ವಿಜಯಪುರ: ಜಿಲ್ಲೆಯ ಐತಿಹಾಸಿಕ ನಗರಿ ತಾಳಿಕೋಟೆಯಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಸಹ ಶ್ರೀ ಖಾಸ್ಗತೇಶ್ವರ ಅಜ್ಜನ ಜಾತ್ರೆ ವಿಜೃಂಭಣೆಯಿಂದ ಜರುಗಿತು.
ರಾಜ್ಯ, ಹೊರರಾಜ್ಯ ಸೇರಿದಂತೆ ಲಕ್ಷಾಂತರ ಭಕ್ತರನ್ನ ಹೊಂದಿರುವ ಈ ಖಾಸ್ಗತೇಶ್ವರ ಮಠದ ಜಾತ್ರೆ ಇಲ್ಲಿನ ವಿರಕ್ತ ಮಹಾಸ್ವಾಮಿಗಳ ಆಶೀರ್ವಾದದಿಂದ ಶ್ರೀ ಸಿದ್ದಲಿಂಗ ದೇವರು ಇವರ ಅಧ್ಯಕ್ಷತೆಯಲ್ಲಿ ಜಾತ್ರೆಯನ್ನ ಮಠದ ಭಕ್ತರು ಅಚ್ಚುಕಟ್ಟಾಗಿ ಆಯೋಜಿಸಿದ್ದರು.
ಜಾತ್ರೆಯ ಅಂಗವಾಗಿ ಕಳೆದೊಂದು ವಾರದಿಂದ ಮಠದ ಅಂಗಳದಲ್ಲಿ ಮತ್ತು ತಾಳಿಕೋಟೆಯಲ್ಲಿ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನ ಆಯೋಜಿಸಲಾಗಿತ್ತು. ಕಳೆದ ತಿಂಗಳ ಜೂನ್ 23 ರಿಂದ ಸಪ್ತ ಭಜನೆಯನ್ನು ಪ್ರಾರಂಭಿಸಲಾಗಿತ್ತು. ಈ ಬಾರಿ ವಿಶೇಷವಾಗಿ ಭಕ್ತರಿಗಾಗಿ ಹೋಳಿಗೆ ಮಹಾಪ್ರಸಾದವನ್ನ ಹಮ್ಮಿಕೊಳ್ಳಲಾಗಿತ್ತು. ಮಠವನ್ನ ಮತ್ತು ಮಠದ ಮುಖ್ಯ ರಸ್ತೆಗಳನ್ನ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು.ಕುಮಾರಿ ನೈಯಿಷಾ ಬಯಾನಾ ಅವರು ಜಾತ್ರೆಯ ಕುರಿತು ಪ್ರತಿಕ್ರಿಯಿಸಿದ್ದಾರೆ