ಬೆಂಗಳೂರು: ಜೂನ್‌ನಲ್ಲಿ ತೀವ್ರ ಮಳೆ ಅಭಾವ ಎದುರಿಸಿದ್ದ ರಾಜ್ಯವು ಜುಲೈನಲ್ಲಿ ತುಸು ಚೇತರಿಕೆ ಹಾದಿಯತ್ತ ಸಾಗಿದೆ.
ಜುಲೈ 1ರಿಂದ ಜುಲೈ 6ರವರೆಗೆ ವಾಡಿಕೆಗಿಂತ ತುಸು ಅಧಿಕವಾಗಿ ವರ್ಷಧಾರೆಯಾಗಿದೆ. ಇದರಿಂದಾಗಿ ಮಳೆ ಕೊರತೆಯಿಂದ ದಯನೀಯ ಸ್ಥಿತಿಗೆ ಒಳಗಾಗಿದ್ದ ರೈತಾಪಿ ವರ್ಗ ನಿಟ್ಟಿಸಿರುವ ಬಿಡುವಂತಾಗಿದೆ.
ಆದರೆ, ಚಾಮರಾಜನಗರ, ಮೈಸೂರು, ಮಂಡ್ಯ, ಬೆಳಗಾವಿ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಮತ್ತು ಕೊಡಗಿನಲ್ಲಿ ಪ್ರಸಕ್ತ ತಿಂಗಳ ಮೊದಲ ವಾರದಲ್ಲಿಯೂ ಮಳೆ ಕೊರತೆ ಮುಂದುವರಿದಿದೆ. ಇದರಿಂದಾಗಿ ಮೈಸೂರು ಭಾಗದಲ್ಲಿ ಕೃಷಿ ಚಟುವಟಿಕೆಗಳ ಮೇಲೆ ಇನ್ನಷ್ಟು ಪರಿಣಾಮ ಬೀರಿದಂತಾಗಿದೆ.
ಕರಾವಳಿ ಭಾಗದಲ್ಲಿ ಗುರುವಾರವೂ ವರುರ್ಣಾಭಟ ಮುಂದುವರಿದಿದ್ದು, ಉಡುಪಿ ಜಿಲ್ಲಾದ್ಯಂತ ಸರಾಸರಿ 200 ಮಿಮೀ ಅಧಿಕ ಮಳೆ ಸುರಿದಿದೆ. ಕೊಡಗು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕಡದಲ್ಲಿ ಜುಲೈ 7ರಂದು ಅತಿ ಹೆಚ್ಚು ಮಳೆ ಬೀಳುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಈ ಸಂದರ್ಭದಲ್ಲಿ 204 ಮಿಮೀ ಗಿಂತ ಹೆಚ್ಚು ಮಳೆ ಸುರಿಯುವ ಸಾಧ್ಯತೆ ಇದೆ. ಮೀನುಗಾರರು ಸಮುದ್ರ ಇಳಿಯದಂತೆ ಹಾಗೂ ಸಮುದ್ರ ತೀರದ ನಿವಾಸಿಗಳು ಎಚ್ಚರಿಕೆಯಿಂದಿರುವಂತೆ ಇಲಾಖೆ ಸಲಹೆ ನೀಡಿದೆ.