ಬೆಂಗಳೂರು: ಇಬ್ಬರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಪರಿಣಾಮ ಕಾಲೇಜು ವಿದ್ಯಾರ್ಥಿಯೊಬ್ಬ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿರುವ ಪ್ರಕರಣ ಬಸವೇಶ್ವರನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮಂಜುನಾಥ ನಗರದಲ್ಲಿ ಸೋಮವಾರ ನಡೆದಿದೆ.
ಸೊಹೇಲ್ (17) ಮೃತಪಟ್ಟ ವಿದ್ಯಾರ್ಥಿ. ಮಂಜುನಾಥ ನಗರದ ಗೌತಮ್ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ.
ಸೋಮವಾರ ಮಧ್ಯಾಹ್ನ 2.30ರ ಸಮಯಲ್ಲಿ ಕಾಲೇಜು ಸಮೀಪ ವಿದ್ಯಾರ್ಥಿ ನಿಂತಾಗ ವಾಹನದಲ್ಲಿ ಬಂದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಸೊಹೇಲ್ ಎಡಗೈ ಮತ್ತು ತೊಡೆಗೆ ಗಂಭೀರವಾದ ಗಾಯವಾಗಿತ್ತು. ಕೂಡಲೇ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಂಜೆ 4.30 ರ ಸುಮಾರಿಗೆ ಮೃತಪಟ್ಟಿದ್ದಾನೆ.
ಕರಣ ದಾಖಲಿಸಿಕೊಂಡಿರುವ ಬಸವೇಶ್ವರ ನಗರ ಠಾಣೆ ಪೊಲೀಸರು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ವಿಶೇಷ ತಂಡವೊಂದನ್ನು ರಚಿಸಿ ಆರೋಪಿಗಳ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಪಶ್ಚಿಮ ವಿಭಾಗದ ಡಿಸಿಪಿ ಲಕ್ಷ್ಮಣ್ ನಿಂಬರಗಿ ತಿಳಿಸಿದ್ದಾರೆ.