Breaking News

ಸ್ಮಾರ್ಟ್ ಸಿಟಿ ಯೋಜನೆ ಬೆಳಗಾವಿ ಮತ್ತು ತುಮಕೂರು ನಗರಗಳಲ್ಲಿ ಅಕ್ರಮ ನಡೆದಿರುವ ಕುರಿತು ದೂರು

Spread the love

ಬೆಂಗಳೂರು: ರಾಜ್ಯದ ನಗರ ಪ್ರದೇಶಗಳಲ್ಲಿರುವ ಅನಧಿಕೃತ ನಿವೇಶನ ಮತ್ತು ಕಟ್ಟಡಗಳಿಗೆ ಬಿ ಖಾತಾ ನೀಡಲು ಸರ್ಕಾರ ನಿರ್ಧರಿಸಿದೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ತಿಳಿಸಿದರು.

ವಿಧಾನಸೌಧದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ರೀತಿ ಬಿ ಖಾತಾ ನೀಡಿದರೆ ಸರ್ಕಾರದ ಬೊಕ್ಕಸಕ್ಕೆ 1100 ಕೋಟಿ ರೂ. ಆದಾಯ ಬರಲಿದೆ. ಬೆಂಗಳೂರು ಹೊರತುಪಡಿಸಿ ರಾಜ್ಯದ ಎಲ್ಲ ನಗರ ಪ್ರದೇಶಗಳ ವ್ಯಾಪ್ತಿಯಲ್ಲಿರುವ ಅನಧಿಕೃತ ನಿವೇಶನ ಮತ್ತು ಕಟ್ಟಡಗಳಿಗೆ ಬಿ ಖಾತಾ ನೀಡಿದರೆ ಆಸ್ತಿದಾರರು ಸಾಲ ಪಡೆಯಲು, ಸ್ವತ್ತನ್ನು ಮಾರಾಟ ಮಾಡಲು ಸಾಧ್ಯವಾಗುತ್ತದೆ ಎಂದರು.

ಬಿ ಖಾತಾ ಇಲ್ಲದ ಪರಿಣಾಮವಾಗಿ ರಾಜ್ಯದ ನಗರ ಪ್ರದೇಶಗಳ ಲಕ್ಷಾಂತರ ಮಂದಿ ಪಡಿಪಾಟಲು ಪಡುತ್ತಿದ್ದಾರೆ. ಗಮನದಲ್ಲಿಟ್ಟುಕೊಂಡು ಅವರಿಗೆ ಬಿ ಖಾತಾ ನೀಡಲು ತೀರ್ಮಾನಿಸಲಾಗಿದೆ. ಇದೇ ರೀತಿ ರಾಜ್ಯದ ನಗರ ಪ್ರದೇಶಗಳಲ್ಲಿ ಅಕ್ರಮವಾಗಿ ಕಟ್ಟಿರುವ ಕಟ್ಟಡಗಳನ್ನು 94(ಸಿ) ಅಡಿ ಸಕ್ರಮಗೊಳಿಸುವ ಕಾರ್ಯ ನೆನೆಗುದಿಗೆ ಬಿದ್ದಿದ್ದು, ಸರ್ವೋಚ್ಚ ನ್ಯಾಯಾಲಯದಲ್ಲಿ ಪ್ರಕರಣ ಹಾಗೆಯೇ ಉಳಿದಿದೆ. ಈ ಹಿನ್ನೆಲೆಯಲ್ಲಿ ರಚನೆಯಾಗಿರುವ ಸಮಿತಿಯಿಂದ ವರದಿ ಬಂದ ಕೂಡಲೇ ಸರ್ವೋಚ್ಚ ನ್ಯಾಯಾಲಯದ ಗಮನಕ್ಕೆ ತರುತ್ತೇವೆ. ಅದು ನೀಡುವ ಆದೇಶವನ್ನು ಪಾಲಿಸುತ್ತೇವೆ ಎಂದು ಸ್ಪಷ್ಟಪಡಿಸಿದರು.

ಇದೇ ರೀತಿ ರಾಜ್ಯದ ಹಲವು ನಗರಗಳಲ್ಲಿ ಕೈಗೆತ್ತಿಕೊಂಡಿರುವ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಅಕ್ರಮಗಳಾಗಿರುವ ಕುರಿತು ದೂರುಗಳಿದ್ದು, ಈ ಹಿನ್ನೆಲೆಯಲ್ಲಿ ಸ್ಮಾರ್ಟ್ ಸಿಟಿ ಯೋಜನೆಯ ಕಾಮಗಾರಿಯನ್ನು ತನಿಖೆಗೆ ಒಳಪಡಿಸಲಾಗುವುದು. ಬೆಳಗಾವಿ ಮತ್ತು ತುಮಕೂರು ನಗರಗಳಲ್ಲಿ ಅಕ್ರಮ ನಡೆದಿರುವ ಕುರಿತು ದೂರುಗಳಿದ್ದು ಕಳಪೆ ಕಾಮಗಾರಿಗಳು ನಡೆದಿವೆ ಎಂಬ ಮಾಹಿತಿ ಇದೆ. ಹೀಗಾಗಿ ತನಿಖೆಗೆ ಒಳಪಡಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಸ್ಮಾರ್ಟ್ ಸಿಟಿ ಯೋಜನೆಯ ಲೋಪಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅವರು, ಯೋಜನೆಯಲ್ಲಿ ಒಂದು ನಗರದ ಕೆಲವೇ ವಾರ್ಡುಗಳನ್ನು ಅಭಿವೃದ್ಧಿಪಡಿಸಲಾಗಿದೆ. ಆ ಮೂಲಕ ಅಭಿವೃದ್ಧಿಯಾದ ವಾರ್ಡುಗಳ ಪಕ್ಕದಲ್ಲೇ ಅಭಿವೃದ್ಧಿಯಾಗದ ವಾರ್ಡುಗಳು ಇವೆ. ಹೀಗೆ ಒಂದು ನಗರದ ಕೆಲವೇ ಭಾಗಗಳು ಅಭಿವೃದ್ಧಿಯಾಗಿ ಇನ್ನೂ ಹಲವು ಭಾಗಗಳು ಅಭಿವೃದ್ಧಿಯಾಗದೆ ಹೋದರೆ ಹೇಗೆ?ಎಂದು ಪ್ರಶ್ನಿಸಿದ ಅವರು, ಸ್ಮಾರ್ಟ್ ಸಿಟಿ ಯೋಜನೆಯಡಿ ರಾಜ್ಯದ ಹಲವು ನಗರಗಳಲ್ಲಿ ಕಾಮಗಾರಿ ಮುಗಿಯುತ್ತಾ ಬಂದಿದ್ದು, ಬಹುತೇಕ ಕೆಲಸ ಪೂರ್ಣವಾಗಿದೆ ಎಂದು ಬಿಲ್ ಪಡೆಯಲಾಗಿದೆ ಎಂದರು.


Spread the love

About Laxminews 24x7

Check Also

ಸೌಕರ್ಯ, ಸಿಬ್ಬಂದಿ: ಕೊರತೆ ಆಸ್ಪತ್ರೆಗೇ ಬೇಕಿದೆ ಚಿಕಿತ್ಸೆ!

Spread the love ಚಿಕ್ಕೋಡಿ: ಪಟ್ಟಣದ ಹೊರವಲಯದಲ್ಲಿ ₹20 ಕೋಟಿ ವೆಚ್ಚದಲ್ಲಿ ಐದು ಎಕರೆಯಲ್ಲಿ ತಲೆ ಎತ್ತಿರುವ ತಾಯಿ ಮತ್ತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ