Breaking News
Home / ಜಿಲ್ಲೆ / ಬೆಳಗಾವಿ / ಬೆಳಗ್ಗೆ ಅಡುಗೆ ಅನಿಲ ಸಿಲಿಂಡರ್ ಸ್ಫೋಟಗೊಂಡು ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಹೃದಯವಿದ್ರಾವಕ ಘಟನೆ ಇಂದು ಬೆಳಗಿನ ಜಾವ ನಡೆದಿದೆ.

ಬೆಳಗ್ಗೆ ಅಡುಗೆ ಅನಿಲ ಸಿಲಿಂಡರ್ ಸ್ಫೋಟಗೊಂಡು ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಹೃದಯವಿದ್ರಾವಕ ಘಟನೆ ಇಂದು ಬೆಳಗಿನ ಜಾವ ನಡೆದಿದೆ.

Spread the love

ಬೆಳಗಾವಿ: ಇಲ್ಲಿನ ಗಾಂಧಿ ನಗರದ ಸುಭಾಷ್​ ಗಲ್ಲಿಯ ಮನೆಯೊಂದರಲ್ಲಿ ಬೆಳಗ್ಗೆ ಅಡುಗೆ ಅನಿಲ ಸಿಲಿಂಡರ್ ಸ್ಫೋಟಗೊಂಡು ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಹೃದಯವಿದ್ರಾವಕ ಘಟನೆ ಇಂದು ಬೆಳಗಿನ ಜಾವ ನಡೆದಿದೆ.

ಗಾಂಧಿ ನಗರದ ಸುಭಾಷ್ ಗಲ್ಲಿಯ ಮಂಜುನಾಥ ನರಸಪ್ಪ ಅಥಣಿ (42), ಪತ್ನಿ ಲಕ್ಷ್ಮೀ (36), ವೈಷ್ಣವಿ (13), ಪುತ್ರ ಸಾಯಿಪ್ರಸಾದ (10) ಗಂಭೀರ ಗಾಯಾಳುಗಳು.

ಮನೆಯಲ್ಲಿದ್ದ ಬಹುತೇಕ ವಸ್ತುಗಳು ಬೆಂಕಿಗಾಹುತಿಗಾಗಿದ್ದು, ಮನೆಯಲ್ಲಿದ್ದ ವಸ್ತುಗಳೆಲ್ಲ ಚೆಲ್ಲಾಪಿಲ್ಲಿಯಾಗಿದ್ದವು. ಸುಭಾಷ್​ ಗಲ್ಲಿಯ ಕಟ್ಟಡದ ಮೊದಲ ಮಹಡಿಯಲ್ಲಿ ಬಾಡಿಗೆ ಮನೆಯಲ್ಲಿ ಮಂಜುನಾಥ ಕುಟುಂಬ ವಾಸವಿತ್ತು. ಗಾಯಾಳು ಮಂಜುನಾಥ ಅವರು ಬೆಳಗಾವಿಯ ಕೆಎಸ್ ಆರ್.ಟಿಸಿ ಮೊದಲನೇ ಘಟಕದಲ್ಲಿ ಚಾಲಕರಾಗಿ ಕೆಲಸ ಮಾಡುತ್ತಿದ್ದು, ಬೆಳಗಿನ ಜಾವ ಡ್ಯೂಟಿಗೆ ಹೊರಟಾಗ, ಪತ್ನಿ ಲಕ್ಷ್ಮೀ ಚಹಾ ಮಾಡಲು ಸಿಲಿಂಡರ್ ಗ್ಯಾಸ್ ಉರಿಸಲು ಲೈಟರ್ ಆನ್ ಮಾಡಿದ್ದರು. ಈ ವೇಳೆ ಸಿಲಿಂಡರ್ ಸ್ಫೋಟವಾಗಿ ಪರಿಣಾಮ ಬೆಂಕಿ ಆವರಿಸಿದೆ.ಘಟನೆಯ ಭೀಕರತೆ ಬಿಚ್ಚಿಟ್ಟಿರುವ ಸ್ಥಳೀಯರು ಬೆಳಗ್ಗೆ 6 ಗಂಟೆ ಸುಮಾರಿಗೆ ಸ್ಫೋಟದ ಸದ್ದು ಕೇಳಿ ಬಂತು.

ಹೊರಗೆ ಬಂದು ನೋಡಿದಾಗ ಮನೆ ಕಿಟಕಿ ಗಾಜು ಒಡೆದಿದ್ದವು. ಮನೆಯಲ್ಲಿದ್ದ ಮಹಿಳೆ ಹೊರಗೆ ಬಂದಾಗ ಮೈಯಲ್ಲಿದ್ದ ಬಟ್ಟೆಯಲ್ಲ ಸುಟ್ಟು ಹೋಗಿತ್ತು. ಮನೆಯಲ್ಲಿದ್ದ ನಾಲ್ವರ ಮೈ ಮೇಲೆ ಸುಟ್ಟ ಗಾಯಗಳಾಗಿವೆ ಎಂದಿದ್ದಾರೆ.


Spread the love

About Laxminews 24x7

Check Also

ಮೂಡಲಗಿ: ಸಮಗ್ರ ಕೃಷಿಯಲ್ಲಿ ಬಸವಣ್ಣಿ ಖುಷಿ

Spread the love ಮೂಡಲಗಿ: ತಾಲ್ಲೂಕಿನ ಗುರ್ಲಾಪುರ ಗ್ರಾಮದ ರೈತ ಬಸವಣ್ಣಿ ಚಿಣ್ಣಪ್ಪ ಮುಗಳಖೋಡ ಒಂದೇ ಬೆಳೆ ನೆಚ್ಚಿಕೊಳ್ಳದೆ, ವಿವಿಧ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ