Breaking News

ಬತ್ತಿದ ಕಬಿನಿ : ಹಿನ್ನೀರಿನಲ್ಲಿ ಕಾಣಿಸುತ್ತಿವೆ ಐತಿಹಾಸಿಕ ಪುರಾತನ ದೇವಾಲಯ

Spread the love

ಮೈಸೂರು : ರಾಜ್ಯದಲ್ಲಿ ಬರಗಾಲದ ಛಾಯೆ ಆವರಿಸಿದ್ದು. ಬಹುತೇಕ ಜಲಾಶಯಗಳು 10 ವರ್ಷಗಳ ನಂತರ ಖಾಲಿಯಾಗಿವೆ. ಮತ್ತೊಂದೆಡೆ ಜಲಾಶಯಗಳ ಹಿನ್ನೀರಿನಲ್ಲಿ ಇರುವ ದೇವಾಲಯಗಳು ಈಗ ಗೋಚರಿಸುತ್ತಿವೆ‌.

ಇದಕ್ಕೆ ನಿದರ್ಶನ ಎಂಬಂತೆ 10 ವರ್ಷಗಳ ನಂತರ ಮೈಸೂರು ಜಿಲ್ಲೆಯ ಬೀಚನಹಳ್ಳಿ ಸಮೀಪದಲ್ಲಿರುವ, ಕಬಿನಿ ಡ್ಯಾಂನಲ್ಲಿ ನೀರು ಸಂಪೂರ್ಣ ಕಡಿಮೆ ಆಗಿದ್ದು, ಹಿನ್ನೀರಿನಲ್ಲಿ ಮುಳುಗಡೆಯಾಗಿದ್ದ, ಐತಿಹಾಸಿಕ, ಪುರಾಣ ಪ್ರಸಿದ್ಧ ದೇವಾಲಯಗಳ ಕುರುಹುಗಳು ಪತ್ತೆಯಾಗಿವೆ.

 ಕೀರ್ತಿಪುರ ಗ್ರಾಮದ ಅರಳಿ ಮರದ ಬುಡಈ ಕುರುಹುಗಳು ಇತಿಹಾಸದ ಪುನ್ನಾಟ ಸಾಮ್ರಾಜ್ಯದ ಇತಿಹಾಸವನ್ನು ಹೇಳುತ್ತಿವೆ. ಹೌದು, ಎಚ್.ಡಿ.ಕೋಟೆ ಹಾಗೂ ಸುತ್ತಮುತ್ತಲಿನ ಭಾಗಗಳನ್ನು ಪ್ರಾಚೀನ ಕಾಲದಲ್ಲಿ ಪುನ್ನಾಟ ರಾಜ್ಯ ಎನ್ನಲಾಗುತ್ತಿತ್ತು. ಅದರ ರಾಜಧಾನಿ ಕೀರ್ತಿಪುರವು ಈಗಿನ ತೆರಣಿಮುಂಟಿ ಕಿತ್ತೂರು ಗ್ರಾಮ ಆಗಿತ್ತು. ಎಂಬುದು ಸ್ಥಳದ ಇತಿಹಾಸವಾಗಿದೆ.

 ಪುರಾತನ ದೇವಾಲಯದ ಕುರುಹುಗಳುಈ ಭಾಗದಲ್ಲಿದ್ದ ಪ್ರಾಚೀನ ದೇವಾಲಯಗಳಾದ ಮಾಕಾಳಮ್ಮ ದೇವಾಲಯ, ನಾಗದೇವತೆಗಳ ದೇವಾಲಯ, ಭವಾನಿ ಶಂಕರ ದೇವಾಲಯಗಳು ಕಬಿನಿ ಹಿನ್ನೀರಿನಲ್ಲಿ ಮುಳುಗಡೆಯಾಗಿದ್ದು, ಕಬಿನಿ ಹಿನ್ನೀರಿನ ನೀರಿನ ಮಟ್ಟ ಕುಸಿಯುತ್ತಿದ್ದಂತೆ ದೇವಾಲಯಗಳು ಕುರುಹುಗಳು ಗೋಚರಿಸುತ್ತಿವೆ. 2013 ರಲ್ಲಿ ತೀವ್ರ ಬರಗಾಲದ ಪರಿಸ್ಥಿತಿ ನಿರ್ಮಾಣವಾಗಿದ್ದಾಗ ಈ ದೇವಾಲಯಗಳು ಪೂರ್ಣಪ್ರಮಾಣದಲ್ಲಿ ಕಾಣಿಸಿದ್ದವು.


Spread the love

About Laxminews 24x7

Check Also

ಕಬ್ಬು ಬೆಳೆಗಾರರ ಹೋರಾಟ ಅಂತ್ಯ – ಜಿಲ್ಲಾಧಿಕಾರಿ ಆನಂದ ಕೆ. ಮಧ್ಯಸ್ಥಿಕೆಯಿಂದ ಪರಿಹಾರ

Spread the love ಕಬ್ಬು ಬೆಳೆಗಾರರ ಹೋರಾಟ ಅಂತ್ಯ – ಜಿಲ್ಲಾಧಿಕಾರಿ ಆನಂದ ಕೆ. ಮಧ್ಯಸ್ಥಿಕೆಯಿಂದ ಪರಿಹಾರ ವಿಜಯಪುರದಲ್ಲಿ ಕಳೆದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ