ವಿಜಯಪುರ: ಉದ್ಯಮಿ ಡಾ.ವಿಜಯ ಸಂಕೇಶ್ವರ ಅವರ ತ್ಯಾಗದಿಂದ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಕೇಂದ್ರದಲ್ಲಿ ಸಚಿವರಾಗಿದ್ದರು ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ ಹೇಳಿದರು. ವಿಜಯಪುರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯತ್ನಾಳ್ ಅಣು ಪರೀಕ್ಷೆ ಸಂದರ್ಭದಲ್ಲಿ ಕಾಂಗ್ರೆಸ್ ಸೇರಲು ತುದಿಗಾಲ ಮೇಲೆ ನಿಂತಿದ್ದರು. ಅಂದು ಇವರನ್ನು ದಿ. ಅನಂತ್ ಕುಮಾರ್ ತಡೆದರು. ನಂತರ ಜೆಡಿಎಸ್ ಸೇರಿ ಟೋಪಿ ಹಾಕಿಕೊಂಡು ನಮಾಜ್ ಮಾಡಿದ್ದರು ಎಂದು ಯತ್ನಾಳ್ ವಿರುದ್ಧ ವಾಗ್ದಾಳಿ ನಡೆಸಿದರು.
ಈಗ ಹಿಂದೂ ಹುಲಿ ಎಂದು ಹೇಳುವುದು ಹಾಸ್ಯಾಸ್ಪದ. ವಿಜಯಪುರದಲ್ಲಿ ಹೇಗೆ ಗೆದ್ದಿದ್ದೀರಿ ಎಂಬುದು ಎಲ್ಲರಿಗೂ ಗೊತ್ತಿದೆ ಎಂದು ಬಿಡಿಸಿ ಹೇಳುವ ಅವಶ್ಯಕತೆ ಇಲ್ಲ. ಬೇರೆ ಜಿಲ್ಲೆಯಲ್ಲಿ ಬಿಡಿ ವಿಜಯಪುರ ಜಿಲ್ಲೆಯಲ್ಲೂ ಯಾರೊಬ್ಬ ಬಿಜೆಪಿ ಶಾಸಕರನ್ನೂ ಗೆಲ್ಲಿಸಲಿಲ್ಲ. ಮಾಜಿ ಸಿಎಂ ಯಡಿಯೂರಪ್ಪ, ಈಶ್ವರಪ್ಪ, ಶೋಭಾ ಕರಂದ್ಲಾಜೆ, ಜಗದೀಶ್ ಶೆಟ್ಟರ್, ಪ್ರಹ್ಲಾದ ಜೋಶಿ, ವಿಜಯ ಸಂಕೇಶ್ವರ ಸೇರಿದಂತೆ ಎಲ್ಲರಿಗೂ ಬೈದಿದ್ದಾರೆ ಎಂದು ಹರಿಹಾಯ್ದರು.
Laxmi News 24×7