Breaking News

ಲಂಚ ಪಡೆಯುತ್ತಿದ್ದ ಆರೋಪದ ಮೇಲೆ ಮಹಿಳಾ ವೈದ್ಯಾಧಿಕಾರಿ ಅಮಾನತು

Spread the love

ಮೈಸೂರು: ಪ್ರಾಥಮಿಕ‌ ಆರೋಗ್ಯ ಕೇಂದ್ರದಲ್ಲಿ ನರ್ಸ್​ಗಳು ಹಾಗೂ ಸಿಬ್ಬಂದಿ ಮೂಲಕ ರೋಗಿಗಳಿಂದ ಲಂಚ ಪಡೆಯುತ್ತಿದ್ದ ಆರೋಪದ ಮೇಲೆ ಮಹಿಳಾ ವೈದ್ಯಾಧಿಕಾರಿಯನ್ನು ಅಮಾನತುಗೊಳಿಸಲಾಗಿದೆ. ಮೈಸೂರಿನ ಶಾಂತಿನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಕೋಮಲಾ ಅವರನ್ನು ಅಮಾನತು ಮಾಡಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರಾದ ಡಿ. ರಂದೀಪ್ ಆದೇಶ ಹೊರಡಿಸಿದ್ದಾರೆ.

ಕರ್ತವ್ಯಲೋಪ, ದುರ್ನಡತೆ ಆರೋಪದ ಬಗ್ಗೆ ವಿಚಾರಣೆ ಬಾಕಿ ಇರಿಸಿ, ಈ ತಕ್ಷಣದಿಂದ ಅಮಾನತು ಜಾರಿಗೆ ಬರುವಂತೆ ಆದೇಶ ಹೊರಡಿಸಲಾಗಿದೆ. ವೈದ್ಯರು ಉದಯಗಿರಿ ಪೊಲೀಸ್ ಠಾಣೆ ಪಕ್ಕದಲ್ಲೇ ಇರುವ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನರ್ಸ್​ಗಳು ಹಾಗೂ ಸಿಬ್ಬಂದಿ ಮೂಲಕ ಬಾಣಂತಿ, ಮಕ್ಕಳು ವೃದ್ಧರಿಂದಲೂ ಲಂಚ ಪಡೆಯುತ್ತಿರುವ ಬಗ್ಗೆ ಆರೋಪ ಕೇಳಿ ಬಂದಿತ್ತು. ಲಂಚ ಕೊಟ್ಟರೆ ಮಾತ್ರ ಚಿಕಿತ್ಸೆ ನೀಡಲಾಗುತ್ತಿತ್ತು ಎಂದು ಆರೋಪಿಸಲಾಗಿತ್ತು. ಈ ಬಗ್ಗೆ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

ಈ ಸಂಬಂಧ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ, ತನಿಖೆ ಕೈಗೊಂಡು ವರದಿ ನೀಡುವಂತೆ ಆರೋಗ್ಯ ಇಲಾಖೆ ಆಯುಕ್ತರು ಸೂಚನೆ ನೀಡಿದ್ದರು. ತನಿಖಾ ವರದಿಯನ್ನು ಆಯುಕ್ತರಿಗೆ ಕಳುಹಿಸಲಾಗಿತ್ತು. ವರದಿ ಆಧಾರದ ಮೇಲೆ ವೈದ್ಯಾಧಿಕಾರಿಯನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ