Breaking News

ಮಂಡ್ಯದಲ್ಲಿ ‘ವರ್ಗಾವಣೆ’ಯಿಂದ ಬೇಸತ್ತು ‘KSRTC ಚಾಲಕ’ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

Spread the love

ಮಂಡ್ಯ: ಜಿಲ್ಲೆಯ ನಾಗಮಂಗಲದ ಕೆ ಎಸ್ ಆರ್ ಟಿ ಸಿ ಬಸ್ ಡಿಪೋದಲ್ಲಿಯೇ ವರ್ಗಾವಣೆಗೆ ಬೇಸತ್ತು ಚಾಲಕ ಕಂ ನಿರ್ವಾಹಕ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.

ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಜೆಡಿಎಸ್ ಪರವಾಗಿ ಕೆಲಸ ಮಾಡಿದ್ದಾರೆ ಎಂಬ ಆರೋಪದ ಹಿನ್ನಲೆಯಲ್ಲಿ ಮಂಡ್ಯ ಜಿಲ್ಲೆಯ ನಾಗಮಂಗಲದ ಕೆ ಎಸ್ ಆರ್ ಟಿ ಬಸ್ ಡಿಪೋದಲ್ಲಿ ಕಾರ್ಯನಿರ್ವಹಿಸುತ್ತಿದ್ದಂತ ಚಾಲಕ ಕಂ ನಿರ್ವಾಹಕ ಹೆಚ್ ಆರ್ ಜಗದೀಶ್ ಎಂಬಾತನನ್ನು ಸಚಿವ ಚಲುವರಾಯ ಸ್ವಾಮಿ ಸೂಚನೆ ಮೇರೆಗೆ ವರ್ಗಾವಣೆ ಮಾಡಲಾಗಿತ್ತು ಎಂಬುದಾಗಿ ಆರೋಪಿಸಲಾಗಿದೆ.

 

ಈ ಹಿನ್ನಲೆಯಲ್ಲಿ ಇಂದು ವರ್ಗಾವಣೆ ಆದೇಶ ನೀಡಲು ಹೆಚ್ ಆರ್ ಜಗದೀಶ್ ಗೆ ಅಧಿಕಾರಿಗಳು ಮುಂದಾಗಿದ್ದರು. ಆದ್ರೇ ವರ್ಗಾವಣೆ ಆದೇಶ ತೆಗೆದುಕೊಳ್ಳದೇ ಜಗದೀಶ್ ನಾಗಮಂಗಲ ಕೆ ಎಸ್ ಆರ್ ಟಿ ಸಿ ಬಸ್ ಡಿಪೋ ಮುಂದೆಯೇ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಇನ್ನೂ ವಿಷ ಸೇವಿಸಿದಂತ ಜಗದೀಶ್ ಅವನ್ನು ಆಸ್ಪತ್ರೆಗೆ ಕರೆದೊಯ್ಯುವ ಪ್ರಯತ್ನಕ್ಕೆ ಅಲ್ಲಿನ ಸಿಬ್ಬಂದಿಗಳು ಇಳಿದರೂ, ವರ್ಗಾವಣೆ ಆದೇಶ ರದ್ದುಗೊಳಿಸುವವರೆಗೂ ಹೋಗುವುದಿಲ್ಲ ಎಂಬುದಾಗಿ ಹಠ ಮಾಡಿದ್ದಾರೆ. ಕೊನೆಗೆ ಮನವೊಲಿಸಿ ತಾಲೂಕು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಬಳಿಕ, ತೀವ್ರ ಅಸ್ವಸ್ಥಗೊಂಡ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ನನ್ನ ವರ್ಗಾವಣೆಗೆ ಸಚಿವ ಚೆಲುವರಾಯಸ್ವಾಮಿ ಕಾರಣ ಎಂಬುದಾಗಿ ಕೆ ಎಸ್ ಆರ್ ಟಿ ಸಿ ಚಾಲಕ ಕಂ ನಿರ್ವಾಹ ಹೆಚ್ ಆರ್ ಜಗದೀಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ರಾಜಕೀಯ ದ್ವೇಷದಿಂದ ವರ್ಗಾವಣೆ ಮಾಡಲಾಗಿದೆ ಎಂಬುದಾಗಿ ಕಿಡಿಕಾರಿದ್ದಾರೆ.


Spread the love

About Laxminews 24x7

Check Also

ಕೈದಿಗಳಿಗೆ ರಾಜಾತಿಥ್ಯ ಸಿಎಂ, ಗೃಹ ಸಚಿವರು ರಾಜೀನಾಮೆ ನೀಡಲಿ: B.J.P.

Spread the love ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಕೈದಿಗಳಿಗೆ ವಿಶೇಷ ಆತಿಥ್ಯ ಖಂಡಿಸಿ ಇಂದು ಸಿಎಂ ಮನೆಗೆ ಬಿಜೆಪಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ