Breaking News

ರಾಷ್ಟ್ರೀಯ ಶಿಕ್ಷಣ ನೀತಿ ಕಿತ್ತೆಸೆದು, ರಾಜ್ಯ ಶಿಕ್ಷಣ ನೀತಿ ಜಾರಿಗೊಳಿಸುತ್ತೇವೆ: ಸಚಿವ ಡಾ‌.ಎಂ.ಸಿ.ಸುಧಾಕರ್​

Spread the love

ಬೆಳಗಾವಿ: ರಾಷ್ಟ್ರೀಯ ಶಿಕ್ಷಣ ನೀತಿ ರದ್ದುಪಡಿಸುವ ಬಗ್ಗೆ ನಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ಸ್ಪಷ್ಟವಾಗಿ ಹೇಳಿದ್ದೇವೆ. ವಿದ್ಯಾರ್ಥಿಗಳ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಹೊಸ ಶಿಕ್ಷಣ ನೀತಿ ಕಿತ್ತೆಸೆದು, ರಾಜ್ಯ ಶಿಕ್ಷಣ ನೀತಿ ಜಾರಿಗೆ ತರುತ್ತೇವೆ ಎಂದು ಉನ್ನತ ಶಿಕ್ಷಣ ಸಚಿವ ಡಾ‌.ಎಂ.ಸಿ. ಸುಧಾಕರ್ ತಿಳಿಸಿದ್ದಾರೆ.​ ಬೆಳಗಾವಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎರಡು ವರ್ಷದ ಹಿಂದೆ ನಮ್ಮ ರಾಜ್ಯದಲ್ಲಿ ಮಾತ್ರ ಹೊಸ ಶಿಕ್ಷಣ ನೀತಿ ಅನುಷ್ಠಾನಕ್ಕೆ ತರಲಾಗಿದೆ. ಅದಕ್ಕೆ ಬಹಳಷ್ಟು ಪೂರ್ವ ತಯಾರಿ‌ ಆಗಬೇಕಿತ್ತು ಮತ್ತು ಅದರಲ್ಲಿ ಕೆಲ ನ್ಯೂನತೆಗಳಿವೆ ಎಂದರು.

ಈ ಎಲ್ಲ ವಿಚಾರಗಳ ಬಗ್ಗೆ ವಿವರವಾಗಿ ಶಿಕ್ಷಣ ತಜ್ಞರ ಜೊತೆಗೆ ಚರ್ಚಿಸುತ್ತಿದ್ದೇವೆ. ಯಾವುದೇ ರೀತಿ ವಿದ್ಯಾರ್ಥಿಗಳ‌ ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆ ಆಗದಂತೆ, ಯಾವ ರೀತಿಯಲ್ಲಿ ಬದಲಾವಣೆ ತರಬೇಕೆಂದು ಬಹಳಷ್ಟು ಗಮನಹರಿಸುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಒಂದು ಸ್ಪಷ್ಟವಾದ ರೂಪವನ್ನು‌ ಕೊಟ್ಟು ಬದಲಾವಣೆ ಪ್ರಕ್ರಿಯೆ ಪ್ರಾರಂಭ ಮಾಡುತ್ತೇವೆ ಎಂದರು. ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ನ್ಯೂನತೆಗಳು ಏನೇನಿವೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿ, ಈ ಶಿಕ್ಷಣ ನೀತಿಯಲ್ಲಿ ಬೇರೆ ಬೇರೆ ಅವಿಷ್ಕಾರಗಳಿವೆ ಎಂದು ತಿಳಿಸಿದರು.

ಮುಂದುವರೆದು, ಎರಡು ಮುಖ್ಯ ವಿಷಯಗಳನ್ನು ತೆಗೆದುಕೊಳ್ಳುವುದು, ಮತ್ತೊಂದು ಎಲೆಕ್ಟಿವ್ ವಿಷಯ ತೆಗೆದುಕೊಳ್ಳುವುದು. ಥೇರಿಯಾಟಿಕಲ್​ಗಿಂತ ಪ್ರಾಕ್ಟಿಕಲ್ ಜ್ಞಾನ ಕೌಶಲ್ಯಭಿವೃದ್ಧಿ ವಿಚಾರ ಸೇರಿ ಬಹಳಷ್ಟು ವಿಚಾರಗಳು ಒಳಗೊಂಡಿವೆ. ಯಾವುದೇ ನೀತಿ ಜಾರಿಗೆ ತರಬೇಕಾದರೆ ಮೂಲಭೂತ ಸೌಲಭ್ಯಗಳು ಇರಬೇಕು. ಅದಕ್ಕೆ ಬೇಕಾದ ಬೋಧಕ, ಬೋಧಕೇತರ ಸಿಬ್ಬಂದಿಗಳ ವ್ಯವಸ್ಥೆ ಮಾಡಿಕೊಳ್ಳಬೇಕಾಗುತ್ತದೆ. ಅದಕ್ಕೆ ಅನುದಾನ ಒದಗಿಸುವ ಬಗ್ಗೆ ತಯಾರಿ ಮಾಡಬೇಕಾಗುತ್ತದೆ. ಇನ್ನು ಖಾಸಗಿ ಸಂಸ್ಥೆಗಳಲ್ಲಿ ಒಂದು ರೀತಿ ಆದರೆ ಸರ್ಕಾರಿ ಸಂಸ್ಥೆಗಳಲ್ಲಿ ಮತ್ತೊಂದು ರೀತಿ ಆಗುತ್ತದೆ. ಈ ಎಲ್ಲಾ ವಿಚಾರಗಳ ಬಗ್ಗೆ ಹೆಚ್ಚಿನ ಅಧ್ಯಯನ ಮಾಡುತ್ತೇವೆ ಎಂದು ಹೇಳಿದರು.

 


Spread the love

About Laxminews 24x7

Check Also

ಸೌಕರ್ಯ, ಸಿಬ್ಬಂದಿ: ಕೊರತೆ ಆಸ್ಪತ್ರೆಗೇ ಬೇಕಿದೆ ಚಿಕಿತ್ಸೆ!

Spread the love ಚಿಕ್ಕೋಡಿ: ಪಟ್ಟಣದ ಹೊರವಲಯದಲ್ಲಿ ₹20 ಕೋಟಿ ವೆಚ್ಚದಲ್ಲಿ ಐದು ಎಕರೆಯಲ್ಲಿ ತಲೆ ಎತ್ತಿರುವ ತಾಯಿ ಮತ್ತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ