Breaking News

ಸರ್ಕಾರ ನೀಡಿದ ಗ್ಯಾರಂಟಿಗಳನ್ನ ಪೂರ್ಣ ಪ್ರಮಾಣದಲ್ಲಿ ಜಾರಿಗೆ ತರುವ ತನಕ, ಸದನದ ಹೊರಗೆ ಹಾಗೂ ಒಳಗೆ ನಿರಂತರ ಹೋರಾಟ

Spread the love

ದಾವಣಗೆರೆ: ಸರ್ಕಾರ ನೀಡಿದ ಗ್ಯಾರಂಟಿಗಳನ್ನು ಪೂರ್ಣ ಪ್ರಮಾಣದಲ್ಲಿ ಜಾರಿಗೆ ತರುವ ತನಕ, ಸದನದ ಹೊರಗೆ ಹಾಗೂ ಒಳಗೆ ನಿರಂತರ ಹೋರಾಟ ಮಾಡಲಾಗುವುದು ಎಂದು ಮಾಜಿ ಸಿಎಂ ಬಿ.

ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ದಾವಣಗೆರೆಯಲ್ಲಿ ಸಂಸದ ಜಿ.ಎಂ. ಸಿದ್ದೇಶ್ವರ್ ಅವರ ಹುಟ್ಟುಹಬ್ಬದ ಪ್ರಯುಕ್ತ ಹಮ್ಮಿಕೊಂಡಿದ್ದ ಕಾರ್ಯಕ್ರಮಕ್ಕೆ ಆಗಮಿಸಿದ್ದ ವೇಳೆ ಮಾತನಾಡಿದ ಅವರು, ಎರಡು ಗ್ಯಾರಂಟಿಗಳನ್ನು ಬಿಟ್ರೇ ಯಾವುದೇ ಗ್ಯಾರಂಟಿಗಳನ್ನು ಜಾರಿ ಮಾಡಿಲ್ಲ, ಬಿಜೆಪಿ ಸರ್ಕಾರದ ಅವಧಿಯಲ್ಲಿ ಭ್ರಷ್ಟಾಚಾರ ಆಗಿದೆ ಎಂದು‌ ಕಾಂಗ್ರೆಸ್ ಹೇಳುತ್ತಿದೆ. ಅವರು ಆ ವಿಚಾರವಾಗಿ ತನಿಖೆ ಮಾಡುತ್ತೇವೆ ಎಂದು ಹೇಳಿರುವುದನ್ನು ಸ್ವಾಗತಿಸುತ್ತೇನೆ ಎಂದರು.

ಇನ್ನು, ವಿಪಕ್ಷ ನಾಯಕನ ಆಯ್ಕೆ ಇಂದು ಅಥವಾ ನಾಳೆ ಆಗಲಿ ಎಂದ ಅವರು, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಇಲ್ಲ. ಬಿತ್ತನೆ ನೂರಕ್ಕೆ ಶೇ.10% ಪ್ರಾರಂಭವಾಗಿಲ್ಲ, ಹೀಗಾಗಿ ತಕ್ಷಣ ಬರಗಾಲ ಪೀಡಿತ ಪ್ರದೇಶ ಎಂದು ಘೋಷಣೆ ಮಾಡಬೇಕು ಎಂದು ಒತ್ತಾಯ ಮಾಡುತ್ತೇನೆ. ಬರಗಾಲ ಎಂದು ಘೋಷಿಸಲು ಸರ್ಕಾರ ಮೀನಮೇಷ ಎಣಿಸುತ್ತಿರುವುದು ಸರಿಯಲ್ಲ, ಸದನ ಒಳಗೆ ನಮ್ಮ ನಾಯಕರು ಹೋರಾಟ ಮಾಡುತ್ತಾರೆ. ಭೀಕರ ಬರಗಾಲದಿಂದ ರಾಜ್ಯದಲ್ಲಿ ಕೆರೆ ಕಟ್ಟೆ, ಜಲಾಶಯಗಳು ಬತ್ತಿಹೋಗಿರುವ ಈ ಸಂದರ್ಭದಲ್ಲಿ ಕಣ್ಮುಚ್ಚಿಕೊಂಡು ಕುಳಿತಿರುವ ಸರ್ಕಾರ ಈಗಲಾದರೂ ಕಣ್ಣು ತೆರೆದು ವಾಸ್ತವ ಸ್ಥಿತಿಯನ್ನು ಅರ್ಥ ಮಾಡಿಕೊಂಡು ಬರಗಾಲ ಎಂದು ಘೋಷಣೆ ಮಾಡಬೇಕು ಎಂದು ಆಗ್ರಹಿಸಿದರು.


Spread the love

About Laxminews 24x7

Check Also

ಸರ್ಕಾರಿ ಶಾಲೆಗಳನ್ನು ಉಳಿಸಿ-ಬೆಳೆಸಿ : ಜಿಲ್ಲಾಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ

Spread the love ಸರ್ಕಾರಿ ಶಾಲೆಗಳನ್ನು ಉಳಿಸಿ-ಬೆಳೆಸಿ : ಜಿಲ್ಲಾಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಕೊಳವಿ ಗ್ರಾಮದ ನಮ್ಮೂರ ಸರಕಾರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ