Breaking News

B.S.Y. ಸಂಬಂಧಿ, ಬಿಜೆಪಿಯ ಮಾಜಿ ಶಾಸಕ ಚಿಕ್ಕನಗೌಡರ್ ಕಾಂಗ್ರೆಸ್​ಗೆ ಸೇರ್ಪಡೆ

Spread the love

ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿಯಡಿಯೂರಪ್ಪ ಸಂಬಂಧಿ, ಬಿಜೆಪಿಯ ಮಾಜಿ ಶಾಸಕ ಚಿಕ್ಕನಗೌಡರ್ ಕಾಂಗ್ರೆಸ್​ಗೆ ಸೇರ್ಪಡೆಗೊಳ್ಳುವ ವಿಚಾರ ಸಾಕಷ್ಟು ದಟ್ಟವಾಗಿದ್ದು, ರಾಜ್ಯ ಹಾಗೂ ಜಿಲ್ಲೆಯ ರಾಜಕಾರಣದ ಬೆಳವಣಿಗೆಗೆ ಪುಷ್ಟಿ ನೀಡಲಿದೆ.

ಶೀಘ್ರದಲ್ಲಿ ಯಡಿಯೂರಪ್ಪ ಸಂಬಂಧಿ ಎಸ್ ಐ ಚಿಕ್ಕನಗೌಡರ್​ ಕಾಂಗ್ರೆಸ್ ಸೇರ್ಪಡೆಗೊಳ್ಳುವುದನ್ನು ಖಾತ್ರಿ ಪಡಿಸಿದ್ದಾರೆ. ಚಿಕ್ಕನಗೌಡರ ಕುಂದಗೋಳ ಮಾಜಿ ಶಾಸಕರಾಗಿದ್ದು, ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಪಕ್ಷೇತರರಾಗಿ ಕಣಕ್ಕಿಳದು ಪರಾಜಿತರಾಗಿದ್ದರು. ಬಿಜೆಪಿ‌ ಟಿಕೆಟ್ ಸಿಗದೇ ಪಕ್ಷೇತರರಾಗಿ ಸ್ಪರ್ಧಿಸಿ ಸೋತಿದ್ದ ಎಸ್ ಐ ಚಿಕ್ಕನಗೌಡರ ಈಗ ಕಾಂಗ್ರೆಸ್ ಪಕ್ಷದತ್ತ ಮುಖ ಮಾಡಿದ್ದಾರೆ.

ಲೋಕಸಭಾ ಚುನಾವಣೆ ದೃಷ್ಟಿಯಿಂದ ಆಪರೇಷನ್ ಹಸ್ತ: ಇನ್ನು ಲೋಕಸಭಾ ಚುನಾವಣಾ ದೃಷ್ಟಿಯಿಂದ ಕಾಂಗ್ರೆಸ್ ಸೇರಲಿರುವ ಚಿಕ್ಕನಗೌಡರ್​, ಮಾಜಿ ಸಿ ಎಂ ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಗೊಳ್ಳಲು ಸಜ್ಜಾಗಿದ್ದಾರೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಸದ್ದಿಲ್ಲದೆ ಆಪರೇಷನ್ ಆರಂಭಿಸಿರುವ ಜಗದೀಶ್ ಶೆಟ್ಟರ್, ಬಿಜೆಪಿ ಪ್ರಮುಖ ನಾಯಕರನ್ನು ಕಾಂಗ್ರೆಸ್ ನತ್ತ ಸೆಳೆಯುತ್ತಿದ್ದಾರೆ. ಶೆಟ್ಟರ್ ಜೊತೆ ಒಂದು ಸುತ್ತಿನ ಮಾತುಕತೆ ಮಾಡಿರುವ ಎಸ್ ಐ ಚಿಕ್ಕನಗೌಡರ್, ನಿನ್ನೆ ತಮ್ಮ ನಿವಾಸದಲ್ಲಿ ಕರೆದಿದ್ದ ಆಪ್ತರ ಸಭೆಯಲ್ಲಿ ಕಾಂಗ್ರೆಸ್ ಸೇರುವುದಾಗಿ ಘೋಷಣೆ ಮಾಡಿದ್ದಾರೆ.


Spread the love

About Laxminews 24x7

Check Also

ನಾಗನೂರು ಪಟ್ಟಣದಲ್ಲಿ ವಿಭಾಗ ಹಾಗೂ ರಾಜ್ಯಮಟ್ಟದ ಖೋ ಖೋ ಟೂರ್ನಿಯಲ್ಲಿ ಸಂಸದೆ ಪ್ರಿಯಾಂಕ ಜಾರಕಿಹೊಳಿ ಭಾಗಿ

Spread the love ನಾಗನೂರು ಪಟ್ಟಣದಲ್ಲಿ ವಿಭಾಗ ಹಾಗೂ ರಾಜ್ಯಮಟ್ಟದ ಖೋ ಖೋ ಟೂರ್ನಿಯಲ್ಲಿ ಸಂಸದೆ ಪ್ರಿಯಾಂಕ ಜಾರಕಿಹೊಳಿ ಭಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ