Breaking News

ಎಪಿಎಂಸಿ ಕಾಯ್ದೆಗೆ ತಂದಿರುವ ತಿದ್ದುಪಡಿ ಹಿಂಪಡೆದರೆ ಸಾಲದು ನಮ್ಮ ಕೃಷಿ ಮಾರಾಟ ವ್ಯವಸ್ಥೆ ಸದೃಢಗೊಳಿಸಿ ರೈತ ಸ್ನೇಹಿ ಮಾಡುವಂತೆ ಕೃಷಿ ಆರ್ಥಿಕ ತಜ್ಞ ಡಾ ಪ್ರಕಾಶ ಕಮ್ಮರಡಿ ಒತ್ತಾಯಿ

Spread the love

ಬೆಳಗಾವಿ : ಎಪಿಎಂಸಿ ಕಾಯ್ದೆಗೆ ತಂದಿರುವ ತಿದ್ದುಪಡಿ ಹಿಂಪಡೆದರೆ ಸಾಲದು ನಮ್ಮ ಕೃಷಿ ಮಾರಾಟ ವ್ಯವಸ್ಥೆ ಸದೃಢಗೊಳಿಸಿ ರೈತ ಸ್ನೇಹಿ ಮಾಡುವಂತೆ ಕೃಷಿ ಆರ್ಥಿಕ ತಜ್ಞ ಡಾ ಪ್ರಕಾಶ ಕಮ್ಮರಡಿ ಒತ್ತಾಯಿಸಿದ್ದಾರೆ.

ಬೆಳಗಾವಿಯ ಎಪಿಎಂಸಿ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈ‌ ಹಿಂದಿನ ಕೊರೊನಾ ವೇಳೆ ಬಿಜೆಪಿ ಸರ್ಕಾರ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರುವ ಅವಶ್ಯಕತೆ ಇರಲಿಲ್ಲ. ಎಪಿಎಂಸಿ ಕಾಯ್ದೆ ವ್ಯಾಪ್ತಿಗೆ ಬರುವ ಉತ್ಪನ್ನಗಳ ಮಾರಾಟ ಈ ಪ್ರಾಂಗಣದಲ್ಲಿ ನಡೆಯಬೇಕು. ರೈತರು ಬೆಳೆದ ಬೆಳೆಗಳನ್ನು ನೇರವಾಗಿ ಎಪಿಎಂಸಿಗೆ ಬಂದರೆ ವರ್ತಕರು ಅದನ್ನು ಖರೀದಿಸಿ ಇಲ್ಲಿಯೇ ಮಾರಾಟ ಮಾಡುತ್ತಾರೆ. ಅದು ಬೇಡ ಎನ್ನುವ ಉದ್ದೇಶದಿಂದ ಹಿಂದಿನ ಬಿಜೆಪಿ ಸರ್ಕಾರ ನಿರ್ಧಾರ ಮಾಡಿ ಎಪಿಎಂಸಿ ಕಾಯ್ದೆ ಜಾರಿಗೆ ತಂದಿದ್ದರು. ರೈತರಿಗೆ ಮಾರಕವಾಗಿದ್ದ ಎಪಿಎಂಸಿ ಕಾಯ್ದೆ ಹಿಂಪಡೆಯುವ ನಿರ್ಧಾರ ಮಾಡಿದ್ದು, ರೈತರಿಗೆ ಹಾಗೂ ವರ್ತಕರ ಮೊಗದಲ್ಲಿ ಮಂದಹಾಸ ಮೂಡಿದೆ ಎಂದರು.

ತಾಲೂಕು ಮಟ್ಟದಲ್ಲಿರುವ ಎಪಿಎಂಸಿ ಪ್ರಾಂಗಣಕ್ಕೆ ತಾವು ಬೆಳೆದಿರುವ ಉತ್ಪನ್ನ ತರಲು ರೈತರಿಗೆ ಕಷ್ಟವಾಗಿದೆ. ಇದಕ್ಕೆ ಪರಿಹಾರವಾಗಿ ಆದಷ್ಟು ಬೇಗ ರೈತರ ಸಮೀಪಕ್ಕೆ ಎಪಿಎಂಸಿ ಶಾಖೆ ತೆರೆಯಬೇಕು. ರೈತರನ್ನು ಒಗ್ಗೂಡಿಸಿ ಉತ್ಪಾದಕರ ಸಂಘಗಳನ್ನು ರಚಿಸಬೇಕು. ಸಂಪೂರ್ಣ ಉಚಿತವಾಗಿ ಸರ್ಕಾರವೇ ಕೃಷಿ ಉತ್ಪನ್ನ ಸಾಗಣೆ ವೆಚ್ಚ ಭರಿಸಬೇಕು ಮತ್ತು ಗುಣಮಟ್ಟದ ಬಗ್ಗೆ ರೈತರಿಗೆ ತರಬೇತಿ ನೀಡಿ ಹೊಲದಲ್ಲಿಯೇ ಇದು ನಿರ್ಧಾರವಾಗಬೇಕು ಎಂದರು.

ಬೆಲೆ ಏರಿಕೆಗೆ ನಿಯಂತ್ರಣ ಹಾಕಬಹುದು: ಇಂದು ಆಹಾರ, ತರಕಾರಿ, ದ್ವಿದಳಧಾನ್ಯ ಸೇರಿ ಎಲ್ಲ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದ್ದರಿಂದ ಜನಸಾಮಾನ್ಯರು ಬಹಳಷ್ಟು ಸಂಕಷ್ಟ ಅನುಭವಿಸುವಂತಾಗಿದೆ. ಆ ಹಿನ್ನೆಲೆಯಲ್ಲಿ ರೈತರು ಬೆಳೆದ ಬೆಳೆಗಳನ್ನು ಸ್ಪರ್ಧಾತ್ಮಕ ಲಾಭದಾಯಕ ಬೆಲೆಯಲ್ಲಿ, ಸಂಪೂರ್ಣ ಸರ್ಕಾರದ ನಿಯಂತ್ರಣ, ಉಸ್ತುವಾರಿಯಲ್ಲೇ ಮಾರಾಟ ಆಗಬೇಕು. ಇವುಗಳ ಅಂತಿಮ ಉಪಯೋಗ ಮತ್ತು ಅನುಭೋಗಕ್ಕೆ ಬಳಸುವವರಿಗಿನ ಶೇಖರಣೆ, ಸಾಗಾಣಿಕೆ, ಮೌಲ್ಯವರ್ಧನೆ, ವಾಣಿಜ್ಯ ಇತ್ಯಾದಿ ಮಾರಾಟ ಚಟುವಟಿಕೆಗಳ ಸಂಪೂರ್ಣ ಮಾಹಿತಿ ಲಭ್ಯವಿರಬೇಕು. ಆಗ ಮಾತ್ರ ಗ್ರಾಹಕರ ಹಿತರಕ್ಷಣೆ ಮಾಡಿ ಬೆಲೆ ಏರಿಕೆಗೆ ನಿಯಂತ್ರಣ ಹಾಕಬಹುದು ಎಂದರು.


Spread the love

About Laxminews 24x7

Check Also

ಬೆಳಗಾವಿಯಲ್ಲಿ ಭಾರಿ ಮಳೆಗೆ ಮನೆ ಕುಸಿತ

Spread the love ಬೆಳಗಾವಿಯಲ್ಲಿ ಭಾರಿ ಮಳೆಗೆ ಮನೆ ಕುಸಿತ ಕಳೆದ ಮೂರ್ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಬೆಳಗಾವಿಯಲ್ಲಿ ಒಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ