Breaking News

ಬಜೆಟ್ ಅಧಿವೇಶನ ಜುಲೈ 3 ರಿಂದ 14ರ ವರೆಗೆ ವಿಧಾನಸೌಧದ ಸುತ್ತಲೂ ನಿಷೇಧಾಜ್ಞೆ

Spread the love

ಬೆಂಗಳೂರು: ಬಜೆಟ್ ಅಧಿವೇಶನ ನಡೆಯುವ ಹಿನ್ನೆೆಲೆಯಲ್ಲಿ ಜುಲೈ 3 ರಿಂದ 14ರ ವರೆಗೆ ವಿಧಾನಸೌಧದ ಸುತ್ತಲೂ ನಿಷೇಧಾಜ್ಞೆ ಜಾರಿ ಮಾಡಿ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಆದೇಶಿಸಿದ್ದಾರೆ.

ಜು.3 ರಿಂದ 14ರ ವರೆಗೆ ವಿಧಾನಸೌಧದ ಸುತ್ತಲೂ 2 ಕಿ.ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಅನುಮತಿ ಪಡೆದು ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆಗೆ ಅವಕಾಶ ನೀಡಲಾಗಿದೆ.

ನಿಷೇಧಾಜ್ಞೆ ಜಾರಿಯಿರುವ ಸ್ಥಳದಲ್ಲಿ ಐದು ಅಥವಾ ಅದಕ್ಕಿಂತ ಹೆಚ್ಚು ಜನರ ಗುಂಪು ಸೇರುವುದು, ಮೆರವಣಿಗೆ ಮತ್ತು ಸಭೆ ನಡೆಸುವುದನ್ನು ನಿಷೇಧಿಸಲಾಗಿದೆ. ಅಲ್ಲದೇ ಶಸ್ತ್ರಾಸ್ತ್ರ, ದೊಣ್ಣೆ, ಕತ್ತಿಗಳು, ಈಟಿಗಳು, ಮಾರಕಾಸ್ತ್ರಗಳನ್ನು ಒಯ್ಯುವುದಾಗಲಿ ಅಥವಾ ಯಾವುದೇ ಸ್ಫೋಟಕ ವಸ್ತುಗಳನ್ನು ಸಿಡಿಸುವುದು, ಕಲ್ಲುಗಳನ್ನು, ಕ್ಷಿಪಣಿಗಳನ್ನು ಎಸೆಯುವ ಸಾಧನಗಳ ಅಥವಾ ಉಪಕರಣಗಳ ಸಾಗಾಟ ಮತ್ತು ಶೇಖರಿಸುವುದನ್ನು ನಿಷೇಧಿಸಲಾಗಿದೆ.

ಯಾವುದೇ ವ್ಯಕ್ತಿಗಳ ಅಥವಾ ಅವರ ಪ್ರತಿಕೃತಿಗಳ ಪ್ರದರ್ಶನ ಮಾಡುವುದು ಪ್ರಚೋದಿಸಬಹುದಾದ ಬಹಿರಂಗ ಘೋಷಣೆಗಳನ್ನು ಕೂಗುವುದು, ಹಾಡುವುದು, ಸಂಗೀತ ನುಡಿಸುವುದು, ಸಂಕೇತಗಳು/ಭಿತ್ತಿ ಪತ್ರ ಅಥವಾ ಇತರೆ ಯಾವುದೇ ವಸ್ತುಗಳನ್ನು ಪ್ರದರ್ಶಿಸುವುದನ್ನ ನಿಷೇಧಿಸಲಾಗಿದೆ.


Spread the love

About Laxminews 24x7

Check Also

ಹುಬ್ಬಳ್ಳಿಯಲ್ಲಿ ಅ.1 ರಿಂದ ಗದಗ ರಸ್ತೆ ಫ್ಲೈಓವರ್ ಕಾಮಗಾರಿ ಶುರು: ತಹಶೀಲ್ದಾರ್, ಪೊಲೀಸ್ ಠಾಣೆ ಸೇರಿ ಯಾವೆಲ್ಲ ಕಟ್ಟಡಗಳು ತೆರವು?

Spread the loveಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯ ಹೃದಯ ಭಾಗದಲ್ಲಿ ‌ನಡೆಯುತ್ತಿರುವ ಫ್ಲೈ ಓವರ್ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿದೆ. ಕೆಲ ತಿಂಗಳ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ