Breaking News
Home / ರಾಜಕೀಯ / ಚಲಿಸುತ್ತಿದ್ದ ಬಸ್​ನಲ್ಲಿ ಕಾಣಿಸಿಕೊಂಡ ಬೆಂಕಿ.. 25 ಜನ ಸಜೀವ ದಹನ

ಚಲಿಸುತ್ತಿದ್ದ ಬಸ್​ನಲ್ಲಿ ಕಾಣಿಸಿಕೊಂಡ ಬೆಂಕಿ.. 25 ಜನ ಸಜೀವ ದಹನ

Spread the love

ಮಹಾರಾಷ್ಟ್ರ: ಬುಲ್ಧಾನದಲ್ಲಿ ಪ್ರಯಾಣಿಕರ ಬಸ್‌ನ ಭೀಕರ ಅಪಘಾತ (Horrible Road Accident) ಸಂಭವಿಸಿದೆ.

ಅಪಘಾತದಲ್ಲಿ 25 ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬಸ್ಸಿನಲ್ಲಿ ಒಟ್ಟು 33 ಮಂದಿ ಪ್ರಯಾಣಿಕರಿದ್ದರು. ಈ ಪೈಕಿ ಎಂಟು ಪ್ರಯಾಣಿಕರು ಸುರಕ್ಷಿತವಾಗಿ ಹೊರಬಂದಿದ್ದಾರೆ. ಬುಲ್ಧಾನ ಜಿಲ್ಲೆಯ ಸಿಂಧಖೇದರಾಜ ಬಳಿಯ ಪಿಂಪಲಖುಟಾ ಗ್ರಾಮದ ಬಳಿ ಸಮೃದ್ಧಿ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ಈ ಪ್ರಯಾಣಿಕರ ಬಸ್ ನಾಗ್ಪುರದಿಂದ ಪುಣೆಗೆ ಹೋಗುತ್ತಿತ್ತು. ಶನಿವಾರ ನಸುಕಿನ ಜಾವ 2 ಗಂಟೆಗೆ ಈ ಭೀಕರ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.

ಡಿವೈಡರ್​ಗೆ ಡಿಕ್ಕಿ, ಹೊತ್ತಿ ಉರಿದ ಬಸ್​: ನಾಗ್ಪುರದಿಂದ ಪುಣೆಗೆ ತೆರಳುತ್ತಿದ್ದ ಬಸ್ ಭೀಕರ ಅಪಘಾತಕ್ಕೀಡಾಗಿದೆ. ಬಸ್‌ನಲ್ಲಿ ನಾಗ್ಪುರ, ವಾರ್ಧಾ ಮತ್ತು ಯವತ್ಮಾಲ್‌ನಿಂದ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಈ ಬಸ್ ವಿದರ್ಭ ಟ್ರಾವೆಲ್ಸ್​ಗೆ ಸೇರಿದ್ದಾಗಿದೆ. ಸಿಂಧಖೇಡರಾಜ ಸಮೀಪದ ಪಿಂಪಲಖುಟಾ ಗ್ರಾಮದ ಬಳಿ ಸಮೃದ್ಧಿ ಹೆದ್ದಾರಿಯಲ್ಲಿ ಬಸ್ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ನಂತರ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ಕಾಣಿಸಿಕೊಂಡ ನಂತರ ಕೇವಲ ಎಂಟು ಪ್ರಯಾಣಿಕರು ಮಾತ್ರ ಸುರಕ್ಷಿತವಾಗಿ ಹೊರಬರಲು ಸಾಧ್ಯವಾಗಿದೆ. 25 ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಇನ್ನು ಬಸ್​ಗೆ ಬೆಂಕಿ ಬಿದ್ದ ಸುದ್ದಿ ತಿಳಿದ ಪೊಲೀಸರು ಮತ್ತು ಅಗ್ನಿ ಶಾಮಕದಳ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ದೌಡಾಯಿಸಿ ರಕ್ಷಣಾ ಕಾರ್ಯಾಚರಣೆ ಕೈಗೊಂಡರು. ಬಸ್ಸಿನಿಂದ 25 ಮೃತದೇಹಗಳನ್ನು ಹೊರತೆಗೆದು ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಬಸ್ಸಿನಲ್ಲಿ ಒಟ್ಟು 33 ಜನರು ಪ್ರಯಾಣಿಸುತ್ತಿದ್ದರು. 8 ಜನರನ್ನು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಬುಲ್ಧಾನ ಸಿವಿಲ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಬುಲ್ಧಾನ ಪೊಲೀಸ್ ಉಪ ಎಸ್ಪಿ ಬಾಬುರಾವ್ ಮಹಾಮುನಿ ತಿಳಿಸಿದ್ದಾರೆ.

ಸುರಕ್ಷಿತವಾಗಿ ಪಾರಾದವರಲ್ಲಿ ಚಾಲಕ ಮತ್ತು ಸಹಾಯಕ ಸೇರಿದ್ದಾರೆ. ಇದೇ ವೇಳೆ ಗಾಯಾಳುಗಳನ್ನು ಸಮೀಪದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.


Spread the love

About Laxminews 24x7

Check Also

ಬಂಗಾರ ದರ ಮತ್ತೆ ಇಳಿಕೆ

Spread the love 26: ಬಂಗಾರ ದರ ನಿನ್ನೆಗೆ ಅಂದರೆ ಜೂನ್‌ 25ಕ್ಕೆ ಹೋಲಿಕೆ ಮಾಡಿದರೆ ಇಂದು (ಜೂನ್‌ 24) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ