Breaking News

ಸ್ಮಾರ್ಟ್ ಸಿಟಿ ಕಾಮಗಾರಿಯ ನಿರ್ಲಕ್ಷ್ಯ ವಿದ್ಯುತ್ ತಗುಲಿ ಹಸು ಕರು ಸಾವು

Spread the love

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಸ್ಮಾರ್ಟ್ ಸಿಟಿಯಲ್ಲಿ ಮತ್ತೊಂದು ಅವಘಡ ಸಂಭವಿಸಿದ್ದು, ವಿದ್ಯುತ್ ಫೀಡರ್ ಪಿಲ್ಲರ್ ತಗಲಿ ಹಸು-ಕರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಇಂದು ಬೆಳಗಿನ ಜಾವ ಅಕ್ಕಿಹೊಂಡದ ಬಳಿ ನಡೆದಿದೆ. ಸ್ಮಾರ್ಟ್ ಸಿಟಿ ಯೋಜನೆಗಳಿಂದಾಗಿ ಒಂದಲ್ಲಾ ಒಂದು ಯಡವಟ್ಟುಗಳು ಆಗುತ್ತಿವೆ ಎಂದು ಅಲ್ಲಿನ ಸಾರ್ವಜನಿಕರು ಆರೋಪಿಸಿದ್ದಾರೆ.

ಅದರಂತೆ ಅಕ್ಕಿಹೊಂಡದಲ್ಲಿ ಕೂಡಾ ಸ್ಮಾರ್ಟ್ ಸಿಟಿ ಕಾಮಗಾರಿ ನಡೆಸುತ್ತಿರುವವರ ನಿರ್ಲಕ್ಷ್ಯದಿಂದಾಗಿ ಈ ಅವಘಡ ಸಂಭವಿಸಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಲ ದಿನಗಳಿಂದ ಇಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿಯ ಭಾಗವಾಗಿ ಅಂಡರ್ ಗ್ರೌಂಡ್ ವಿದ್ಯುತ್ ಕೇಬಲ್ ಅಳವಡಿಕೆ ಮಾಡಲಾಗಿತ್ತು. ವಿದ್ಯುತ್ ನಿರ್ವಹಣೆಗೆ ಅಳವಡಿಸಲಾಗಿದ್ದ ವಿದ್ಯುತ್ ಫೀಡರ್ ಪಿಲ್ಲರ್ ನಿರ್ವಹಣೆಗೆ ಅಳವಡಿಸಿದ್ದ ಸ್ಥಳದಲ್ಲಿ ವಿದ್ಯುತ್ ಫೀಡರ್ ಪಿಲ್ಲರ್ ಶಾರ್ಟ್ ಆಗಿ ವಿದ್ಯುತ್ ತಗುಲುತ್ತಿದೆ. ಮಳೆಯಿಂದ ನೆಲ ತೇವಾಂಶಗೊಂಡಿದ್ದರಿಂದ ಆ ಜಾಗದಲ್ಲಿ ಆಸರೆ ಪಡೆದಿದ್ದ ಹಸು ಮತ್ತು ಕರು ಆಕಸ್ಮಿಕವಾಗಿ ವಿದ್ಯುತ್ ತಗುಲಿ ಸಾವಿಗೀಡಾಗಿವೆ.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ