ಬೆಳಗಾವಿ: ಜುಲೈ 13 ರಂದು ಮೌಢ್ಯ ವಿರುದ್ದ ವಿಭಿನ್ನ ರೀತಿಯ ಹೋರಾಟದ ಕಾರ್ಯಕ್ರಮವೊಂದನ್ನು ಹಮ್ಮಿಕೊಂಡಿದ್ದೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಮಾನವ ಬಂಧುತ್ವ ವೇದಿಕೆ ಸಂಸ್ಥಾಪಕ ಸತೀಶ ಜಾರಕಿಹೊಳಿ ಹೇಳಿದ್ರು.

ಮೌಢ್ಯ ವಿರೋಧ ಕಾರ್ಯಕ್ರಮದ ವಿಚಾರವಾಗಿ ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜು. 13 ರಂದು ಬೆಳಗ್ಗೆ 11 ಗಂಟೆಗೆ ಸದಾಶಿವನಗರ ಬುದ್ದ, ಬಸವ, ಅಂಬೇಡ್ಕರ್ ಶಾಂತಿಧಾಮದಲ್ಲಿ ವಿನೂತನ ಕಾರ್ಯಕ್ರಮ ನಡೆಯಲಿದೆ. ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮವನ್ನು ಸಾಮಾಜಿಕ ಜಾಲತಾಣದ ಮೂಲಕ ಪ್ರಸಾರ ಮಾಡಲಾಗುವುದು. ಅಲ್ಲಿಯೇ ವೀಕ್ಷಿಸಿ ಎಂದು ತಮ್ಮ ಅಭಿಮಾನಿಗಳಿಗೆ ಕರೆ ನೀಡಿದರು.
ಯಾವ ಕಾರ್ಯಕ್ರಮ ಆಯೋಜಿಸಿದ್ದೀರಿ ಎಂದು ಮಾಧ್ಯಮದವರು ಪ್ರಶ್ನಿಸಿದರು, ಜು. 13 ರಂದೇ ಆ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡುವುದಾಗಿ ಹೇಳಿದ್ರು.
ಶಾಸಕ ಸತೀಶ ಜಾರಕಿಹೊಳಿ ಅವರು ಸಂಸ್ಥಾಪಿಸಿರುವ ಮಾನವ ಬಂಧುತ್ವ ವೇದಿಕೆ ಸಂಘಟನೆ ಕಳೆದ ಹಲವು ವರ್ಷಗಳಿಂದ ಮೂಢನಂಬಿಕೆ, ಕಂದಾಚಾರ ಬಗ್ಗೆ ಜನರಿಗೆ ಜಾಗೃತಿ ಮೂಡಿಸುತ್ತಿದೆ.
Laxmi News 24×7