Breaking News
Home / ರಾಜಕೀಯ / ಮಹಿಳೆ ಮೇಲೆ ಅತ್ಯಾಚಾರ ಎಸಗಿ ಹತ್ಯೆ, ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್

ಮಹಿಳೆ ಮೇಲೆ ಅತ್ಯಾಚಾರ ಎಸಗಿ ಹತ್ಯೆ, ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್

Spread the love

ಮಂಗಳೂರು: ಮನೆಗೆ ನುಗ್ಗಿ ಒಂಟಿ ಮಹಿಳೆಯನ್ನು ಅತ್ಯಾಚಾರ ಮಾಡಿ, ಹತ್ಯೆ ನಡೆಸಿರುವ ಪ್ರಕರಣ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ ಕಠಿಣ ಜೀವಾವಧಿ ಶಿಕ್ಷೆ ವಿಧಿಸಿ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ.

ಮಂಜೇಶ್ವರ ನಿವಾಸಿ ಮೊಹಮ್ಮದ್‌ ಅಶ್ರಫ್‌ (33) ಶಿಕ್ಷೆಗೊಳಗಾದ ಅಪರಾಧಿ.

ಮೊಹಮ್ಮದ್‌ ಅಶ್ರಫ್‌ ಕೂಲಿ ಕೆಲಸ ಮಾಡಿಕೊಂಡಿದ್ದು, ವಿವಾಹವಾಗಿ ಇಬ್ಬರು ಮಕ್ಕಳಿದ್ದಾರೆ. ಈತ ಬಾಳೆಪುಣಿ ಗ್ರಾಮದ ಬೆಳ್ಕೆರಿಯಲ್ಲಿರುವ ಸಂತ್ರಸ್ತ ಮಹಿಳೆಯ ಸಹೋದರನ ಮನೆಗೆ ತೋಟದ ಕೆಲಸಕ್ಕೆ ಹೋಗಿದ್ದ. ಆ ವೇಳೆ ಮಹಿಳೆ ಮನೆಯಲ್ಲಿ ಒಂಟಿಯಾಗಿರುವುದನ್ನು ಗಮನಿಸಿದ್ದನು. ಒಂದು ದಿನ ಬಾವಿಗೆ ಹೆಬ್ಬಾವು ಬಿದ್ದಿರುವುದನ್ನು ತೆಗೆಯಲು ಹೋದಾಗ ಆಕೆಯನ್ನು ಪರಿಚಯ ಮಾಡಿಕೊಂಡಿದ್ದನು. ಬಳಿಕ ಮಹಿಳೆಯನ್ನು ಅತ್ಯಾಚಾರ ಮಾಡುವ ಉದ್ದೇಶದಿಂದಲೇ 2020ರ ಸೆ.24ರಂದು ಬೆಳಗ್ಗೆ 10ಗಂಟೆಗೆ ಮನೆಗೆ ಅಕ್ರಮವಾಗಿ ಪ್ರವೇಶಿಸಿ ಬಾಗಿಲು ಲಾಕ್ ಮಾಡಿಕೊಂಡಿದ್ದ. ಈ ವೇಳೆ ಬಾತ್‌ರೂಮ್‌ನಲ್ಲಿ ಕ್ಲೀನ್‌ ಮಾಡುತ್ತಿದ್ದ ಮಹಿಳೆಯನ್ನು ಹಿಂದಿನಿಂದ ಬಿಗಿಯಾಗಿ ಹಿಡಿದು ನೆಲಕ್ಕೆ ಬೀಳಿಸಿದ್ದ. ಇದರಿಂದ ಪ್ರಜ್ಞಾಹೀನವಾಗಿ ಬಿದ್ದ ಸಂತ್ರಸ್ತೆ ಮೇಲೆ ಅತ್ಯಾಚಾರವಸೆಗಿ ಉಸಿರುಗಟ್ಟಿಸಿ ಹತ್ಯೆ ಮಾಡಿದ್ದ.

ಆ ಬಳಿಕ ಮಹಿಳೆಯ ಕಿವಿಯೋಲೆ, ಮನೆಯಲ್ಲಿದ್ದ 18 ಸಾವಿರ ರೂ. ದೋಚಿದ್ದಲ್ಲದೇ ಮಹಿಳೆಯ ಮೈಮೇಲಿನ ಬಟ್ಟೆಗಳಿಗೆ ಬೆಂಕಿ ಇಟ್ಟು ಸುಟ್ಟು ಸಾಕ್ಷ್ಯ ನಾಶ ಮಾಡಿದ್ದ. ಬಳಿಕ ಅಲ್ಲಿಂದ ಪರಾರಿ ಆಗಿದ್ದ. ಪ್ರಕರಣ ದಾಖಲಿಸಿಕೊಂಡ ಕೊಣಾಜೆ ಪೊಲೀಸರು ತನಿಖೆ ನಡೆಸಿ ಆರೋಪಿಯನ್ನು 2021ರ ಜು.13ರಂದು ಬಂಧಿಸಿದ್ದರು.

ಮಂಗಳೂರು ದಕ್ಷಿಣ ಉಪವಿಭಾಗ ಸಹಾಯಕ ಪೊಲೀಸ್‌ ಆಯುಕ್ತ ರಂಜಿತ್‌ ಕುಮಾರ್‌ ಬಂಡಾರು ವಿಶೇಷ ತನಿಖಾಧಿಕಾರಿಯಾಗಿ, ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಕಾಂತರಾಜು ಎಸ್‌.ವಿ. ವಿಚಾರಣೆ ನಡೆಸಿ ವಿವಿಧ ಐಪಿಸಿ ಸೆಕ್ಷನ್ ಅಡಿಯಲ್ಲಿ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ 3,01,000 ಲಕ್ಷ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ.


Spread the love

About Laxminews 24x7

Check Also

ಅಂಗನವಾಡಿಗಳಿಗೆ ಕಳಪೆ ಆಹಾರ ಉತ್ಪನ್ನಗಳು ಪೂರೈಕೆಯಾದರೆ ಕಠಿನ ಕ್ರಮ

Spread the love ಬೆಳಗಾವಿ: ಅಂಗನವಾಡಿಗಳಿಗೆ ಕಳಪೆ ಗುಣಮಟ್ಟದ ಪೂರಕ ಆಹಾರ ಉತ್ಪನ್ನಗಳು ಪೂರೈಕೆಯಾದರೆ ಸಂಬಂಧಿಸಿದ ಜಿಲ್ಲೆಯ ಉಪನಿರ್ದೇಶಕರ ವಿರುದ್ಧ ಕಠಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ