Breaking News

ಮನೆಯಲ್ಲಿ ಮಲಗಿದ್ದ ವ್ಯಕ್ತಿಯ ಮೇಲೆ ಹುಲಿ ದಾಳಿ‌

Spread the love

ಶಿವಮೊಗ್ಗ: ತಡರಾತ್ರಿ ಮನೆಯಲ್ಲಿ ಮಲಗಿದ್ದ ವ್ಯಕ್ತಿಯ ಮೇಲೆ ಹುಲಿ ದಾಳಿ‌ ನಡೆಸಿರುವ ಘಟನೆ ಸಾಗರ ತಾಲೂಕಿನ ಶರಾವತಿ ಹಿನ್ನೀರಿನ ಪ್ರದೇಶವಾದ ಬ್ಯಾಕೋಡು ಸಮೀಪದ ಎಸ್.ಎಸ್.ಬೋಗ್ ಗ್ರಾಮದಲ್ಲಿ ನಡೆದಿದೆ.

ಇಲ್ಲಿನ ಮರಾಠಿ ಗ್ರಾಮದ ಗಣೇಶ್ (47) ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಬುಧವಾರ ರಾತ್ರಿ ಸುಮಾರು 3 ಗಂಟೆಗೆ ಘಟನೆ ನಡೆದಿದೆ. ಗಣೇಶ್ ತಮ್ಮ ಗುಡಿಸಲಿನಲ್ಲಿ ಮಲಗಿದ್ದರು. ಈ ವೇಳೆ ನುಗ್ಗಿದ ಹುಲಿ ದಾಳಿ ನಡೆಸಿದೆ. ಇದರಿಂದಾಗಿ ಗಣೇಶ್ ಅವರ ಬಲಗೈಗೆ ಗಂಭೀರ ಸ್ವರೂಪದ ಗಾಯವಾಗಿದೆ. ಹುಲಿ‌ ಕಂಡ ಕೂಡಲೇ ಅವರು ಜೋರಾಗಿ ಕಿರುಚಿಕೊಂಡಿದ್ದಾರೆ. ಇದರಿಂದ ಬೆದರಿದ ಹುಲಿ ಸ್ಥಳದಿಂದ ಓಡಿಹೋಗಿದೆ.

ಅಷ್ಟರಲ್ಲಿ ಅಕ್ಕಪಕ್ಕದ ಮನೆಯವರು ಧಾವಿಸಿ ಬಂದಿದ್ದಾರೆ. ಗಾಯಾಳುವನ್ನು ಕುಂದಾಪುರದ ಸರ್ಕಾರಿ‌ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ.

ಅರಣ್ಯಾಧಿಕಾರಿಗಳು ಶೋಧ ನಡೆಸಿದ್ದಾರೆ. ಆದರೆ ಹುಲಿ ಪತ್ತೆಯಾಗಿಲ್ಲ.

 


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ