Breaking News

12 ವರ್ಷಗಳ ನಂತರ ಗೋಚರಿಸಿದ ಪುರಾತನ ದೇವಾಲಯ

Spread the love

ಚಿಕ್ಕೋಡಿ (ಬೆಳಗಾವಿ): ಜೂನ್ ತಿಂಗಳು ಮುಗಿದರೂ ಮಳೆ ಮಾತ್ರ ಆಗುವ ಲಕ್ಷಣಗಳು ಕಾಣುತ್ತಿಲ್ಲ. ಈಗಾಗಲೇ ಬರದ ಛಾಯೆ ಆವರಿಸಿ ಹಲವು ಜಿಲ್ಲೆಯಲ್ಲಿ ಬಹುತೇಕ ನದಿಗಳು ಬತ್ತಿ ಹೋಗಿವೆ. ಮಳೆಯಾಗದೇ ಇರುವುದರಿಂದ ಉತ್ತರ ಕರ್ನಾಟಕದ ಬಹುತೇಕ ಡ್ಯಾಂಗಳು ಖಾಲಿಖಾಲಿಯಾಗಿ ಗೋಚರಿಸುತ್ತಿವೆ. ಹಾಗೇ ಹುಕ್ಕೇರಿ ತಾಲೂಕಿನ ಹಿಡಕಲ್ ಡ್ಯಾಂ ನೀರು ಖಾಲಿಯಾಗಿದ್ದು, ಬರೋಬ್ಬರಿ 12 ವರ್ಷಗಳ ನಂತರ ಪುರಾತನ ದೇವಸ್ಥಾನವೊಂದು ದರ್ಶನಕ್ಕೆ ಮುಕ್ತವಾಗಿದೆ.

 ವಿಠ್ಠಲ ದೇವಾಲಯ

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹಿಡಕಲ್ ಡ್ಯಾಂ ಸದ್ಯ ಸಂಪೂರ್ಣ ಖಾಲಿಯಾಗಿದೆ. ಹಿಡಕಲ್ ಜಲಾಶಯವೂ ಡೆಡ್ ಸ್ಟೋರೇಜ್ ಹಂತಕ್ಕೆ ತಲುಪಿದೆ. ಹೀಗಾಗಿ ಡ್ಯಾಂನ ಹಿನ್ನೀರಿನಲ್ಲಿ ಮುಳುಗಡೆಯಾಗಿದ್ದ ಪುರಾತನ ವಿಠ್ಠಲ ದೇವಸ್ಥಾನವು ಭಕ್ತರ ದರ್ಶನಕ್ಕೆ ಮುಕ್ತವಾಗಿದ್ದು, ಆಷಾಢ ಏಕಾದಶಿಯಂದು ವಿಠ್ಠಲನ ದರ್ಶನ ಪಡೆದು ಭಕ್ತರು ಪುಳಕೀತರಾದರು.

ಕಳೆದ 12 ವರ್ಷಗಳ ಬಳಿಕ ವಿಠ್ಠಲನ ಈ ದೇವಸ್ಥಾನವು ಸಂಪೂರ್ಣವಾಗಿ ಕಾಣಿಸಿಕೊಂಡಿದೆ. 1928ರಲ್ಲಿ ಈ ದೇವಸ್ಥಾನವನ್ನು ನಿರ್ಮಾಣ ಮಾಡಲಾಗಿದೆ. ಆದ್ರೆ 1977ನೇ ಇಸವಿಯಲ್ಲಿ ಹಿಡಕಲ್ ಜಲಾಶಯ ನಿರ್ಮಾಣ ಮಾಡುವ ಸಂದರ್ಭದಲ್ಲಿ ವಿಠ್ಠಲ ದೇವಸ್ಥಾನವು ಸಂಪೂರ್ಣವಾಗಿ ಮುಳುಗಡೆಯಾಗಿತ್ತು. ಅದಾದ ಬಳಿಕ ಡ್ಯಾಂನಲ್ಲಿ ನೀರಿನ ಪ್ರಮಾಣ ಕಡಿಮೆ ಇದ್ದಂತಹ ಸಂದರ್ಭಗಳಲ್ಲಿ ಮಾತ್ರ ಈ ದೇವಸ್ಥಾನವು ಕಾಣಸಿಗುತ್ತದೆ.


Spread the love

About Laxminews 24x7

Check Also

ನದಿ ತೀರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸಚಿವ ಸತೀಶ್‌ ಜಾರಕಿಹೊಳಿ ಮನವಿ

Spread the love ಬೆಳಗಾವಿ: ಭಾರತ ಹವಾಮಾನ ಇಲಾಖೆ ಆಗಸ್ಟ್ 19 ಮತ್ತು 20 ರಂದು ಬೆಳಗಾವಿ ಜಿಲ್ಲೆಗೆ ರೆಡ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ