Breaking News

ಹುಬ್ಬಳ್ಳಿಯ ವಿಮಾನ ನಿಲ್ದಾಣವನ್ನು ಮತ್ತಷ್ಟು ಮೇಲ್ದರ್ಜೆಗೆ ಏರಲಿದೆ ಎಂದು ಪ್ರಹ್ಲಾದ್ ಜೋಶಿ

Spread the love

ಹುಬ್ಬಳ್ಳಿ : ಹುಬ್ಬಳ್ಳಿ ವಿಮಾನ ನಿಲ್ದಾಣದ ಟರ್ಮಿನಲ್ ಕಟ್ಟಡ ಸೇರಿದಂತೆ ಇತರ ಸೌಲಭ್ಯಗಳ ಬೃಹತ್ ಸುಧಾರಣೆ ಕಾರ್ಯಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರ ಪ್ರಸ್ತಾವನೆಗೆ ಕೇಂದ್ರ ಸರ್ಕಾರ ಸ್ಪಂದಿಸಿದೆ.

ಹುಬ್ಬಳ್ಳಿ ವಿಮಾನ ನಿಲ್ದಾಣ ಟರ್ಮಿನಲ್ ವಿಸ್ತರಣೆಗೆ 273 ಕೋಟಿ ರೂಪಾಯಿ ಬಿಡುಗಡೆ ಮಾಡಿದ ಬೆನ್ನಲ್ಲೇ ಕೇಂದ್ರ ಸಚಿವರು, ಹುಬ್ಬಳ್ಳಿಯ ವಿಮಾನ ನಿಲ್ದಾಣವನ್ನು ಮತ್ತಷ್ಟು ಮೇಲ್ದರ್ಜೆಗೆ ಏರಲಿದೆ ಎಂದು ತಿಳಿಸಿದ್ದಾರೆ.

 

 

ಈ ಕುರಿತು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಜೋಶಿ ಅವರು, ಹುಬ್ಬಳ್ಳಿ-ಧಾರವಾಡ ರಾಜ್ಯದ 2ನೇ ಅತೀ ದೊಡ್ಡ ನಗರವಾಗಿದ್ದು ಹಾಗೂ ಧಾರವಾಡದಲ್ಲಿ ಭಾರತೀಯ ತಾಂತ್ರಿಕ ಸಂಸ್ಥೆ (IIIT) ಹಾಗೂ ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆಗಳಂತಹ ಬೃಹತ್ ಸಂಸ್ಥೆಗಳ ಕಾರ್ಯಾರಂಭ ಮಾಡಿದೆ. ಹೀಗಾಗಿ ಹೆಚ್ಚುತ್ತಿರುವ ವಿಮಾನ ಪ್ರಯಾಣಿಕರ ಸಂಖ್ಯೆ ಹಿನ್ನೆಲೆಯಲ್ಲಿ ಸಚಿವರು ಈಗಿರುವ ಟರ್ಮಿನಲ್ ಕಟ್ಟಡದ ವಿಸ್ತೀರ್ಣ, ರನ್‌ವೇ ವಿಸ್ತೀರ್ಣ, ಆಪಾನ್ ವಿಸ್ತೀರ್ಣ ಹಾಗೂ ಕಾರ್ಗೋ ನಿರ್ವಹಣೆ ಸುಧಾರಣೆ ಮುಂತಾದ ಕಾರ್ಯ ಕೈಗೊಳ್ಳಲು ಕೇಂದ್ರ ನಾಗರಿಕ ವಿಮಾನ ಯಾನ ಸಚಿವ ಜ್ಯೋತಿರಾಧಿತ್ಯ ಸಿಂಧಿಯಾ ಅವರಿಗೆ ಕಳೆದ ತಿಂಗಳಷ್ಟೇ ಪತ್ರ ಬರೆದಿದ್ದರು.

ಈ ಪತ್ರಕ್ಕೆ ಉತ್ತರವಾಗಿ ಹುಬ್ಬಳ್ಳಿ ವಿಮಾನ ನಿಲ್ದಾಣದ ಎಲ್ಲಾ ಸುಧಾರಣಾ ಕಾರ್ಯದ ಪ್ರಸ್ತಾವನೆ ತೀವ್ರ ಪರಿಶೀಲನೆ ನಡೆಸಿ ಈ ಒಂದು ಐತಿಹಾಸಿಕ ತೀರ್ಮಾನ ಕೈಗೊಂಡಿದ್ದಾರೆ. ನೂತನ ಯೋಜನೆಯಂತೆ ಹುಬ್ಬಳ್ಳಿ ವಿಮಾನ ನಿಲ್ದಾಣದ ಟರ್ಮಿನಲ್ 20,000 ಚ.ಮೀ. ವಿಸ್ತರಣೆಗೊಳ್ಳಲಿದ್ದು, ಏಕಕಾಲಕ್ಕೆ 1400ಕ್ಕೂ ಹೆಚ್ಚು ಪ್ರಯಾಣಿಕರನ್ನು ನಿರ್ವಹಿಸುವ ಸಾಮರ್ಥ್ಯ ಹೊಂದಲಿದೆ ಎಂದು ತಿಳಿಸಿದ್ದಾರೆ.

 


Spread the love

About Laxminews 24x7

Check Also

ಪಂಚ ಗ್ಯಾರಂಟಿಗಳಿಗಾಗಿ ₹63 ಸಾವಿರ ಕೋಟಿ ಸಾಲ ಮಾಡಿದ ರಾಜ್ಯ ಸರ್ಕಾರ: ಸಿಎಜಿ ವರದಿ

Spread the love ಬೆಂಗಳೂರು: ಪಂಚ ಗ್ಯಾರಂಟಿಗಳಿಗಾಗಿ 2023-24 ಸಾಲಿನಲ್ಲಿ ಸಂಪನ್ಮೂಲ ಒದಗಿಸಲು ರಾಜ್ಯ ಸರ್ಕಾರ 63 ಸಾವಿರ ಕೋಟಿ ರೂಪಾಯಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ