Breaking News

SSLC ಪೂರಕ ಪರೀಕ್ಷಾ ಫಲಿತಾಂಶ ಪ್ರಕಟ: ಬಾಲಕಿಯರದ್ದೇ ಮೇಲುಗೈ

Spread the love

ಬೆಂಗಳೂರು : ಜೂನ್ ತಿಂಗಳಿನಲ್ಲಿ ನಡೆದಿದ್ದ ಎಸ್‌ಎಸ್‌ಎಲ್​ಸಿ ಪೂರಕ ಪರೀಕ್ಷೆಯ ಫಲಿತಾಂಶವನ್ನು ಇಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದ್ದು, ಬಾಲಕಿಯರು ಮೇಲುಗೈ ಸಾಧಿಸಿದ್ದಾರೆ.

ಇಲಾಖೆಯ ಅಧಿಕೃತ ವೆಬ್​ಸೈಟ್ ಮೂಲಕ ತಾತ್ಕಾಲಿಕ ಅಂಕಪಟ್ಟಿ ಮುದ್ರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

1,11,781 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. 46,270 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಶೇ. 41.39ರಷ್ಟು ಫಲಿತಾಂಶ ಬಂದಿದೆ. ಮಂಡಳಿಯ ಅಧಿಕೃತ ವೆಬ್​ಸೈಟ್​ನಲ್ಲಿ ಫಲಿತಾಂಶ ವೀಕ್ಷಿಸಬಹುದು. ಎಸ್‌ಎಂಎಸ್ ಮೂಲಕವೂ ವಿದ್ಯಾರ್ಥಿಗಳಿಗೆ ಫಲಿತಾಂಶ ಕಳುಹಿಸಿಕೊಡಲಾಗುತ್ತದೆ ಎಂದು ಮಂಡಳಿ ತಿಳಿಸಿದೆ.

ಪರೀಕ್ಷೆಗೆ ಹಾಜರಾದ 71,134 ಬಾಲಕರಲ್ಲಿ 27,705 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇ.38 ಫಲಿತಾಂಶ ಬಂದಿದೆ. ಪರೀಕ್ಷೆ ಬರೆದ 40,647 ಬಾಲಕಿಯರಲ್ಲಿ 18,565 ವಿದ್ಯಾರ್ಥಿನಿಯರು ಉತ್ತೀರ್ಣರಾಗಿದ್ದು, ಶೇ. 45.67ರಷ್ಟು ಫಲಿತಾಂಶ ದಾಖಲಾಗಿದೆ. ನಗರ ಪ್ರದೇಶದಲ್ಲಿ ಪರೀಕ್ಷೆಗೆ ಹಾಜರಾದ ಒಟ್ಟು 60,026 ವಿದ್ಯಾರ್ಥಿಗಳಲ್ಲಿ 24,192 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇ. 40.30ರಷ್ಟು ಫಲಿತಾಂಶ ಬಂದರೆ, ಗ್ರಾಮಾಂತರ ಭಾಗದಲ್ಲಿ ಪರೀಕ್ಷೆಗೆ ಹಾಜರಾದ 51,755 ವಿದ್ಯಾರ್ಥಿಗಳಲ್ಲಿ 22,078 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇ.42.6 ರಷ್ಟು ಫಲಿತಾಂಶ ಬಂದಿದೆ.

44,12 ಸರ್ಕಾರಿ ಶಾಲೆಗಳ 51,941 ವಿದ್ಯಾರ್ಥಿಗಳಲ್ಲಿ 20,662 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇ.39.78 ರಷ್ಟು ಫಲಿತಾಂಶ ಬಂದಿದೆ. 3,154 ಅನುದಾನಿತ ಶಾಲೆಗಳ 33,213 ವಿದ್ಯಾರ್ಥಿಗಳಲ್ಲಿ 14,335 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇ.43.16 ರಷ್ಟು ಫಲಿತಾಂಶ ಬಂದಿದೆ. 4,248 ಅನುದಾನರಹಿತ ಶಾಲೆಗಳ 26,627 ವಿದ್ಯಾರ್ಥಿಗಳಲ್ಲಿ 11,273 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇ.42.34 ರಷ್ಟು ಫಲಿತಾಂಶ ದಾಖಲಾಗಿದೆ.


Spread the love

About Laxminews 24x7

Check Also

ರಾಜ್ಯದಲ್ಲಿ ವಿವಿಧ ಬೆಳೆಗಳ ಬಿತ್ತನೆ ನಡೆಯುತ್ತಿದ್ದು, ರಾಸಾಯನಿಕ ಗೊಬ್ಬರದ ಬೇಡಿಕೆ ಹೆಚ್ಚಿದೆ. ಈ ಬಗ್ಗೆ ಕೃಷಿ ಸಚಿವ ಚಲುವರಾಯಸ್ವಾಮಿ ಸ್ಪಷ್ಟನೆ

Spread the loveಮೈಸೂರು: ಪ್ರಸಕ್ತ ಸಾಲಿಗೆ ರಾಸಾಯನಿಕ ಗೊಬ್ಬರದ ಕೊರತೆಯಿಲ್ಲ. ಆದರೆ, ಕೇಂದ್ರ ಸರ್ಕಾರ ಮುಂದಿನ ವರ್ಷದಿಂದ ಯೂರಿಯಾ ಪೂರೈಕೆಯನ್ನು ಶೇ.50ರಷ್ಟು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ