Breaking News

ಮಂಗಳೂರ ಮಳೆಗೆ ಪಂಪ್​ವೆಲ್​ ಜಲಾವೃತ:

Spread the love

ಮಂಗಳೂರು: ನಗರದಲ್ಲಿ ಮಧ್ಯಾಹ್ನದ ಬಳಿಕ ಸುರಿದ ಭಾರೀ ಮಳೆಗೆ ಪಂಪ್ ವೆಲ್ ಸಂಪೂರ್ಣ ಜಲಾವೃತಗೊಂಡಿದೆ.

ಮಧ್ಯಾಹ್ನ 3 ಗಂಟೆಯ ಬಳಿಕ ಮಂಗಳೂರಿನಲ್ಲಿ ಧಾರಾಕಾರವಾಗಿ ಮಳೆ ಸುರಿದಿದೆ. 2 ಗಂಟೆಗಳಲ್ಲಿ ಸುರಿದ ಧಾರಾಕಾರ ಮಳೆಗೆ ಪಂಪ್​ವೆಲ್ ಫ್ಲೈಓವರ್ ಅಡಿಭಾಗ ಸಂಪೂರ್ಣ ಜಲಾವೃತಗೊಂಡಿದೆ. ಎಡ ಬಿಡದೇ ಮಳೆ ಸುರಿಯುತ್ತಿದ್ದು, ಫ್ಲೈಓವರ್ ಅಡಿ ನಿಂತ ನೀರಿನಿಂದಾಗಿ ವಾಹನ ಸಂಚಾರಕ್ಕೆ ಭಾರೀ ತೊಂದರೆಯುಂಟಾಗಿದೆ. ಪರಿಣಾಮ ರಸ್ತೆ ಉದ್ದಕ್ಕೂ ವಾಹನಗಳು ನಿಲುಗಡೆಯಾಗಿ ಟ್ರಾಫಿಕ್ ಜಾಮ್ ಆಗಿದೆ.

ಮಂಗಳೂರಿನ ಪ್ರಮುಖ ಪ್ರದೇಶವಾಗಿರುವ ಪಂಪ್​ವೆಲ್ ಬೆಂಗಳೂರು, ಕೇರಳ ಮತ್ತು ಮಹಾರಾಷ್ಟ್ರ ಸಂಪರ್ಕಿಸುವ ಸ್ಥಳವಾಗಿದೆ. ಕೇರಳದಿಂದ ಗೋವಾ, ಮಹಾರಾಷ್ಟ್ರ, ಮಂಗಳೂರಿನಿಂದ ಬೆಂಗಳೂರು ತಲುಪಲು ಈ ರಸ್ತೆಯನ್ನು ಬಳಸಲಾಗುತ್ತದೆ.


Spread the love

About Laxminews 24x7

Check Also

ಕಬ್ಬಿಗೆ ₹3300 ದರ – ವಿಜಯಪುರದಲ್ಲಿ ಗೊಂದಲ: ಸಚಿವ ಎಂ.ಬಿ. ಪಾಟೀಲ್ ಸ್ಪಷ್ಟನೆ*

Spread the loveಕಬ್ಬಿಗೆ ₹3300 ದರ – ವಿಜಯಪುರದಲ್ಲಿ ಗೊಂದಲ: ಸಚಿವ ಎಂ.ಬಿ. ಪಾಟೀಲ್ ಸ್ಪಷ್ಟನೆ* ರಾಜ್ಯ ಸರ್ಕಾರ ಕಬ್ಬಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ