Breaking News

ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ: ಇಬ್ಬರು ಸಾವು, 4 ಮಂದಿಗೆ ಗಾಯ.

Spread the love

ಹಾವೇರಿ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರು ಗ್ರಾಮದ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ನಡೆದಿದೆ.

ಬಸ್ ಚಾಲಕ 50 ವರ್ಷದ ಸದಾನಂದ ಬೆಳಗಾವಿ ಮತ್ತು ಪ್ರಯಾಣಿಕ ರಾಹುಲ್​ (22) ಮೃತರಾಗಿದ್ದಾರೆ. ಘಟನೆಯಲ್ಲಿ ನಾಲ್ವರಿಗೆ ಗಾಯವಾಗಿದ್ದು, ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.

ಬೆಂಗಳೂರಿನಿಂದ ಮೀರಜ್​ಗೆ ಹೋಗುತ್ತಿದ್ದ ಸಂದರ್ಭದಲ್ಲಿ ನಸುಕಿನ ಜಾವ ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ರಸ್ತೆ ಡಿವೈಡರ್​ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಬ್ಯಾಡಗಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಅವಘಡ ಸಂಭವಿಸಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಗೊಂಡ ಬಸ್​ನೊಳಗಿಂದ ಸಿಲುಕಿದ್ದ ಮೃತದೇಹವನ್ನು ಹೊರತೆಗೆಯಲು ಪೊಲೀಸರು ಹರಸಾಹಸ ಪಡಬೇಕಾಯಿತು.

ಬಸ್​ ಪಲ್ಟಿಯಾಗಿದ್ದರಿಂದ ಚಾಲಕ ಹಾಗೂ ಪ್ರಯಾಣಿಕ ಗಂಭೀರ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳಿದಿದ್ದಾರೆ. ಅಪಘಾತದ ಪರಿಣಾಮ ಬಸ್​ನ ಗಾಜು ಪುಡಿ ಪುಡಿಯಾಗಿದೆ. ಮೃತದೇಹಗಳನ್ನ ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ಬ್ಯಾಡಗಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಆನೇಕಲ್​ನಲ್ಲಿ ಬ್ಯಾರಿಕೇಡ್​ಗೆ ಡಿಕ್ಕಿ ಹೊಡೆದು ಕಂಟೈನರ್ ಪಲ್ಟಿ: ಮಿಲ್ಕಿ ಮಿಸ್ಟ್​ ಕಂಟೈನರ್​ ರಸ್ತೆ ಬ್ಯಾರಿಕೇಡ್​ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಚಾಲಕ ಹಾಗೂ ಕ್ಲೀನರ್​ ಸಾವನ್ನಪ್ಪಿರುವ ಘಟನೆ ಬುಧವಾರ ಬೆಳಗ್ಗೆ ನಡೆದಿತ್ತು. ಚಾಲಕ ನಿದ್ರಾ ಸ್ಥಿತಿಯಲ್ಲಿ ವಾಹನ ಚಾಲನೆ ಮಾಡಿದ್ದರಿಂದ ಘಟನೆ ಸಂಭವಿಸಿದೆ ಎಂದು ಮೇಲ್ನೋಟಕ್ಕೆ ಕಂಡು ಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಅಪಘಾತದಲ್ಲಿ ಸಾವನ್ನಪ್ಪಿದ ಚಾಲಕ ಕಾರ್ತಿಕೇಯನ್​ ಹಾಗು ಕ್ಲೀನರ್ ಉದಯ್​ ಕುಮಾರ್​​ ತಮಿಳುನಾಡಿನ ಈರೋಡಿನವರಾಗಿದ್ದಾರೆ. ಅಪಘಾತಗೊಂಡ ವಾಹನ ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದಲ್ಲಿನ ಮಿಲ್ಕಿಮಿಸ್ಟ್​ ಮೊಸರು ಪಾಕೆಟ್​ಗಳನ್ನು ವೈಟ್​ಫೀಲ್ಡ್​ ಮಾರಾಟ ಕೇಂದ್ರಕ್ಕೆ ಸಾಗಿಸುವುದಾಗಿತ್ತು.

ರಾಮನಗರದಲ್ಲಿ ಬೊಲೆರೊ ವಾಹನಕ್ಕೆ ಕೆಎಸ್​ಆರ್​ಟಿಸಿ ಬಸ್​ ಡಿಕ್ಕಿ: ನಿನ್ನೆ(ಬುಧವಾರ) ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಪ್ಲೈವುಡ್​ ತುಂಬಿದ್ದ ಬೊಲೆರೊ ವಾಹನಕ್ಕೆ ಕೆಸ್​ಆರ್​ಟಿಸಿ ಬಸ್​ ಡಿಕ್ಕಿ ಹೊಡೆದಿತ್ತು. ಪರಿಣಾಮ ಬಸ್ ನಿರ್ವಾಹಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಚಾಲಕ ಗಂಭೀರವಾಗಿ ಗಾಯಗೊಂಡಿದ್ದರು. ರಾಮನಗರ ತಾಲೂಕಿನ ವಿಜಯಪುರ ಗ್ರಾಮದ ಬಳಿ ನಿನ್ನೆ ಘಟನೆ ನಡೆದಿದೆ. ಬಸ್​ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಲಾಗಿತ್ತು.


Spread the love

About Laxminews 24x7

Check Also

ಮಹಿಷ ದಸರಾ | ಯಾರಿಗೂ ತೊಂದರೆ ಆಗದಂತೆ ಮಾಡಿಕೊಳ್ಳಬಹುದು: ಮಹದೇವಪ್ಪ

Spread the love ಮೈಸೂರು: ‘ಯಾರಿಗೂ, ಯಾವ ತೊಂದರೆಯೂ ಆಗದಂತೆ ಯಾರು ಬೇಕಾದರೂ ಅವರವರ ಧಾರ್ಮಿಕ ಆಚರಣೆ ಮಾಡಿಕೊಳ್ಳಬಹುದು’ ಎಂದು ಜಿಲ್ಲಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ