Breaking News

ಬಜೆಟ್​ನಲ್ಲಿ ವಿವಿಧ ಜಿಲ್ಲೆಗಳನ್ನು ಕೇಂದ್ರೀಕರಿಸಿ ಘೋಷಣೆಯಾದ ಪ್ರಮುಖ ಅನುದಾನ,

Spread the love

ಮೈಸೂರು ಜಿಲ್ಲೆ: ವಿಶೇಷ ಕಂಪು, ರುಚಿ ಮತ್ತು ಸೊಗಡಿನಿಂದ ಜನಮನದಲ್ಲಿ ನೆಲೆಸಿರುವ ಮೈಸೂರು ಮಲ್ಲಿಗೆ, ನಂಜನಗೂಡು ರಸಬಾಳೆ ಹಾಗೂ ಮೈಸೂರು ವೀಳ್ಯದೆಲೆಗಳ ಉತ್ಪಾದನೆ, ಸಂಶೋಧನೆ, ಮಾರುಕಟ್ಟೆ ಮತ್ತು ಬ್ರಾಂಡಿಂಗ್ ಉತ್ತೇಜಿಸಲು ನೂತನ ಕಾರ್ಯಕ್ರಮ ಜಾರಿ.

ಮೈಸೂರಿನಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಸೈಕ್ಲಿಂಗ್ ವೆಲೋಡ್ರೋಮ್ ಸ್ಥಾಪನೆ.

ಮೈಸೂರಿನ ಶ್ರೀ ಚಾಮುಂಡೇಶ್ವರಿ ದೇವಾಲಯಕ್ಕೆ ಬರುವ ಲಕ್ಷಾಂತರ ಭಕ್ತಾದಿಗಳಿಗೆ ಅಗತ್ಯ ಮೂಲಭೂತ ಸೌಲಭ್ಯವನ್ನು ಕಲ್ಪಿಸುವ ಸಲುವಾಗಿ ಮತ್ತು ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿ ಕೈಗೊಳ್ಳುವ ಸಲುವಾಗಿ ಶ್ರೀ ಚಾಮುಂಡೇಶ್ವರಿ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ರಚಿಸಲಾಗುವುದು.

ಹಿಂದೆ ಘೋಷಿಸಿದಂತೆ ಮೈಸೂರು ಜಿಲ್ಲೆಯಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಚಿತ್ರನಗರಿ ನಿರ್ಮಾಣ.

ಬಾಗಲಕೋಟ ಜಿಲ್ಲೆ: ಕುಲಹಳ್ಳಿ-ಹನ್ನೂರು, ತಿಮ್ಮಾಪುರ, ಸಸಾಲಟ್ಟಿ-ಶಿವಲಿಂಗೇಶ್ವರ ಮತ್ತು ಮಂಟೂರು ಮಹಾಲಕ್ಷ್ಮಿ ಏತ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಿ ಸುಮಾರು 39,134 ಹೆಕ್ಟೇರ್ ಅಚ್ಚುಕಟ್ಟು ಸ್ಥಿರೀಕರಣ ಮಾಡಲಾಗುವುದು.

ಕೊಪ್ಪಳ ಜಿಲ್ಲೆ: ತುಂಗಭದ್ರಾ ಜಲಾಶಯದಲ್ಲಿ ಹೂಳಿನ ಸಂಗ್ರಹಣೆಯಿಂದ ಉಂಟಾಗಿರುವ ನೀರು ಸಂಗ್ರಹಣೆ ಸಾಮರ್ಥ್ಯದ ಕೊರತೆ ನಿವಾರಿಸಲು ಕೊಪ್ಪಳ ಜಿಲ್ಲೆಯ ನವಲೆ ಬಳಿ ಸಮತೋಲನಾ ಜಲಾಶಯ ನಿರ್ಮಾಣ ಯೋಜನೆಯನ್ನು ನೆರೆಯ ಆಂಧ್ರ ಪ್ರದೇಶ ಮತ್ತು ತೆಲಂಗಾಣ ರಾಜ್ಯಗಳೊಂದಿಗೆ ಸಮಾಲೋಚಿಸಿ, ಸಹಮತಿಯೊಂದಿಗೆ ಯೋಜನೆ ಅನುಷ್ಠಾನಗೊಳಿಸಲು ಕ್ರಮ

ಬೆಂಗಳೂರು ಜಿಲ್ಲೆ: ಬೆಂಗಳೂರಿನಲ್ಲಿರುವ ವಿಶ್ವೇಶ್ವರಯ್ಯ ಕಾಲೇಜ್ ಆಫ್ ಎಂಜಿನಿಯರಿಂಗ್ ಯುನಿವರ್ಸಿಟಿಯನ್ನು ಉನ್ನತೀಕರಣಗೊಳಿಸಲು ಮೂಲಭೂತ ಸೌಕರ್ಯಕ್ಕಾಗಿ 25 ಕೋಟಿ ರೂ. ಅನುದಾನ.

ಬೆಂಗಳೂರು ನಗರದಲ್ಲಿರುವ ಹೆಚ್ಚಿನ ಸಂಚಾರ ದಟ್ಟಣೆಯನ್ನು ಹೊಂದಿರುವ 192 ಕಿಮೀ ಉದ್ದದ ವಿವಿಧ 12 ಪ್ರಮುಖ ರಸ್ತೆಗಳನ್ನು ಹೈಡೆನ್ಸಿಟಿ ಕಾರಿಡಾರ್​ಗಳೆಂದು 2016ರಲ್ಲಿ ಗುರುತಿಸಲಾಗಿದೆ. ಈ ಪೈಕಿ 92 ಕಿಮೀ ಉದ್ದದ ರಸ್ತೆಗಳನ್ನು ಈಗಾಗಲೇ ಅಭಿವೃದ್ಧಿಪಡಿಸಲಾಗಿದೆ. 2023-24ನೇ ಸಾಲಿನಲ್ಲಿ 83 ಕಿಮೀ ಉದ್ದದ ರಸ್ತೆಗಳನ್ನು 273 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು.

2024ರ ಅಂತ್ಯದ ವೇಳೆಗೆ ಬೈಯಪ್ಪನಹಳ್ಳಿಯಿಂದ ಕೃಷ್ಣರಾಜಪುರದವರೆಗೆ, ಕೆಂಗೇರಿಯಿಂದ ಚಲ್ಲಘಟ್ಟದವರೆಗೆ, ನಾಗಸಂದ್ರದಿಂದ ಮಾದಾವರದವರೆಗೆ, ಆರ್ ವಿ ರ್ಸತೆಯಿಂದ ಬೊಮ್ಮಸಂದ್ರದವರೆಗೆ ಒಟ್ಟು 27 ಕಿಮೀಗಳ ನೂತನ ಮೆಟ್ರೊ ರೈಲು ಮಾರ್ಗಗಳನ್ನು ಪ್ರಾರಂಭಿಸಲಾಗುವುದು.

ಬೆಂಗಳೂರಿನ ಎಸ್​ಕೆಎಸ್​​ಜೆಟಿಐ ಎಂಜಿನಿಯರಿಂಗ್ ಕಾಲೇಜಿನಲ್ಲಿರುವ ಜವಳಿ ತಂತ್ರಜ್ಞಾನ ವಿಭಾಗವನ್ನು ರಾಷ್ಟ್ರೀಯ ತೆಕ್ನಿಕಲ್ ಟೆಕ್ಸ್​ಟೈಲ್ ಅಭಿಯಾನ ಮತ್ತು ಪಿಎಂ-ಮಿತ್ರ ಯೋಜನೆಗಳಡಿ Smart and Technical Textile Centre ಆಗಿ ಉನ್ನತೀಕರಣ

ದೇವನಹಳ್ಳಿ -ವಿಜಯಪುರ – ಎಚ್​ ಕ್ರಾಸ್ – ವೇಮಗಲ್ – ಮಾಲೂರು – ತಮಿಳುನಾಡು ಗಡಿವರೆಗೆ ಕೈಗಾರಿಕಾ ಸಂಪರ್ಕವನ್ನು ಕಲ್ಪಿಸಲು ನಾಲ್ಕು ಮತ್ತು ಆರು ಪಥದ 123 ಕಿಮೀ ಉದ್ದದ ರಸ್ತೆ ನಿರ್ಮಾಣ ಕಾಮಗಾರಿಯನ್ನು 1826 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ ಹೈಬ್ರಿಡ್ ಆನ್ಯೂಟಿ ಯೋಜನೆಯಡಿ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ನಿಯಮಿತದ ವತಿಯಿಂದ ಕೈಗೊಳ್ಳಲಾಗುವುದು.

ರಾಜ್ಯದಲ್ಲಿ ಸೆಮಿಕಂಡಕ್ಟರ್ ವಲಯದ ಅಭಿವೃದ್ಧಿಗೆ ಉತ್ತೇಜನ ನೀಡಲು ಬೆಂಗಳೂರಿನ ಕಾಡುಗೋಡಿಯಲ್ಲಿ 100 ಎಕರೆ ಪ್ರದೇಶದಲ್ಲಿ Technology Innovation Park ಅಭಿವೃದ್ಧಿಪಡಿಸಲಾಗುವುದು.

ಅತ್ಯಾಧುನಿಕ ಕರ್ನಾಟಕ ಏರೋಸ್ಪೇಸ್ ತಂತ್ರಜ್ಞಾನ ಕೇಂದ್ರವನ್ನು ಬೆಂಗಳೂರಿನ ದೇವನಹಳ್ಳಿ ಏರೋಸ್ಪೇಸ್ ಮತ್ತು ಡಿಫೆನ್ಸ್​ ಪಾರ್ಕ್​ನಲ್ಲಿ ಸ್ಥಾಪಿಸಲಾಗುವುದು.

ಅಂತಾರಾಷ್ಟ್ರೀಯ ಮಟ್ಟದಲ್ಲಿ ಸ್ಪರ್ಧಿಸುವ ಸಾಮರ್ಥ್ಯವುಳ್ಳ ರಾಜ್ಯದ ಕ್ರೀಡಾಪಟುಗಳನ್ನು ತಯಾರಿಸಲು ಬೆಂಗಳೂರಿನಲ್ಲಿ ಬಾಸ್ಕೆಟ್​ ಬಾಲ್ ಪ್ರಾದೇಶಿಕ ತರಬೇತಿ ಕೇಂದ್ರ ಆರಂಭಿಸಲಾಗುವುದು.

ಬೆಂಗಳೂರಿನಲ್ಲಿರುವ ಡಾ. ರಾಜಕುಮಾರ್ ಸ್ಮಾರಕದ ಬಳಿ ಕನ್ನಡ ಚಿತ್ರರಂಗ ಬೆಳೆದು ಬಂದ ಇತಿಹಾಸವನ್ನು ದಾಖಲಿಸುವ ವಸ್ತು ಸಂಗ್ರಹಾಲಯವನ್ನು ಸ್ಥಾಪಿಸಲಾಗುವುದು.

ರಾಮನಗರ ಜಿಲ್ಲೆ: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ವತಿಯಿಂದ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನಲ್ಲಿ ಒಂದು ಹೊಸ ವೈದ್ಯಕೀಯ ಕಾಲೇಜು ಸ್ಥಾಪನೆ.

ಕಲಬುರಗಿ ಜಿಲ್ಲೆ: ಗುಲ್ಬರ್ಗಾ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ 200 ಹಾಸಿಗೆಯ ಹೊಸ ತಾಯಿ ಮತ್ತು ಮಕ್ಕಳ ಆಸ್ಪತ್ರೆ 70 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣ.

ರಾಯಚೂರು ಜಿಲ್ಲೆ: ರಾಯಚೂರು ಬಳಿಯ ಕಲ್ಮಲಾ ಜಂಕ್ಷನ್​ನಿಂದ ಸಿಂಧನೂರು ಬಳಿಯ ಬಳ್ಳಾರಿ – ಲಿಂಗಸುಗೂರು ರಸ್ತೆ ವೃತ್ತದವರೆಗೆ ಒಟ್ಟು 78 ಕಿಮೀ ಉದ್ದ ರಸ್ತೆಯನ್ನು 1696 ಕೋಟಿ ರೂ.ಗಳ ಮೊತ್ತದಲ್ಲಿ ಹೈಬ್ರಿಡ್ ಆನ್ಯೂಟಿ ಮಾದರಿಯಲ್ಲಿ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ನಿಯಮಿತದ ವತಿಯಿಂದ ಅಭಿವೃದ್ಧಿಪಡಿಸಲಾಗುವುದು.

ವಿಜಯಪುರ ಜಿಲ್ಲೆ: ವಿಜಯಪುರ ವಿಮಾನ ನಿಲ್ದಾಣದ ಸಿವಿಲ್ ಕಾಮಗಾರಿಗಳನ್ನು ಪೂರ್ಣಗೊಳಿಸಿ ವಿಮಾನ ನಿಲ್ದಾಣದ ಕಾರ್ಯಾಚರಣೆಯನ್ನು ಪ್ರಸಕ್ತ ಸಾಲಿನಲ್ಲಿಯೇ ಪ್ರಾರಂಭಿಸಲಾಗುವುದು.

ವಿಜಯಪುರ ಜಿಲ್ಲೆಯಲ್ಲಿ ಉತ್ಪಾದನಾ ಕ್ಲಸ್ಟರ್ ಅಭಿವೃದ್ಧಿಪಡಿಸಲಾಗುವುದು.

ಉತ್ತರ ಕನ್ನಡ ಜಿಲ್ಲೆ: ಬಂದರು ಅವಲಂಬಿತ ಕೈಗಾರಿಕೆಗಳಿಗೆ ಉತ್ತೇಜನ ನೀಡಲು ಉತ್ತರ ಕನ್ನಡ ಜಿಲ್ಲೆಯ ಕೇಣಿಯಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಸರ್ವ ಋತು ಡೀಪ್ ವಾಟರ್ ಗ್ರೀನ್ ಫೀಲ್ಡ್​ ಬಂದರು ಅಭಿವೃದ್ಧಿಪಡಿಸಲಾಗುವುದು.

ಉತ್ತರ ಕನ್ನಡ ಜಿಲ್ಲೆಯ ಮಂಕಿಯಲ್ಲಿ ಬಹುಪಯೋಗಿ ಬಂದರಿನ ಅಭಿವೃದ್ಧಿಗೆ ಪ್ರಸಕ್ತ ಸಾಲಿನಲ್ಲಿ ಕಾರ್ಯಸಾಧ್ಯತಾ ವರದಿ ಸಿದ್ಧಪಡಿಸಲಾಗುವುದು.

ಬೀದರ್ ಜಿಲ್ಲೆ: ಬೀದರ್ ಜಿಲ್ಲೆಯಲ್ಲಿ ಕೃಷ್ಣಮೃಗಗಳು ಹೆಚ್ಚಾಗಿ ಕಂಡು ಬರುವುದರಿಂದ ಇವುಗಳ ಸಂರಕ್ಷಣೆಗಾಗಿ ಕೃಷ್ಣಮೃಗ ಸಂರಕ್ಷಣಾ ಮೀಸಲು ಪ್ರದೇಶ ಘೋಷಿಸಲಾಗುವುದು. ಈ ಸಂರಕ್ಷಣಾ ಮೀಸಲು ಪ್ರದೇಶದ ರಕ್ಷಣೆ ಮತ್ತು ನಿರ್ವಹಣೆಗಾಗಿ 2 ಕೋಟಿ ರೂ. ಮೀಸಲು


Spread the love

About Laxminews 24x7

Check Also

ಮನುಷ್ಯ ನೀನು ದಂಡ, ಸತ್ತು ಹೋಗು!: ಎಐ ಚಾಟ್‌ಬಾಟ್‌ ಹೇಳಿಕೆ

Spread the love ನವದೆಹಲಿ: ಇತ್ತೀಚೆಗೆ ಕೃತಕ ಬುದ್ಧಿಮತ್ತೆ(ಎಐ) ಚಾಲಿತ ರೊಬೋಟ್‌ ಒಂದು ಕೆಲಸದ ಒತ್ತಡದಿಂದ ಆತ್ಮಹತ್ಯೆಗೆ ಶರಣಾಗಿತ್ತು. ಇದರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ