ಬೆಂಗಳೂರು : ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ರಂಗೇರುತ್ತಿದ್ದು, ಸ್ಟಾರ್ ಪ್ರಚಾರಕ್ಕಾಗಿ ಯಮಕನಮರಡಿ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತೆರಳಲಿದ್ದಾರೆ.
ಈಗಾಗಲೇ ಮೂರು ದಿನಗಳ ಕಾಲ ಪ್ರಚಾರ ನಡೆಸಿದ ಶಾಸಕ ಸತೀಶ್ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷರ ಆದೇಶದ ಮೇರೆಗೆ ಮತ್ತೆ ಶಿರಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ ಪರ ಎರಡು ದಿನಗಳ ಕಾಲ ಪ್ರಚಾರ ನಡೆಸಲಿದ್ದಾರೆ.
ನೂರಾರು ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಇದೇ ದಿನಾಂಕ 30 ಹಾಗೂ 31 ರಂದು ಟಿ.ಬಿ.ಜಯಚಂದ್ರರ ಪರ ಪ್ರಚಾರ ನಡೆಸಲಿದ್ದಾರೆ.