Breaking News

ಸಕ್ಕರೆನಾಡಲ್ಲಿ ಹಾಡಹಗಲೇ ರೌಡಿಶೀಟರ್ ಬರ್ಬರ ಹತ್ಯೆ.. ಭಯಾನಕ ಕೊಲೆ ಕಂಡು ಬೆಚ್ಚಿಬಿದ್ದ ಮಂಡ್ಯ ಜನರು

Spread the love

ಮಂಡ್ಯ: ಜಿಲ್ಲೆಯಲ್ಲಿ ಜನರು ಬೆಚ್ಚಿ ಬೀಳುವಂತಹ ಭಯಾನಕ ಕೊಲೆ ಪ್ರಕರಣ ಇಂದು ನಡೆದಿದೆ. ರೌಡಿಶೀಟರ್ ಒಬ್ಬನನ್ನು ಸ್ನೇಹಿತರೇ ಕತ್ತು ಕತ್ತರಿಸಿ ಕೊಲೆ ಮಾಡಿರುವಂತಹ ಭೀಕರ ಘಟನೆ ಶ್ರೀರಂಗಪಟ್ಟಣದ ಬಳಿ ನಡೆದಿದೆ.

 

ಸ್ನೇಹಿತರು ಪಾರ್ಟಿ ಮಾಡುವ ವೇಳೆಯಲ್ಲಿ ಗಲಾಟೆ: ಶ್ರೀರಂಗಪಟ್ಟಣ ತಾಲೂಕಿನ ಹುಲಿಕೆರೆಯ ಕೆಆರ್​ಎಸ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ರೌಡಿ ಶೀಟರ್ ಆಗಿದ್ದಂತಹ ಸುಧೀರ್ (35) ಎಂಬಾತನನ್ನು ಭಯಾನಕವಾಗಿ ಹತ್ಯೆ ಮಾಡಲಾಗಿದೆ. ರೌಡಿ ಶೀಟರ್ ಸುಧೀರ್ ಹಾಗೂ ಸ್ನೇಹಿತರೊಂದಿಗೆ ಇಂದು ಎಣ್ಣೆ ಪಾರ್ಟಿ ಮಾಡಿದ್ದಾರೆ. ಸ್ನೇಹಿತ ಪೂರ್ಣಚಂದ್ರ ಹಾಗೂ ಇತರೆ ಸ್ನೇಹಿತರು ಪಾರ್ಟಿ ಮಾಡುವ ಸಂದರ್ಭದಲ್ಲಿ ಗಲಾಟೆ ಶುರುವಾಗಿದೆ.

ಪಾರ್ಟಿಯ ಮಧ್ಯೆ ಹೊತ್ತಿಕೊಂಡಂತ ಜಗಳ ತಾರಕಕ್ಕೇರಿದೆ. ಇದರಿಂದಾಗಿ ಪಾರ್ಟಿಯಿಂದ ಅರ್ಧಕ್ಕೆ ಹುಲಿಕೆರೆಯ ರಸ್ತೆ ಬಳಿಗೆ ರೌಡಿ ಶೀಟರ್ ಸುಧೀರ್ ಎದ್ದು ಬಂದಿದ್ದಾನೆ. ಆದ್ರೇ ಆತನನ್ನು ಹಿಂಬಾಲಿಸಿಕೊಂಡು ಬಂದಂತಹ ಪೂರ್ಣಚಂದ್ರ ಹಾಗೂ ಸ್ನೇಹಿತರು ಸುಧೀರ್ ಕುತ್ತಿಗೆ ಕತ್ತರಿಸಿದ್ದಾರೆ.

ಕೆಆರ್​ಎಸ್ ಪೊಲೀಸ್ ಠಾಣೆಗೆ ಮಾಹಿತಿ: ಸುಧೀರ್ ತಲೆಯನ್ನು ಕತ್ತರಿಸಿದಂತಹ ಪೂರ್ಣಚಂದ್ರ ಹಾಗೂ ಸ್ನೇಹಿತರು ಅಲ್ಲಿಂದ ಪರಾರಿಯಾಗಿದ್ದಾರೆ. ಹುಲಿಕೆರೆಯ ರಸ್ತೆಯ ಬಳಿಯಲ್ಲಿ ಭಯಾನಕ ಮರ್ಡರ್ ಕಂಡು ಸ್ಥಳೀಯರು ಬೆಚ್ಚಿ ಬಿದ್ದಿದ್ದಾರೆ. ಈ ಬಗ್ಗೆ ಕೆಆರ್​ಎಸ್ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ಕೊಲೆಯಾದ ರೌಡಿ ಶೀಟರ್ ಸುಧೀರ್ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ರೌಡಿ ಶೀಟರ್ ಸುಧೀರ್​ನನ್ನು ಸ್ನೇಹಿತರೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಕ್ಕೆ ಕಾರಣ ಹಳೆ ದ್ವೇಷ ಎನ್ನಲಾಗುತ್ತಿದೆ. ಈ ಬಗ್ಗೆ ಪೊಲೀಸರ ತನಿಖೆಯಿಂದ ಖಚಿತ ಮಾಹಿತಿ ತಿಳಿದು ಬರಬೇಕಿದೆ.

ಮಾರಕಾಸ್ತ್ರಗಳಿಂದ ಕೊಚ್ಚಿ ಅಪರಿಚಿತ ವ್ಯಕ್ತಿಯ ಬರ್ಬರ ಕೊಲೆ: ಇನ್ನೊಂದೆಡೆ ತಲಘಟ್ಟಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗೊಟ್ಟಿಗೆರೆ ಪಾಳ್ಯದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿದ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬನ ಶವ ಕಂಡು ಬಂದಿದೆ. ನೈಸ್ ರಸ್ತೆಯ ಫ್ಲೈಓವರ್ ಕೆಳಭಾಗದಲ್ಲಿ ಸರಿಸುಮಾರು 30 ವರ್ಷ ವಯಸ್ಸಿನ ವ್ಯಕ್ತಿಯ ಶವ ಪತ್ತೆಯಾಗಿದ್ದು, ತಡರಾತ್ರಿ ಕೊಲೆ ನಡೆದಿರಬಹುದು ಎಂದು ಶಂಕಿಸಲಾಗಿದೆ.


Spread the love

About Laxminews 24x7

Check Also

ಫ್ರಾನ್ಸ್ ಕೈಟ್ ಉತ್ಸವದಲ್ಲಿ ಮಂಗಳೂರಿನ ಗಾಳಿಪಟ: ಫ್ರೆಂಚರ ನಾಡಿನಲ್ಲಿ ಹಾರಲಿದೆ ‘ಕುಡ್ಲದ ತೇರು

Spread the love ಮಂಗಳೂರು: ಬಾನಾಡಿಯಲ್ಲಿ ಹಕ್ಕಿಗಳಂತೆ ಹಾರಾಡುವ ಗಾಳಿಪಟ ಈಗ ಅಂತಾರಾಷ್ಟ್ರೀಯ ಹಬ್ಬವಾಗಿದೆ. ಈ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ ಸೆಪ್ಟಂಬರ್​ನಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ