Breaking News

ಡಿಸಿಸಿ ಬ್ಯಾಂಕ್, ಬೆಳಗಾವಿ ಲೋಕಸಭೆ ಚುನಾವಣೆ ಟಿಕೆಟ್ ಫೈಟ್ : ರಾಜ್ಯ ಘಟಕದ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ನೇತೃತ್ವದಲ್ಲಿ  ನಗರದ ಖಾಸಗಿ ಹೊಟೇಲ್ ನಲ್ಲಿ  ಮಂಗಳವಾರ ತಡರಾತ್ರಿವರೆಗೂ ರಹಸ್ಯ  ಸಭೆ

Spread the love

ಹುಬ್ಬಳ್ಳಿ:  ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ (ಡಿಸಿಸಿ) ಚುನಾವಣೆ ಮತ್ತು ಸುರೇಶ ಅಂಗಡಿ ನಿಧನದಿಂದ ತೆರವಾಗಿರುವ ಲೋಕಸಭಾ ಕ್ಷೇತ್ರದ ಟಿಕೆಟ್ ಅಂತಿಮ ಗೊಳಿಸುವ ಸಂಬಂಧ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ನೇತೃತ್ವದಲ್ಲಿ  ನಗರದ ಖಾಸಗಿ ಹೊಟೇಲ್ ನಲ್ಲಿ  ಮಂಗಳವಾರ ತಡರಾತ್ರಿವರೆಗೂ ರಹಸ್ಯ  ಸಭೆ ನಡೆಸಿದೆ.

ಸುಮಾರು ನಾಲ್ಕು ಗಂಟೆ ನಡೆದ ಸಭೆಯಲ್ಲಿ ಧಾರವಾಡ, ಬೆಳಗಾವಿ ಮತ್ತು ಕೊಪ್ಪಳ ಜಿಲ್ಲೆಯ ಬಿಜೆಪಿಯ ಪ್ರಮುಖರು ಪಾಲ್ಗೊಂಡಿದ್ದರು.

ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಸಂಸದರಾದ ಅಣ್ಣಾಸಾಹೇಬ ಜೊಲ್ಲೆ, ಸಂಗಣ್ಣ ಕರಡಿ, ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಸಚಿವರಾದ ಜಗದೀಶ ಶೆಟ್ಟರ್, ರಮೇಶ ಜಾರಕಿಹೊಳಿ, ಶಾಸಕ ಉಮೇಶ ಕತ್ತಿ, ಬಾಲಚಂದ್ರ ಜಾರಕಿಹೊಳಿ, ಆನಂದ ಮಾಮನಿ, ರಮೇಶ ಕತ್ತಿ, ಮಹಾಂತೇಶ ಕವಟಗಿಮಠ, ಪ್ರತಾಪಗೌಡ ಪಾಟೀಲ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ ಸೇರಿದಂತೆ ಅನೇಕರು ಸಭೆಯಲ್ಲಿ ಭಾಗವಹಿಸಿದ್ದರು.

ನವೆಂಬರ್ 6ರಂದು ಡಿಸಿಸಿ ಬ್ಯಾಂಕ್ ಚುನಾವಣೆ ನಿಗದಿಯಾಗಿದೆ. ಡಿಸಿಸಿ ಬ್ಯಾಂಕ್ ಚುನಾವಣೆಗೆ ಕಾಂಗ್ರೆಸ್‌ನ ಅಂಜಲಿ ನಿಂಬಾಳ್ಕರ್‌ಗೆ ಬೆಂಬಲ ನೀಡುವುದಾಗಿ ಈ ಹಿಂದೆ ಉಮೇಶ ಕತ್ತಿ ಹೇಳಿದ್ದರು.

ಇನ್ನೊಂದೆಡೆ ಸುರೇಶ ಅಂಗಡಿ ಕುಟುಂಬದವರಿಗೆ ಬಿಜೆಪಿ ಟಿಕೆಟ್ ನೀಡಿದರೆ ಬೆಂಬಲಿಸುವುದಾಗಿ ಕಾಂಗ್ರೆಸ್ ಮುಖಂಡ ಪ್ರಕಾಶ ಹುಕ್ಕೇರಿ ಹೇಳಿಕೆ ನೀಡಿದ್ದರು. ಆದ್ದರಿಂದ ಈ ಸಭೆ ಮಹತ್ವ ಪಡೆದುಕೊಂಡಿದೆ.


Spread the love

About Laxminews 24x7

Check Also

ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸೌರಶಕ್ತಿ ಬಲ

Spread the loveಹುಬ್ಬಳ್ಳಿ: ವಾಣಿಜ್ಯ ‌ನಗರಿ ಹುಬ್ಬಳ್ಳಿ ವಿಮಾನ ‌ನಿಲ್ದಾಣ ಅಂತಾರಾಷ್ಟ್ರೀಯ ಮಟ್ಟದ ವಿಮಾನ ನಿಲ್ದಾಣವಾಗಿ ಮೇಲ್ದರ್ಜೆಗೇರಿಸಲಾಗುತ್ತಿದೆ‌. ಇದರ ಭಾಗವಾಗಿ ಹುಬ್ಬಳ್ಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ