Breaking News

ಅವಧಿ ಮುಗಿದ ಆಹಾರ ಉತ್ಪನ್ನಗಳ ಮರು ಪ್ಯಾಕಿಂಗ್.. ಗೋದಾಮಿನ ಮೇಲೆ ಅಧಿಕಾರಿಗಳ ದಾಳಿ

Spread the love

ಬೆಂಗಳೂರು: ಬಳಕೆಯ ಅವಧಿ ಮುಗಿದ ಆಹಾರ ಉತ್ಪನ್ನಗಳನ್ನು ಮರು ಪ್ಯಾಕಿಂಗ್ ಮಾಡುವ ಮೂಲಕ ಮಾರುಕಟ್ಟೆಯಲ್ಲಿ ಮಾರಾಟ ಮಾಡುತ್ತಿದ್ದ ಗೋದಾಮಿನ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.

ಆಹಾರ ಸುರಕ್ಷತಾ ಅಧಿಕಾರಿಗಳು ಹಾಗೂ ಸಿಸಿಬಿ ಪೊಲೀಸರು ಜಂಟಿ ಆಗಿ ನಡೆಸಿದ ಕಾರ್ಯಾಚರಣೆಯಲ್ಲಿ ಕಾಟನ್ ಪೇಟೆಯ ಖಾಸಗಿ ಟ್ರೇಡಿಂಗ್ ಕಂಪನಿಯ ಗೋದಾಮಿನಲ್ಲಿ ಪರಿಶೀಲನೆ ನಡೆಸಿದ್ದಾರೆ.

 ಅವಧಿ ಮುಗಿದ ಆಹಾರಗಳುಪ್ರತಿಷ್ಠಿತ ಬ್ರ್ಯಾಂಡ್​ಗಳಿಗೆ ಸೇರಿದ, ಬಳಕೆಯ ಅವಧಿ ಮೀರಿದ ಬಿಸ್ಕೆಟ್ಸ್, ಚಾಕೊಲೇಟ್, ಚಾಕೊಲೇಟ್ ಪೌಡರ್, ಅಡುಗೆ ಎಣ್ಣೆ, ಡಾಲ್ಡಾ, ರವೆ ಸೇರಿದಂತೆ ಅನೇಕ ಉತ್ಪನ್ನಗಳನ್ನು ದಾಳಿ ವೇಳೆ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಅಂಗಡಿಯೊಂದರಲ್ಲಿ ಅವಧಿ ಮೀರಿದ ಬಿಸ್ಕೆಟ್ ಪ್ಯಾಕ್ ಮಾರಾಟ ಮಾಡುತ್ತಿರುವುದರ ಬಗ್ಗೆ ಸಿಕ್ಕ ಮಾಹಿತಿ ಆಧರಿಸಿ, ಅಧಿಕಾರಿಗಳು ಸಿಸಿಬಿ ಪೊಲೀಸರೊಂದಿಗೆ ಕಾರ್ಯಾಚರಣೆ ಕೈಗೊಂಡಿದ್ದಾರೆ. ಸಿಸಿಬಿ ಹಾಗೂ ಆಹಾರ ಸುರಕ್ಷತಾ ಇಲಾಖೆಯ ಅಧಿಕಾರಿಗಳು ಕಾಟನ್ ಪೇಟೆಯ ಖಾಸಗಿ ಟ್ರೇಡಿಂಗ್​ ಕಂಪನಿಯೊಂದರ ಗೋದಾಮಿನ ಮೇಲೆ ದಾಳಿ ಮಾಡಿದ್ದರು.

 ಗೋದಾಮುಚಂದ್ರಪ್ರಕಾಶ್ ಎಂಬುವವರ ಹೆಸರಿನಲ್ಲಿರುವ ಗೋದಾಮಿನಲ್ಲಿ ಮೂಟೆಗಟ್ಟಲೇ ಅವಧಿ ಮೀರಿದ ಉತ್ಪನ್ನಗಳನ್ನು ಮರು ಪ್ಯಾಕಿಂಗ್ ಮಾಡಿ ಮಾರುಕಟ್ಟೆಯಲ್ಲಿ ಮಾರಾಟ ಮಾಡುತ್ತಿರುವುದು ಪತ್ತೆಯಾಗಿದೆ. ತಕ್ಷಣ ಎಲ್ಲ ಉತ್ಪನ್ನಗಳ ಸ್ಯಾಂಪಲ್ಸ್ ಪಡೆದಿರುವ ಆಹಾರ ಸುರಕ್ಷತಾ ಅಧಿಕಾರಿಗಳು ಅವುಗಳನ್ನು ಪರಿಶೀಲನೆಗಾಗಿ ಪ್ರಯೋಗಾಲಯಕ್ಕೆ ರವಾನಿಸಿದ್ದಾರೆ. ಹಾಗೆ ಗೋದಾಮಿನ ಮಾಲೀಕರಿಗೆ ನೋಟಿಸ್ ನೀಡಿದ್ದಾರೆ‌. ಆರೋಪಿಗಳ ವಿರುದ್ಧ ಆಹಾರ ಸುರಕ್ಷತೆ ಮಾನದಂಡಗಳ ಕಾಯ್ದೆಯಡಿ ಕಾನೂನು ಕ್ರಮ ಕೈಗೊಳ್ಳಲಿದ್ದೇವೆ ಎಂದು ಸಿಸಿಬಿಯ ಜಂಟಿ ಆಯುಕ್ತ ಡಾ.ಎಸ್.ಡಿ.ಶರಣಪ್ಪ ತಿಳಿಸಿದ್ದಾರೆ.


Spread the love

About Laxminews 24x7

Check Also

ಜನರ ಆರೋಗ್ಯ ಕಾಪಾಡುವ ಸರಕಾರದ ಸಂಕಲ್ಪಕ್ಕೆ ಕೈಜೋಡಿಸಿ: ಲಕ್ಷ್ಮೀ ಹೆಬ್ಬಾಳಕರ್

Spread the loveಜನರ ಆರೋಗ್ಯ ಕಾಪಾಡುವ ಸರ್ಕಾರದ ಸಂಕಲ್ಪ ಸಾಕಾರಗೊಳ್ಳಬೇಕಾದರೆ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳು ಕೈಜೋಡಿಸುವುದು ಅಗತ್ಯ ಎಂದು ಮಹಿಳಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ