Breaking News

ನಾವು ಕೊಟ್ಟ 5 ಗ್ಯಾರಂಟಿಗಳ ಪೈಕಿ ‌ಮೂರು ಈಡೇರಿದೆ: ದಿನೇಶ್‌ ಗುಂಡೂರಾವ್‌

Spread the love

ಬೆಂಗಳೂರು: ನಾವು ನೀಡಿದ್ದ ಎಲ್ಲಾ ಗ್ಯಾರಂಟಿಗಳನ್ನೂ ಆರಂಭಿಸುತ್ತಿದ್ದೇವೆ. ಆದರೆ, ಬಿಜೆಪಿ ಹಾಗೂ ಜೆಡಿಎಸ್‌ ನಮ್ಮ ಯೋಜನೆ ಜಾರಿಯಾಗಲ್ಲ ಎಂಬ ಸಂಭ್ರಮದಲ್ಲಿದ್ದವು.

ಅವರಿಗೆ ನಿರಾಸೆಯಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ಚುನಾವಣಾ ಪೂರ್ವದಲ್ಲಿ ನಾವು ಕೊಟ್ಟ 5 ಗ್ಯಾರಂಟಿಗಳ ಪೈಕಿ ಗೃಹಜ್ಯೋತಿ ಹಾಗೂ ಅನ್ನಭಾಗ್ಯ ಯೋಜನೆ ಇಂದಿನಿಂದ ಆರಂಭವಾಗಲಿದೆ. ಗೃಹಜ್ಯೋತಿ ಯೋಜನೆಯಡಿ ಈ ತಿಂಗಳಿನಿಂದ ನಮ್ಮ ಸರ್ಕಾರ 200 ಯೂನಿಟ್‌ವರೆಗೆ ವಿದ್ಯುತ್ ಉಚಿತವಾಗಿ ನೀಡಲಿದೆ. ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಅಕ್ಕಿ ಹಾಗೂ ಇನ್ನುಳಿದ 5 ಕೆಜಿ ಅಕ್ಕಿಯ ಬದಲಾಗಿ 170 ರೂ. ನೀಡಲಿದ್ದೇವೆ ಎಂದು ತಿಳಿಸಿದ್ದಾರೆ.

 ದಿನೇಶ್‌ ಗುಂಡೂರಾವ್‌ ಟ್ವೀಟ್‌ಮುಂದುವರಿದು, ಬಿಜೆಪಿ- ಜೆಡಿಎಸ್​ನವರು ನಾವು ಕೊಟ್ಟ ಗ್ಯಾರಂಟಿಗಳು ಜಾರಿಯಾಗಲ್ಲ ಎಂದು ಕಂಡ ಕಂಡಲ್ಲಿ ಹೇಳಿಕೊಂಡು ತಿರುಗಾಡುತ್ತಿದ್ದರು.‌ ಹಾಗೆ ಹೇಳಿಕೊಂಡು ತಿರುಗಾಡುವುದು ಅವರ ಸಹಜ ಗುಣ. ತಾನು ಕಳ್ಳ ಪರರ ನಂಬ ಮನಃಸ್ಥಿತಿ ಅವರದ್ದು. ಆದರೆ ನಾವು ಅಧಿಕಾರಕ್ಕೆ ಬಂದ ಹದಿನೈದೇ ದಿನದಲ್ಲಿ ಶಕ್ತಿ ಯೋಜನೆ ತಂದೆವು. ಇಂದಿನಿಂದ‌ ಗೃಹಜ್ಯೋತಿ ಮತ್ತು ಅನ್ನಭಾಗ್ಯ ಜಾರಿಗೆ ಬರಲಿದೆ. ಗೃಹಜ್ಯೋತಿ ಹಾಗೂ ಅನ್ನಭಾಗ್ಯ ಯೋಜನೆ ಇಂದಿನಿಂದ ಜಾರಿಯಾಗುವ ಮೂಲಕ ನಾವು ಕೊಟ್ಟ 5 ಗ್ಯಾರಂಟಿಗಳ ಪೈಕಿ ‌ಮೂರು ಈಡೇರಿದಂತಾಗಿದೆ. ಗೃಹಲಕ್ಷ್ಮಿ ಯೋಜನೆ ಆಗಸ್ಟ್ 15 ರಂದು ಪ್ರಾರಂಭವಾಗಲಿದೆ. ಮಾತು ಕೊಡುವುದು ದೊಡ್ಡದಲ್ಲ. ಆದರೆ ಕೊಟ್ಟ ಮಾತನ್ನು ಉಳಿಸಿಕೊಳ್ಳುವುದು ನಿಜವಾದ ಸವಾಲು. ಆ ಸವಾಲನ್ನು ನಾವು ಇಂದು ಮೆಟ್ಟಿ ನಿಂತಿದ್ದೇವೆ ಎಂದು ಹೇಳಿದ್ದಾರೆ.

 ದಿನೇಶ್‌ ಗುಂಡೂರಾವ್‌ ಟ್ವೀಟ್‌ಮಹಾರಾಷ್ಟ್ರ ಬಸ್‌ ದುರಂತಕ್ಕೆ ಸಂತಾಪ ಸೂಚಿಸಿರುವ ದಿನೇಶ್‌ ಗುಂಡೂರಾವ್‌, ಮಹಾರಾಷ್ಟ್ರದ ಬುಲ್ಧಾನ ಜಿಲ್ಲೆಯ ಸಮೃದ್ದಿ ಎಕ್ಸ್‌ಪ್ರೆಸ್‌ ವೇನಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಬಸ್‌ನಲ್ಲಿದ್ದ 25 ಜನ ಪ್ರಯಾಣಿಕರು ಸಜೀವ ದಹನವಾದ ಸುದ್ದಿ ಆಘಾತ ತಂದಿದೆ.‌ ಇದೊಂದು ಆಘಾತಕಾರಿ ಘಟನೆ. ಅಪಘಾತದಲ್ಲಿ ಮೃತಪಟ್ಟ ಕುಟುಂಬದವರಿಗೆ ಸಾಂತ್ವನಗಳು ಎಂದಿದ್ದಾರೆ.

ವೈದ್ಯರ ದಿನ ಹಿನ್ನೆಲೆ ಟ್ವೀಟ್‌ ಮಾಡಿರುವ ಸಚಿವರು, ನಿತ್ಯ ವೈರಾಣುಗಳ ದಾಳಿಯನ್ನು ಎದುರಿಸುತ್ತಲ್ಲೇ, ರೋಗಿಗಳ ಆರೈಕೆಯನ್ನು ಮಾಡಿ, ಜೀವ ಕಾಪಾಡುವ ಜೀವಾತ್ಮದಂತಹ ವೈದ್ಯರಿಗೆ ರಾಷ್ಟ್ರೀಯ ವೈದ್ಯರ ದಿನದ ಶುಭಾಶಯಗಳು. ವೈದ್ಯಕೀಯ ಕ್ಷೇತ್ರಕ್ಕೆ ಅಮೋಘ ಕೊಡುಗೆ ನೀಡಿದ ಡಾ. ಬಿಧನ್ ಚಂದ್ರ ರಾಯ್ ಅವರನ್ನು ಸ್ಮರಿಸುವ ಮೂಲಕ ವೈದ್ಯರಿಗೆ ನಮನ ಸಲ್ಲಿಸೋಣ ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ಆನ್‌ಲೈನ್ ಗೇಮಿಂಗ್ ಪ್ರಚಾರ-ನಿಯಂತ್ರಣ ಕಾಯಿದೆ ಪ್ರಶ್ನಿಸಿ ಹೈಕೋರ್ಟ್​ಗೆ ಅರ್ಜಿ: ಆ.30ಕ್ಕೆ ವಿಚಾರಣೆ

Spread the love ಬೆಂಗಳೂರು: ಹಣವನ್ನು ಪಣಕ್ಕಿಟ್ಟು ಆಡುವಂತಹ ಆನ್‌ಲೈನ್​ ಗೇಮ್​ಗಳಿಗೆ ನಿಷೇಧ ಹೇರುವುದಕ್ಕೆ ಅವಕಾಶ ಕಲ್ಪಿಸುವ ಆನ್‌ಲೈನ್ ಗೇಮಿಂಗ್ ಪ್ರಚಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ