Breaking News

ಇಂದೇ ಪ್ರತಿಪಕ್ಷ ನಾಯಕರ ಹೆಸರು ಪ್ರಕಟ?:BSY

Spread the love

ಬೆಂಗಳೂರು: ಉಭಯ ಸದನಗಳ ಪ್ರತಿಪಕ್ಷ ನಾಯಕರು ಮತ್ತು ನೂತನ ರಾಜ್ಯಾಧ್ಯಕ್ಷರ ನೇಮಕ ಕುರಿತು ಕೇಂದ್ರದಿಂದ ಆಗಮಿಸಿದ್ದ ವೀಕ್ಷಕರು ಅಭಿಪ್ರಾಯ ಸಂಗ್ರಹಿಸಿ ವಾಪಸಾಗಿದ್ದು ಇಂದೇ ಹೈಕಮಾಂಡ್ ಹೆಸರುಗಳನ್ನು ಪ್ರಕಟಿಸುವ ಸಾಧ್ಯತೆ ಇದೆ.

ಹೈಕಮಾಂಡ್ ಕೈಗೊಳ್ಳುವ ನಿರ್ಧಾರಕ್ಕೆ ನಾವೆಲ್ಲಾ ಬದ್ಧರಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ಡಾಲರ್ಸ್ ಕಾಲೋನಿಯ ತಮ್ಮ ನಿವಾಸ ಧವಳಗಿರಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರತಿಪಕ್ಷ ನಾಯಕ, ರಾಜ್ಯಾಧ್ಯಕ್ಷ ಯಾರಾಗಬೇಕು ಅಂತಾ ಕೇಂದ್ರದ ನಾಯಕರು ಬಂದು ಅಭಿಪ್ರಾಯ ತೆಗೆದುಕೊಂಡು ಹೋಗಿದ್ದಾರೆ. ಬಹುಶಃ ಇವತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ, ಪ್ರಧಾನಿ ನರೇಂದ್ರ ಮೋದಿ ಜೊತೆ ಚರ್ಚೆ ನಡೆಸಿ ತೀರ್ಮಾನಕ್ಕೆ ಬರಬಹುದು ಅಂತಾ ನಾವೆಲ್ಲಾ ಭಾವಿಸಿದ್ದೇವೆ. ಏನು ತೀರ್ಮಾನ ತೆಗೆದುಕೊಳ್ಳುತ್ತಾರೋ ನೋಡೋಣ, ಅವರ ತೀರ್ಮಾನವನ್ನು ಸ್ವಾಗತಿಸುತ್ತೇವೆ, ಬಹುಶಃ ಇವತ್ತು ಘೋಷಣೆ ಆಗಬಹುದು ಎಂದರು.


Spread the love

About Laxminews 24x7

Check Also

ಕೊಲ್ಲಿ ದೇಶಗಳಲ್ಲಿ ಸಿಲುಕಿರುವ ಕನ್ನಡಿಗರನ್ನು ಕರೆತರಲು ಕೇಂದ್ರಕ್ಕೆ ಪತ್ರ: ಪರಮೇಶ್ವರ್‌

Spread the loveಬೆಂಗಳೂರು: ಇಸ್ರೇಲ್ ಮತ್ತು ಇರಾನ್ ಯುದ್ಧದಿಂದ  ಕೊಲ್ಲಿ ದೇಶಗಳಲ್ಲಿ ಸಿಲುಕಿರುವ ಕನ್ನಡಿಗರನ್ನು ವಾಪಸ್‌ ಕರೆದುಕೊಂಡು ಬರಲು ಕೇಂದ್ರ ಸರ್ಕಾರಕ್ಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ