹುದು ಎಂದು ಯುವಜನತೆಗೆ ಕಿವಿಮಾತು ಹೇಳಿದರು.

ಸಂಸ್ಥೆಯ ಅಧ್ಯಕ್ಷೆ ಜೀತ್ ಕೌರ್ ಮಾತನಾಡಿ, ರಾಷ್ಟ್ರೀಯ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್​ನಲ್ಲಿ 5 ವರ್ಷದಿಂದ 100 ವರ್ಷ ಮೇಲ್ಪಟ್ಟ ಆಟಗಾರರು ವಿವಿಧ ಕ್ರೀಡೆಗಳಲ್ಲಿ ಸ್ಪರ್ಧಿಸುತ್ತಿದ್ದಾರೆ. ಕ್ರೀಡೆಯತ್ತ ಆಸಕ್ತಿ ಹೆಚ್ಚಿಸುವ ನಿಟ್ಟಿನಲ್ಲಿ ಪ್ರತಿ ವರ್ಷ ಬೇರೆ ಬೇರೆ ರಾಜ್ಯಗಳಲ್ಲಿ ಚಾಂಪಿಯನ್‌ಶಿಪ್ ಆಯೋಜಿಸಲಾಗುತ್ತಿದೆ ಎಂದು ತಿಳಿಸಿದರು. ಆಳ್ವಾರ್ ಮಾಜಿ ಸಂಸದೆ ಮಾತನಾಡಿ, ಯುವರಾಣಿ ಮಹೇಂದ್ರ ಕುಮಾರಿ ಅವರ ಪುಣ್ಯತಿಥಿಯನ್ನು ಆಟದ ರೂಪದಲ್ಲಿ ಆಚರಿಸಲಾಗಿದೆ ಎಂದರು. ನಾಳೆ ನಡೆಯುವ ಸ್ಪರ್ಧೆಯ ಸಮಾರೋಪ ಸಮಾರಂಭದಲ್ಲಿ ಕೇಂದ್ರ ಗೃಹ ಖಾತೆಯ ಮಾಜಿ ರಾಜ್ಯ ಸಚಿವ ಭನ್ವರ್ ಜಿತೇಂದ್ರ ಸಿಂಗ್ ಭಾಗವಹಿಸಲಿದ್ದಾರೆ.


Spread the love

About Laxminews 24x7

Check Also

ಭಕ್ತಾದಿಗಳಿಗೆ ಮೂಲಭೂತ ಸೌಕರ್ಯ ಒದಗಿಸಿ ; ಕೊಲ್ಲಾಪುರ ಜಿಲ್ಲಾ ರೇಣುಕಾ ಭಕ್ತ ಸಂಘಟನೆಯ ಆಗ್ರಹ

Spread the loveಭಕ್ತಾದಿಗಳಿಗೆ ಮೂಲಭೂತ ಸೌಕರ್ಯ ಒದಗಿಸಿ ; ಕೊಲ್ಲಾಪುರ ಜಿಲ್ಲಾ ರೇಣುಕಾ ಭಕ್ತ ಸಂಘಟನೆಯ ಆಗ್ರಹ ಇಂದು ಬೆಳಗಾವಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ