Breaking News

ಬೆಂಗಳೂರು- ಮೈಸೂರು ಎಕ್ಸ್​ಪ್ರೆಸ್​ ವೇನಲ್ಲಿ ಮತ್ತೆ ಅಪಘಾತ: ಬಸ್​ ಕಂಡಕ್ಟರ್​ ಸಾವು

Spread the love

ರಾಮನಗರ: ಬೆಂಗಳೂರು- ಮೈಸೂರು ದಶಪಥ ಹೆದ್ದಾರಿಯಲ್ಲಿ ಪ್ಲೈವುಡ್ ತುಂಬಿದ್ದ ಬೊಲೆರೋ ವಾಹನಕ್ಕೆ ಕೆಎಸ್‌ಆರ್​ಟಿಸಿ ಬಸ್ ಡಿಕ್ಕಿಯಾದ ಪರಿಣಾಮ ಬಸ್ ನಿರ್ವಾಹಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ.

ರಾಮನಗರ ತಾಲೂಕಿನ ವಿಜಯಪುರ ಗ್ರಾಮದ ಬಳಿ ಇಂದು ಘಟನೆ ನಡೆದಿದೆ. ಬಸ್​ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ರಾಮನಗರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಕೆಎಸ್‌ಆರ್​ಟಿಸಿ ಎಲೆಕ್ಟ್ರಿಕ್ ಬಸ್ ಮೈಸೂರಿನಿಂದ ಬೆಂಗಳೂರು ಕಡೆಗೆ ಹೋಗುತ್ತಿತ್ತು. ಫ್ಲೈವುಡ್ ತುಂಬಿದ್ದ ಬೊಲೆರೋ ವಾಹನ ಓವರ್ ಟೇಕ್ ಮಾಡಲು ಹೋಗಿ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಬೆಂಗಳೂರು- ಮೈಸೂರು ಎಕ್ಸ್​ಪ್ರೆಸ್​ ವೇನಲ್ಲಿ ಪ್ರತಿದಿನ ಒಂದಿಲ್ಲೊಂದು ಅಪಘಾತ ಸಂಭವಿಸುತ್ತಲೆ ಇದೆ. ಇತ್ತ ಸರ್ಕಾರ ಮಾತ್ರ ಈ ಬಗ್ಗೆ ತಲೆಕೆಡಿಸಿಕೊಳ್ಳುತ್ತಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಘಟನಾ ಸ್ಥಳಕ್ಕೆ ರಾಮನಗರ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಾಮನಗರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ