Breaking News

ಪಂಚಮಸಾಲಿ ಲಿಂಗಾಯತ ಸಮಾಜಕ್ಕೆ ಪ್ರವರ್ಗ ‘ 2ಎ’ ಮೀಸಲಾತಿ ನೀಡುವಂತೆ ಆಗ್ರಹಿಸಿ ಇಲ್ಲಿನ ಸುವರ್ಣ ವಿಧಾನಸೌಧದ ಎದುರು ಇಂದು ಬೃಹತ್ ಪ್ರತಿಭಟನೆ 

Spread the love

ಬೆಳಗಾವಿ : ಪಂಚಮಸಾಲಿ ಲಿಂಗಾಯತ ಸಮಾಜಕ್ಕೆ ಪ್ರವರ್ಗ ‘ 2ಎ’ ಮೀಸಲಾತಿ ನೀಡುವಂತೆ ಆಗ್ರಹಿಸಿ ಇಲ್ಲಿನ ಸುವರ್ಣ ವಿಧಾನಸೌಧದ ಎದುರು ಇಂದು ಬೃಹತ್ ಪ್ರತಿಭಟನೆ  ಆರಂಭವಾಗಿದೆ.

ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಬುಧವಾರ ಹಮ್ಮಿಕೊಂಡಿರುವ ಉಪವಾಸ ಸತ್ಯಾಗ್ರಹ ಅಂಗವಾಗಿ ತಾಲ್ಲೂಕಿನ ಹಿರೇಬಾಗೇವಾಡಿಯಿಂದ ದ್ವಿಚಕ್ರ ವಾಹನ ಹಾಗೂ ಕಾರುಗಳಲ್ಲಿ ಸಮಾಜದವರು ಮೆರವಣಿಗೆ ಆರಂಭಿಸಿದ್ದರು.

ಆ ಗ್ರಾಮದ ಬಸವೇಶ್ವರ ವೃತ್ತದಲ್ಲಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಸ್ವಾಮೀಜಿ, ಸುವರ್ಣ ವಿಧಾನಸೌಧದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. ಅವರೊಂದಿಗೆ ಸಮಾಜದವರು ಸತ್ಯಾಗ್ರಹಕ್ಕೆ ಬೆಂಬಲಿಸಿ  ಘೋಷಣೆ ಕೂಗಿದರು.

ಸಮಾಜದವರು ಹೆಚ್ಚಿನ ಸಂಖ್ಯೆಯಲ್ಲಿ ಸುವರ್ಣ ವಿಧಾನಸೌಧದ ಎದುರು ನಡೆಯುತ್ತಿರುವ ಪ್ರತಿಭಟನೆಯಲ್ಲಿ ಭಾಗಿಯಾಗಿ, ಮೀಸಲಾತಿಗೆ ಒತ್ತಾಯಿಸಿದ್ದಾರೆ.


Spread the love

About Laxminews 24x7

Check Also

ಕಬ್ಬಿನ ಬಿಲ್ ಬಾಕಿಗಾಗಿ ಎಸ್.ನಿಜಲಿಂಗಪ್ಪ ಸಕ್ಕರೆ ಸಂಸ್ಥೆ ಎದುರು ರೈತ ಪ್ರತಿಭಟನೆ

Spread the loveಬೆಳಗಾವಿ: ಪ್ರಸಕ್ತ ಸಾಲಿನ ಕಬ್ಬಿನ ಬಿಲ್ ಬಾಕಿ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಶುಕ್ರವಾರ ಮಹಾನಗರದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ