Breaking News

BJP IT CELL ಉಸ್ತುವಾರಿ ಅಮಿತ್ ಮಾಳವೀಯ ವಿರುದ್ಧ ಎಫ್​ಐಆರ್​ ದಾಖಲು

Spread the love

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಅವಹೇಳಕಾರಿ ಪೋಸ್ಟ್ ಹಾಗೂ ವಿಡಿಯೊ ಬಿತ್ತರಿಸುವ ಮೂಲಕ ರಾಷ್ಟ್ರೀಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ತೇಜೋವಧೆ ಮಾಡಿರುವುದಾಗಿ ಆರೋಪಿಸಿ ಬಿಜೆಪಿ ರಾಷ್ಟ್ರೀಯ ಐಟಿ ಸೆಲ್ ಉಸ್ತುವಾರಿ ಅಮಿತ್ ಮಾಳವಿಯ ವಿರುದ್ಧ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

ಕೆಪಿಸಿಸಿ ಸಂವಹನ ವಿಭಾಗದ ಸಹ ಅಧ್ಯಕ್ಷ ರಮೇಶ್ ಬಾಬು ನೀಡಿದ ದೂರಿನ‌ ಮೇರೆಗೆ ಅಮಿತ್ ಮಾಳವಿಯ ವಿರುದ್ಧ ಐಪಿಸಿ 153 ಬಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ, 120ಬಿ ಒಳಸಂಚು, 505 ಬೆದರಿಕೆಯಡಿ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಕೇಸ್​ ಕೊಡಲಾಗಿದೆ. ”ರಾಹುಲ್ ಗಾಂಧಿ ವಿದೇಶಕ್ಕೆ ಹೋದಾಗಲೆಲ್ಲಾ ದೇಶದ ಬಗ್ಗೆ ಕಳಮಟ್ಟದಲ್ಲಿ ಮಾತನಾಡುತ್ತಾರೆ ಎಂಬ ವಿಚಾರವನ್ನು ವಿಡಿಯೋದಲ್ಲಿ ತೋರಿಸಲಾಗಿದೆ. ಅಲ್ಲದೇ ಆಂತಕವಾದಿಗಳಿಗಿಂತಲೂ ರಾಹುಲ್ ಗಾಂಧಿ ಅಪಾಯಕಾರಿ ಎಂದು ಅಣಕಿಲಾಗಿದೆ. ಇದು ವಿವಿಧ ವರ್ಗಗಳ ಕೋಮುಭಾವನೆಗೆ ಧಕ್ಕೆ ಹಾಗೂ ಸಮಾಜದ‌ಲ್ಲಿ ಅಶಾಂತಿ ಸೃಷ್ಟಿಯಾಗುವ ರೀತಿಯಲ್ಲಿ ಐಟಿ ಸೆಲ್‌ ಉಸ್ತುವಾರಿ ಅಮಿತ್ ಮಾಳವಿಯ ಪೋಸ್ಟ್ ಮಾಡಿರುವುದು ಖಂಡನಾರ್ಹ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ರಮೇಶ್ ಬಾಬು ದೂರು ನೀಡಿದ ಮೇರೆಗೆ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

15 ವರ್ಷಗಳಿಂದ ವಾಸವಾಗಿದ್ದೀವಿ ಸೂರು ಕೊಡಿ, ಅಲೆಮಾರಿಗಳ ಅಳಲು

Spread the loveಮೈಸೂರು: ಮೈಸೂರಿನ ಸಾತಗಳ್ಳಿ ಅಂಬೇಡ್ಕರ್ ಕಾಲೋನಿಗೆ ಶನಿವಾರ ಭೇಟಿ ನೀಡಿದ ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ