ಬೆಂಗಳೂರು: ಇಂದಿನಿಂದ ಅಂದರೇ ಜುಲೈ 3 ರಿಂದ 10 ದಿನಗಳ ಕಾಲ 16ನೇ ವಿಧಾನಸಭೆಯ ಮೊದಲ ಅಧಿವೇಶನ ಆರಂಭವಾಗಲಿದೆ. ಇಂದು ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಷಣ ಮಾಡಲಿದ್ದು, ಹೊಸ ಕಾಂಗ್ರೆಸ್ ಸರ್ಕಾರದ ಮುನ್ನೋಟವನ್ನು ಮುಂದಿಡಲಿದ್ದಾರೆ.
ಮಂಗಳವಾರದಿಂದ ಉಭಯ ಸದನ ಆಡಳಿತಾರೂಢ ಹಾಗೂ ಪ್ರತಿಪಕ್ಷಗಳ ನಡುವಿನ ಸದನ ಕದನಕ್ಕೆ ಸಾಕ್ಷಿಯಾಗಲಿದೆ.
10 ದಿನಗಳ ಕಾಲ ಜಂಟಿ ಅಧಿವೇಶನ ಹಾಗೂ ಬಜೆಟ್ ಅಧಿವೇಶನ ನಡೆಯಲಿದ್ದು, ಇಂದು ಜಂಟಿ ಅಧಿವೇಶನ ಉದ್ದೇಶಿಸಿ ಮಧ್ಯಾಹ್ನ 12 ಗಂಟೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಷಣ ಮಾಡಲಿದ್ದಾರೆ. ಜು.7ಕ್ಕೆ ಸಿಎಂ ಸಿದ್ದರಾಮಯ್ಯ ಹೊಸ ಬಜೆಟ್ ಮಂಡನೆ ಮಾಡಲಿದ್ದಾರೆ. ಸೋಮವಾರದಿಂದ ಆರಂಭವಾಗಲಿರುವ ಹೊಸ ಕಾಂಗ್ರೆಸ್ ಸರ್ಕಾರದ ಮೊದಲ ಅಧಿವೇಶನ ಅನೇಕ ಸದನ ಕುತೂಹಲಕ್ಕೆ ಕಾರಣವಾಗಿದೆ
Laxmi News 24×7